ಮೈಸೂರು ಸಂಸದ ಪ್ರತಾಪ್ ಸಿಂಹ ವಿರುದ್ಧ ಪ್ರಭಾ ದೂರು
ಮೈಸೂರು, ಮಾರ್ಚ್ 23: ತಮ್ಮ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆಂದು ಆರೋಪಿಸಿ, ಸಂಸದ ಪ್ರತಾಪ್ ಸಿಂಹ್ ವಿರುದ್ಧ ಪ್ರಗತಿಪರ ಚಿಂತಕಿ ಪ್ರಭಾ ಬೆಳವಂಗಲ ದೂರು ದಾಖಲಿಸಿದ್ದಾರೆ.
ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ ವಿರುದ್ಧ ಅಶ್ಲೀಲ ಪೋಸ್ಟ್ ಹಾಕಿದ್ದ ಪ್ರಭಾ ವಿರುದ್ಧ ಬಿಜೆಪಿ ಯುವ ಮೋರ್ಚಾ ಬೆಂಗಳೂರು ನಗರ ಪೊಲೀಸ್ ಆಯುಕ್ತ ಪ್ರವೀಣ್ ಸೂದ್ ಅವರಿಗೆ ದೂರು ನೀಡಿತ್ತು. ಆ ವೇಳೆ, ಪ್ರತಾಪ್ ಸಿಂಹ್ ವಿಡಿಯೋ ಒಂದರಲ್ಲಿ ತಮ್ಮನ್ನು ಅವಹೇಳನ ಮಾಡಿದ್ದಾರೆ ಎಂದು ಪ್ರಭಾ ದೂರಿದ್ದಾರೆ.[ಯೋಗಿ ಆದಿತ್ಯನಾಥ್ ಅವಹೇಳನ : ಪ್ರತಾಪ್ ಸಿಂಹ ಆಕ್ರೋಶ]

ಪ್ರಭಾ ವಿರುದ್ಧ ನಾನು 100 ದೂರುಗಳನ್ನು ದಾಖಲಿಸಬಲ್ಲೆ, ಕೆಟ್ಟ ವಿಡಿಯೋ ನೋಡಬೇಕೆಂಬ ಬಯಕೆಯಿದ್ದರೆ ಪ್ರಭಾ ಅವರು ಉತ್ತರ ಪ್ರದೇಶದವರೆಗೂ ಹೋಗುವ ಅವಶ್ಯಕತೆಯಿರಲಿಲ್ಲ, ಬಾಗಲಕೋಟೆಗೆ ಹೋಗಿದ್ದರೆ ಸಾಕಾಗಿತ್ತು ಎಂದು ವಿಡಿಯೋದಲ್ಲಿ ಹೇಳಿದ್ದಾರೆ.
ರಾಜಕಾರಣಿಗಳ ಆಂಟಿ ಚೇಂಬರ್ನಲ್ಲಿ ಏನು ನಡೆಯುತ್ತೆ ಎಂಬುದರ ಬಗ್ಗೆ ಪ್ರಭಾ ಅವರಿಗೆ ಕುತೂಹಲ ಹೆಚ್ಚು ಎಂದು ಅನ್ನಿಸುತ್ತದೆ. ಬಾಗಲಕೋಟೆಗೆ ಹೋಗಿ ಅಲ್ಲಿ ಮೇಟಿ ಅವರ ಚೇಂಬರ್ಗೆ ಹೋಗಿದ್ದರೇ ಲೈವ್ ವಿಡಿಯೋ ನೋಡಬಹುದಿತ್ತು, ಅವರ ಭಾಷೆಯಲ್ಲಿ ಹೇಳಬಹುದಾದರೇ ಮೇಟಿ ಅವರ ಕಚೇರಿಯಲ್ಲೇ ಪ್ರಭಾ ಅನುಭವ ಪಡೆಯಬಹುದಿತ್ತು ಎಂದು, ಪ್ರತಾಪ್ ಸಿಂಹ ವಿಡಿಯೋದಲ್ಲಿ ಹೇಳಿದ್ದಾರೆ ಎನ್ನಲಾಗಿದೆ.
ಪ್ರಭಾ ಬೆಳವಂಗಲ 'ಫೇಸ್ ಬುಕ್'ನಲ್ಲಿ ಹಾಕಿದ್ದ ಪ್ಟ್ ನಕಲಿ ಎಂದು ತಿಳಿದ ಮೇಲೆ ಅದನ್ನು ತೆಗೆದು ಹಾಕಿದ್ದಾರೆ, ಸಂಸದರು ನೂರಲ್ಲ ಸಾವಿರ ದೂರು ದಾಖಲಿಸಲಿ, ಆದರೆ ಒಬ್ಬ ಸಂಸದರಾಗಿದ್ದುಕೊಂಡು ಮಹಿಳೆಯ ಬಗ್ಗೆ ಇಷ್ಟೊಂದು ನಿಕೃಷ್ಟವಾಗಿ ಮಾತನಾಡಬಾರದು ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications