ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಯುವತಿಯರ ಮದುವೆ ವಯಸ್ಸನ್ನು 18 ರಿಂದ 21ಕ್ಕೆ ಹೆಚ್ಚಿಸಲು ಕೇಂದ್ರ ಸಂಪುಟ ಸಮ್ಮತಿ

|
Google Oneindia Kannada News

ನವದೆಹಲಿ, ಡಿಸೆಂಬರ್ 16: ಭಾರತದಲ್ಲಿ ಯುವತಿಯರ ಮದುವೆಗೆ ಕನಿಷ್ಠ ವಯೋಮಿತಿಯನ್ನು 18 ರಿಂದ 21ಕ್ಕೆ ಹೆಚ್ಚಿಸುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಅನುಮತಿ ನೀಡಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಈ ಯೋಜನೆ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಪ್ರಸ್ತಾಪಿಸಿದ ಒಂದು ವರ್ಷದಲ್ಲಿ ಅದನ್ನು ಕಾರ್ಯಗತಗೊಳಿಸುವ ನಿರ್ಧಾರ ತೆಗೆದುಕೊಂಡಂತೆ ಕಾಣುತ್ತಿದೆ.

ಕಳೆದ ವರ್ಷ ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆಯ ದಿನ ಪ್ರಧಾನಮಂತ್ರಿ ನರೇಂದ್ರ ಮೋದಿ ತಮ್ಮ ಭಾಷಣದಲ್ಲಿ ಯುವತಿಯರ ಮದುವೆ ವಯಸ್ಸನ್ನು ಹೆಚ್ಚಿಸಲು ಪ್ರಸ್ತಾಪಿಸಿದ್ದರು. ಕನಿಷ್ಠ ಮಿತಿಯನ್ನು 18 ರಿಂದ 21ಕ್ಕೆ ಏರಿಕೆ ಮಾಡುವ ಕುರಿತು ಉಲ್ಲೇಖಿಸಿದ್ದರು.

2020ರಲ್ಲಿ ಕರ್ನಾಟಕದಲ್ಲಿ ನಡೆದಿದೆ ಅತಿ ಹೆಚ್ಚು ಬಾಲ್ಯ ವಿವಾಹ2020ರಲ್ಲಿ ಕರ್ನಾಟಕದಲ್ಲಿ ನಡೆದಿದೆ ಅತಿ ಹೆಚ್ಚು ಬಾಲ್ಯ ವಿವಾಹ

"ಕೇಂದ್ರ ಸರ್ಕಾರವು ತಮ್ಮ ಸಹೋದರಿಯರು ಹಾಗೂ ಹೆಣ್ಣು ಮಕ್ಕಳ ಆರೋಗ್ಯದ ಬಗ್ಗೆ ಕಾಳಜಿ ಮತ್ತು ಕಳಕಳಿಯನ್ನು ಹೊಂದಿದೆ. ಹೆಣ್ಣು ಮಕ್ಕಳಲ್ಲಿ ಅಪೌಷ್ಠಿಕತೆಯನ್ನು ತಗ್ಗಿಸಲು ಅವರು ಸೂಕ್ತ ವಯಸ್ಸಿನಲ್ಲಿ ಮದುವೆ ಆಗುವುದು ಅತ್ಯಗತ್ಯವಾಗಿರುತ್ತದೆ," ಎಂದು ಪ್ರಧಾನಿ ಮೋದಿ ಹೇಳಿದ್ದರು. ಭಾರತದಲ್ಲಿ ಪ್ರಸ್ತುತ ಪುರುಷರ ಮದುವೆ ವಯೋಮಿತಿ 21 ಹಾಗೂ ಯುವತಿಯರ ಮದುವೆ ವಯೋಮಿತಿ 18 ವರ್ಷ ಆಗಿದೆ.

Proposal to Raise Minimum Age For Marriage Of Women From 18 To 21 cleared by Cabinet

ವಿವಾಹ ಕಾಯ್ದೆಗಳಲ್ಲಿ ತಿದ್ದುಪಡಿ:

ಕೇಂದ್ರ ಸರ್ಕಾರವು ಬಾಲ್ಯವಿವಾಹ ನಿಷೇಧ ಕಾಯಿದೆ, ವಿಶೇಷ ವಿವಾಹ ಕಾಯಿದೆ ಮತ್ತು ಹಿಂದೂ ವಿವಾಹ ಕಾಯಿದೆಗಳಲ್ಲಿ ಬದಲಾವಣೆಗಳನ್ನು ತರಲು ಮುಂದಾಗಿದೆ. ಜಯಾ ಜೇಟ್ಲಿ ನೇತೃತ್ವದಲ್ಲಿ ನೀತಿ ಆಯೋಗದ ಕಾರ್ಯಪಡೆಯು ಈ ಪ್ರಸ್ತಾವನೆ ಹಿಂದೆ ಕೆಲಸ ಮಾಡುತ್ತಿದೆ.

ಮದುವೆ ವಯಸ್ಸನ್ನು ತೀರ್ಮಾನಿಸುವ ಬಗ್ಗೆ ಶಿಫಾರಸ್ಸು ಸಲ್ಲಿಸಲು ಕೇಂದ್ರ ಸರ್ಕಾರವು ವಿಶೇಷ ಕಾರ್ಯಪಡೆಯನ್ನು ರಚಿಸಿದೆ. ನಿಗದಿತ ವಯಸ್ಸಿಗಿಂತಲೂ ಮೊದಲು ಮದುವೆ ಆಗುವುದರಿಂದ ಎದುರಾಗುವ ಸಮಸ್ಯೆಗಳ ಬಗ್ಗೆ ಅಧ್ಯಯನ ನಡೆಸುವುದು. ತಾಯಿ ಮತ್ತು ಮಗುವಿನ ವಯಸ್ಸಿನ ಅಂತರ ಹಾಗೂ ಮರಣ ಪ್ರಮಾಣ ಹೀಗೆ ಎಲ್ಲ ಅಂಶಗಳ ಬಗ್ಗೆ ಕಾರ್ಯಪಡೆಯು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಸಲ್ಲಿಸಿದೆ.

21 ವರ್ಷದ ನಂತರ ಗರ್ಭಧಾರಣೆ ಆರೋಗ್ಯಕರ:

ನೀತಿ ಆಯೋಗದ ಕಾರ್ಯಪಡೆಯು ಸಲ್ಲಿಸಿದ ಶಿಫಾರಸ್ಸಿನಲ್ಲಿ ಯುವತಿಯರ ಮದುವೆ ವಯಸ್ಸನ್ನು ಏಕೆ ಹೆಚ್ಚಿಸಬೇಕು ಎಂಬ ಬಗೆಗೆ ಹಲವು ವಿಷಯಗಳನ್ನು ಉಲ್ಲೇಖಿಸಿದೆ. ಈ ಪೈಕಿ ಮೊದಲ ಬಾರಿ ಮಹಿಳೆಯು ತಮ್ಮ ಎಷ್ಟನೇ ವಯಸ್ಸಿನಲ್ಲಿ ಗರ್ಭ ಧರಿಸುವುದು ಸೂಕ್ತ ಎಂಬುದನ್ನು ತಿಳಿಸಿದೆ. ಮದುವೆಯ ನಂತರ ಮಹಿಳೆಯು ಕನಿಷ್ಠ 21 ವರ್ಷ ಅಥವಾ ಅದರ ನಂತರದಲ್ಲಿ ಗರ್ಭ ಧರಿಸುವುದು ಆರೋಗ್ಯಕರ ಬೆಳವಣಿಗೆ ಆಗಲಿದೆ ಎಂದು ಆಯೋಗದ ಶಿಫಾರಸ್ಸಿನಲ್ಲಿ ತಿಳಿಸಲಾಗಿದೆ.

ಯುವತಿಯರ ಮದುವೆ ವಯಸ್ಸನ್ನು ಹೆಚ್ಚಿಸುವುದು ಆರ್ಥಿಕ ಬೆಳವಣಿಗೆ ನಿಟ್ಟಿನಲ್ಲೂ ಸೂಕ್ತ ನಿರ್ಧಾರವಾಗಲಿದೆ. ಇದರಿಂದ ಮಹಿಳೆಯರು ಸ್ವಾವಲಂಬಿಯಾಗಿ ಆರ್ಥಿಕ ಸಾಮರ್ಥ್ಯವನ್ನು ಹೆಚ್ಚಿಸಿಕೊಳ್ಳಲು ಅವಕಾಶ ಸಿಕ್ಕಂತೆ ಆಗುತ್ತದೆ. ಆ ಕುಟುಂಬದ ಆರ್ಥಿಕ, ಸಾಮಾಜಿಕ ಮತ್ತು ಆರೋಗ್ಯದ ಮೇಲೆ ಪರಿಣಾಮ ಬೀರಲಿದೆ. ಇದರ ಜೊತೆಗೆ ಸಮಾಜ ಹಾಗೂ ಮಕ್ಕಳ ಮೇಲೆಯೂ ಪ್ರಭಾವ ಬೀರಲಿದೆ ಎಂದು ಶಿಫಾರಸ್ಸಿನಲ್ಲಿ ತಿಳಿಸಲಾಗಿದೆ.

ನೀತಿ ಆಯೋಗದ ಕಾರ್ಯಪಡೆಯಲ್ಲಿ ಯಾರಿದ್ದಾರೆ?:
ಸಮತಾ ಪಕ್ಷದ ಮಾಜಿ ಅಧ್ಯಕ್ಷೆ ಜಯಾ ಜೇಟ್ಲಿಯವರು 10 ಸದಸ್ಯರನ್ನೊಳಗೊಂಡ ವಿಶೇಷ ಕಾರ್ಯಪಡೆಯ ನೇತೃತ್ವವನ್ನು ವಹಿಸಿಕೊಂಡಿದ್ದಾರೆ. ನೀತಿ ಆಯೋಗದ ಸದಸ್ಯ ವಿ.ಕೆ.ಪೌಲ್, ಆರೋಗ್ಯ ಕಾರ್ಯದರ್ಶಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಕಾನೂನು ಮತ್ತು ಶಿಕ್ಷಣ ಇಲಾಖೆ ಸದಸ್ಯರನ್ನು ಒಳಗೊಂಡಿರುತ್ತದೆ. ಇದರ ಜೊತೆ ಮೂವರು ಸ್ವತಂತ್ರ ಸದಸ್ಯರಾದ ನವದೆಹಲಿಯ ನಜ್ಮಾ ಅಖ್ತರ್, ಮಹಾರಾಷ್ಟ್ರದ ವಸುಂದರಾ ಕಾಮಂತ್, ಗುಜರಾತ್ ನ ದೀಪ್ತಿ ಶಾ ಎಂಬುವವರು ವಿಶೇಷ ಕಾರ್ಯಪಡೆಯಲ್ಲಿದ್ದಾರೆ.

ಭಾರತದಲ್ಲಿ ಹೆಣ್ಣುಮಕ್ಕಳ ಮದುವೆ ವಯೋಮಿತಿಯನ್ನು 18 ವರ್ಷಕ್ಕೆ ನಿಗದಿಗೊಳಿಸಿದೆ. ಆದರೆ ದೇಶದಲ್ಲಿ ಶೇ.27ರಷ್ಟು ಯುವತಿಯರು 18 ವರ್ಷಕ್ಕಿಂತ ಪೂರ್ವದಲ್ಲೇ ವೈವಾಹಿಕ ಬದುಕಿಗೆ ಕಾಲಿರಿಸುತ್ತಿದ್ದು, ಉನ್ನತ ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಮದುವೆ ವಯೋಮಿತಿಯನ್ನು ಕನಿಷ್ಠ 21 ವರ್ಷಕ್ಕೆ ಹೆಚ್ಚಿಸುವ ಕಟ್ಟುನಿಟ್ಟಿನ ಕಾನೂನು ಜಾರಿಗೊಳಿಸುವ ಅಗತ್ಯವಿದೆ ಎಂದು ಯುನಿಸೆಫ್ ಅಧ್ಯಯನದಿಂದ ತಿಳಿದು ಬಂದಿದೆ.

Recommended Video

ತೆರೆ ಹಿಂದೆ ವಿರಾಟ್ ಮಾಡಿದ್ದನ್ನು ರಿವೀಲ್ ಮಾಡಿದ ಗಂಗೂಲಿ | Oneindia Kannada

English summary
The proposal to raise the minimum age of marriage for women from 18 to 21 was cleared by the Union Cabinet, sources said.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X