• search
 • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪಿಎಸ್‌ಐ ಹಗರಣ: ಬೊಮ್ಮಾಯಿ ರಾಜೀನಾಮೆಗೆ ರಾಹುಲ್‌ ಗಾಂಧಿ ಒತ್ತಾಯ

|
Google Oneindia Kannada News

ನವದೆಹಲಿ,ಜು.5: "ಕರ್ನಾಟಕದ ಪಿಎಸ್‌ಐ ನೇಮಕಾತಿಯಲ್ಲಿ ಭಾರೀ ಹಗರಣ ನಡೆದಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನ್ಯಾಯಯುತ ತನಿಖೆಗೆ ಆದೇಶಿಸಿ ತಾವು ರಾಜೀನಾಮೆ ನೀಡಬೇಕು" ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಆಗ್ರಹಿಸಿದರು.

ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಭ್ರಷ್ಟಾಚಾರಕ್ಕೆ ಸ್ಥಾನವಿಲ್ಲ ಎಂಬ ಅವರ ಪುನರಾವರ್ತಿತ ಹೇಳಿಕೆಗಳ ಬಗ್ಗೆ ವಾಗ್ದಾಳಿ ನಡೆಸಿದ ರಾಹುಲ್‌ ಗಾಂಧಿ "ನಾ ಖಾವೂಂಗಾ, ನಾ ಖಾನೆ ದುಂಗಾ ಎನ್ನುವವರು ಬಸವರಾಜ ಬೊಮ್ಮಾಯಿ ವಿರುದ್ಧ ಏಕೆ ಯಾವುದೇ ಕ್ರಮ ಕೈಗೊಂಡಿಲ್ಲ?" ಎಂದು ಕೇಳಿದರು.

 PSI ನೇಮಕಾತಿ ಹಗರಣ: ಮಾಜಿ ಎಡಿಜಿಪಿ ಅಮೃತ್ ಪೌಲ್ ಬಂಧನಕ್ಕೆ ಏನು ಕಾರಣ? PSI ನೇಮಕಾತಿ ಹಗರಣ: ಮಾಜಿ ಎಡಿಜಿಪಿ ಅಮೃತ್ ಪೌಲ್ ಬಂಧನಕ್ಕೆ ಏನು ಕಾರಣ?

"ಬಿಜೆಪಿಯ ಭ್ರಷ್ಟಾಚಾರ ಮತ್ತು ಉದ್ಯೋಗ ಮಾರಾಟ ಕರ್ನಾಟಕದ ಸಾವಿರಾರು ಯುವಕರ ಕನಸುಗಳನ್ನು ನಾಶಪಡಿಸಿದೆ. ರಾಜ್ಯದಲ್ಲಿ ನಡೆದ ಹಗರಣದ ನ್ಯಾಯಯುತ ತನಿಖೆ ನಡೆಸಲು ಮುಖ್ಯಮಂತ್ರಿಗಳನ್ನು ವಜಾಗೊಳಿಸಬೇಕು. ಈ ವಿಚಾರದಲ್ಲಿ ಪ್ರಧಾನಿ ಏಕೆ ಯಾವುದೇ ಕ್ರಮ ಕೈಗೊಂಡಿಲ್ಲ? ಇದು ಬಿಜೆಪಿ ಸರ್ಕಾರದ ಸಬ್ ಖೇಂಗೆ, ಸಬ್ಕೋ ಖಿಲಾಂಗೆ ಕ್ಷಣವೇ?" ಎಂದು ರಾಹುಲ್ ಗಾಂಧಿ ಪ್ರಶ್ನಿಸಿದರು.

ಕರ್ನಾಟಕದಲ್ಲಿ ಪಿಎಸ್‌ಐ ನೇಮಕಾತಿ ಹಗರಣದ ಬಗ್ಗೆ ಭಾರೀ ಚರ್ಚೆ ನಡೆಯುತ್ತಿದೆ. ಕರ್ನಾಟಕ ಸರ್ಕಾರ ಹಗರಣದ ತನಿಖೆಯನ್ನು ಸಿಐಡಿಗೆ ವಹಿಸಿದೆ. ನೇಮಕಾತಿ ವಿಭಾಗದ ಎಡಿಜಿಪಿಯಾಗಿದ್ದ ಅಮೃತ್ ಪೌಲ್‌ ಅವರನ್ನು ಸಿಐಡಿ ಸೋಮವಾರ ಬಂಧಿಸಿದೆ.

Breaking: ಅಮೃತ್ ಪೌಲ್ ಐಪಿಎಸ್ ಎಡಿಜಿಪಿ ಸ್ಥಾನದಿಂದ ಅಮಾನತುBreaking: ಅಮೃತ್ ಪೌಲ್ ಐಪಿಎಸ್ ಎಡಿಜಿಪಿ ಸ್ಥಾನದಿಂದ ಅಮಾನತು

ಬಿಜೆಪಿಯ ರಾಜಕೀಯ ಯಜಮಾನರ ಸಹಕಾರವಿಲ್ಲದೆ ಏನು ಆಗಲ್ಲ

ಬಿಜೆಪಿಯ ರಾಜಕೀಯ ಯಜಮಾನರ ಸಹಕಾರವಿಲ್ಲದೆ ಏನು ಆಗಲ್ಲ

ಕರ್ನಾಟಕದ ಉಸ್ತುವಾರಿ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೇವಾಲಾ ಬೊಮ್ಮಾಯಿ ವಿರುದ್ಧ ವಾಗ್ದಾಳಿ ನಡೆಸಿದ್ದು, ಪಿಎಸ್ಐ ಹಗರಣದಲ್ಲಿ ಭ್ರಷ್ಟಾಚಾರದ ಪದರಗಳು ಬಯಲಾಗುತ್ತಿದ್ದಂತೆ, ಎರಡು ಪ್ರಶ್ನೆಗಳಿಗೆ ಮಾತ್ರ ಉತ್ತರಿಸಬೇಕಾಗಿದೆ. ಬಿಜೆಪಿಯ ರಾಜಕೀಯ ಯಜಮಾನರ ಸಹಕಾರವಿಲ್ಲದೆ ಪಿಎಸ್ಐ ಹಗರಣ ನಡೆಯಬಹುದೇ? ಹಗರಣ ನಡೆದಾಗ ಗೃಹ ಸಚಿವರಾಗಿದ್ದವರು ಯಾರು? ಉತ್ತರ: ಬಸವರಾಜ ಬೊಮ್ಮಾಯಿ. ಪಿಎಸ್‌ಐ ಹಗರಣದ ಹೊಣೆ ಅಂದಿನ ಗೃಹ ಸಚಿವರಾಗಿದ್ದ ಬಸವರಾಜ ಬೊಮ್ಮಾಯಿ ಕಡಿಮೆ ಏನು ಇಲ್ಲ. ಹೀಗಾಗಿ ಎಡಿಜಿಪಿ ಬಂಧನ ಸಾಕಾಗುವುದಿಲ್ಲ. ಮುಖ್ಯಮಂತ್ರಿ ಬೊಮ್ಮಾಯಿ ರಾಜೀನಾಮೆ ನೀಡಿದಾಗ ಅಥವಾ ವಜಾಗೊಂಡಾಗ ಮಾತ್ರ ನ್ಯಾಯಯುತ ತನಿಖೆ ನಡೆಯುತ್ತದೆ. ಯುವಕರು ನ್ಯಾಯಕ್ಕಾಗಿ ಕಾಯುತ್ತಿದ್ದಾರೆ ಸುರ್ಜೆವಾಲಾ ಹೇಳಿದರು.

ರಾಜ್ಯ ಪೊಲೀಸ್ ವ್ಯವಸ್ಥೆಯಲ್ಲೇ ಐತಿಹಾಸಿಕ ದಿನ

ರಾಜ್ಯ ಪೊಲೀಸ್ ವ್ಯವಸ್ಥೆಯಲ್ಲೇ ಐತಿಹಾಸಿಕ ದಿನ

ಮಾಜಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಸಿಐಡಿ ತನಿಖಾ ತಂಡಕ್ಕೆ ಅಭಿನಂದನೆ ಸಲ್ಲಿಸಿ ಎಡಿಜಿಪಿ ದರ್ಜೆಯ ಉನ್ನತ ಅಧಿಕಾರಿ ಅಮೃತ್‌ ಪಾಲ್‌ ಅಂತಹವರನ್ನು ಬಂಧಿಸಿರುವ ಘಟನೆ ರಾಜ್ಯ ಪೊಲೀಸ್ ವ್ಯವಸ್ಥೆಯಲ್ಲೇ ಐತಿಹಾಸಿಕ ದಿನ ಎಂದು ಕರೆದಿದ್ದಾರೆ. ಕರ್ನಾಟಕ ಸಿಐಡಿ ತಂಡದ ನೇತೃತ್ವ ವಹಿಸಿರುವ ದಕ್ಷ ಅಧಿಕಾರಿ, ಪಿ. ಎಸ್. ಸಂಧು ಎಷ್ಟೇ ರಾಜಕೀಯ ಮತ್ತು ಅಧಿಕಾರಿಶಾಹಿ ಮಟ್ಟದಲ್ಲಿ ಒತ್ತಡ ಎದುರಾದರೂ ಮಣಿಯದೆ ತನಿಖಾ ತಂಡವನ್ನು ಮುನ್ನಡೆಸಿದ್ದಾರೆ. ಅವರಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ. ಪಿಎಸ್ಐ ಕರ್ಮಕಾಂಡದ ತನಿಖೆಯಲ್ಲಿ ಸಿಐಡಿ ಸಾಗಬೇಕಿರುವ ದೂರ ಬಹಳಷ್ಟಿದೆ. ಕೆಳ, ಹಿರಿಯ ಹಂತದ ಅಧಿಕಾರಿಗಳ ಜತೆಗೆ ಸರ್ಕಾರದ ಮಟ್ಟದಲ್ಲಿ ಅತ್ಯಂತ ಪ್ರಭಾವೀ ಸ್ಥಾನಗಳಲ್ಲಿರುವ ಕಿಂಗ್‌ಪಿನ್‌ಗಳನ್ನು ಸಿಐಡಿ ಬಂಧಿಸಬೇಕಿದೆ. ಯಾವುದೇ ಕಾರಣಕ್ಕೂ ತಪ್ಪಿತಸ್ಥ ಪ್ರಭಾವಿಗಳು ತಪ್ಪಿಸಿಕೊಳ್ಳಲು ಬಿಡಬಾರದು.

ಆರಗ ಜ್ಞಾನೇಂದ್ರರನ್ನು ಸಂಪುಟದಿಂದ ಕಿತ್ತುಹಾಕಿ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಪಿಎಸ್‌ಐ ಹಗರದ ಬಗ್ಗೆ ಅಧಿಕಾರಿಗಳನ್ನು ಮಾತ್ರ ಹೊಣೆಮಾಡಿ ಜಾರಿಕೊಳ್ಳುವುದು ಬೇಡ. ಈ ಹಗರಣಕ್ಕೆ ಅಧಿಕಾರಿಗಳಷ್ಟೇ ಗೃಹ ಸಚಿವ ಆರಗ ಜ್ಞಾನೇಂದ್ರ ಅವರೂ ಕಾರಣ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮೊದಲು ಆರಗ ಜ್ಞಾನೇಂದ್ರ ಅವರನ್ನು ಸಂಪುಟದಿಂದ ಕಿತ್ತುಹಾಕಬೇಕು ಎಂದು ಹೇಳಿದ್ದಾರೆ. ಕಪಾಟಿನೊಳಗಿಂದ ಒಂದೊಂದೇ ಅಸ್ತಿಪಂಜರಗಳು ಹೊರಗೆ ಬೀಳುತ್ತಿವೆ. ಪಿಎಸ್‌ಐ ನೇಮಕಾತಿ ಹಗರಣದಲ್ಲಿ ಎಡಿಜಿಪಿ ಅಮೃತಪೌಲ್ ಬಂಧನವೇ ಇದಕ್ಕೆ ಸಾಕ್ಷಿ. ಹಗರಣವೇ ನಡೆದಿಲ್ಲ ಎಂದು ಮೈಮೇಲೆ ಬರುತ್ತಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಗೃಹಸಚಿವ ಆರಗ ಜ್ಞಾನೇಂದ್ರ ಈಗ ಏನು ಹೇಳುತ್ತಾರೆ?" ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಪ್ರಕರಣದಲ್ಲಿ ಹಲವು ಬಿಜೆಪಿ ಸಚಿವರೂ ಭಾಗಿ

ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್‌, ಪೊಲೀಸ್ ಇಲಾಖೆಯನ್ನು ನಿಯಂತ್ರಿಸಲಾಗದ ಗೃಹಸಚಿವ ಆರಗ ಜ್ಞಾನೇಂದ್ರ ಅವರು ಈ ಕೂಡಲೇ ರಾಜೀನಾಮೆ ನೀಡಬೇಕು. ಈ ಪ್ರಕರಣದಲ್ಲಿ ಹಲವು ಬಿಜೆಪಿ ಸಚಿವರೂ ಭಾಗಿಯಾಗಿದ್ದಾರೆ. ಅವರನ್ನು ಈ ಕೂಡಲೇ ಬಂಧಿಸಿ ತನಿಖೆ ನಡೆಸಿದರೆ ಇನ್ನಷ್ಟು ಬೆಚ್ಚಿಬೀಳುವ ಸತ್ಯಗಳು ಹೊರಬೀಳುವುದು ಖಂಡಿತ. ಭ್ರಷ್ಟಾಚಾರದ ಕೂಪವಾಗಿರುವ ಬಿಜೆಪಿ ಸರ್ಕಾರವು ಪೊಲೀಸ್‌ ವ್ಯವಸ್ಥೆಯನ್ನು ತನ್ನ ಹಣದಾಹಕ್ಕೆ ಬಳಸಿಕೊಳ್ಳುತ್ತಿರುವುದು ಈ ಮೂಲಕ ಸ್ಪಷ್ಟವಾಗಿದೆ. ಮುಖ್ಯಮಂತ್ರಿಗಳೇ, ಭ್ರಷ್ಟರನ್ನು ಕಾಪಾಡುವ ಕೆಲಸ ಮಾಡಬೇಡಿ. ಕರ್ನಾಟಕದ ಜನರಿಗೆ ನಿಮ್ಮ ಆಡಳಿತ ವೈಫಲ್ಯ ಹಾಗೂ ಭ್ರಷ್ಟಾಚಾರದ ಪರಿಚಯ ಚೆನ್ನಾಗಿ ಆಗಿದೆ, ನೆನಪಿರಲಿ ಎಂದು ಹೇಳಿದ್ದಾರೆ.

Recommended Video

   Ind vs Eng ಕ್ರೀಡಾಂಗಣದಲ್ಲಿ ಏನಿದು ಆತಂಕಕಾರಿ ಸುದ್ದಿ | *Cricket | OneIndia Kannada
   English summary
   Congress leader Rahul Gandhi alleged huge scam in the PSI recruitment in Karnataka and He demad the Chief Minister Basavaraj Bommai for fair investigation and his regignation.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X