ಪುದುಚೆರಿ: ಎನ್ಡಿಎಗೆ ಅತ್ಯಲ್ಪ ಬಹುಮತ, ಪಕ್ಷೇತರರ ಮೇಲೆ ಕಣ್ಣು?
ಪಂಚರಾಜ್ಯಗಳ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು ಬಹುತೇಕ ರಾಜ್ಯಗಳಲ್ಲಿ ಜನರ ಆದೇಶ ಸ್ಪಷ್ಟವಾಗಿದೆ. ಕೇಂದ್ರಾಡಳಿತ ಪ್ರದೇಶವಾದ ಪುದುಚೆರಿಯಲ್ಲಿಯೂ ಸ್ಪಷ್ಟವಾದ ಜನಾದೇಶವೇ ಬಂದಿದೆಯಾದರೂ ಎನ್ಡಿಎಗೆ ಸಣ್ಣ ಮಟ್ಟಿನ ಬಹುಮತವಷ್ಟೆ ಧಕ್ಕಿದೆ.
ಪುದುಚೆರಿಯ 30 ಕ್ಷೇತ್ರಗಳಿಗೆ ಚುನಾವಣೆ ನಡೆದಿದ್ದು 16 ಕ್ಷೇತ್ರ ಪಡೆದವರು ಸರ್ಕಾರ ರಚಿಸಬಹುದಾಗಿದೆ. ಇಂದು ನಡೆದ ಮತ ಎಣಿಕೆ ಫಲಿತಾಂಶದಂತೆ ಬಿಜೆಪಿಯು 6 ಸ್ಥಾನಗಳಲ್ಲಿ ಗೆದ್ದಿದ್ದರೆ ಬಿಜೆಪಿಯ ಮಿತ್ರ ಪಕ್ಷ ಆಲ್ ಇಂಡಿಯಾ ಎನ್ಆರ್ ಕಾಂಗ್ರೆಸ್ ಪಕ್ಷವು 10 ಸ್ಥಾನಗಳಲ್ಲಿ ಗೆದ್ದಿದೆ.
ಕಾಂಗ್ರೆಸ್ ಪಕ್ಷ ಎರಡು ಸ್ಥಾನದಲ್ಲಿ ಗೆದ್ದಿದ್ದರೆ ಕಾಂಗ್ರೆಸ್ನ ಮಿತ್ರ ಪಕ್ಷ ಡಿಎಂಕೆ 6 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಬಿಜೆಪಿ ಮತ್ತು ಆಲ್ ಇಂಡಿಯಾ ಎನ್ಆರ್ ಕಾಂಗ್ರೆಸ್ ಪಕ್ಷಗಳು ಒಟ್ಟಿಗೆ ಸರ್ಕಾರ ರಚಿಸಲು ಬೇಕಾದಷ್ಟು ಸಂಖ್ಯೆಯನ್ನು ಹೊಂದಿವೆಯಾದರೂ ಇದು ಬಹಳ ಅಲ್ಪ ಬಹುಮತ.

ಪುದುಚೆರಿಯಲ್ಲಿ ಒಟ್ಟು 6 ಸ್ಥಾನಗಳಲ್ಲಿ ಪಕ್ಷೇತರ ಅಭ್ಯರ್ಥಿಗಳು ಜಯಗಳಿಸಿದ್ದು, ಬಿಜೆಪಿ ಮತ್ತು ಆಲ್ ಇಂಡಿಯಾ ಎನ್ಆರ್ ಕಾಂಗ್ರೆಸ್ ಪಕ್ಷವು ಪಕ್ಷೇತರ ಅಭ್ಯರ್ಥಿಗಳನ್ನು ತಮ್ಮೆಡೆಗೆ ಸೆಳೆಯಲು ಮುಂದಾಗುವ ದಟ್ಟ ಸಾಧ್ಯತೆ ಇದೆ.
Recommended Video
ಒಂದೊಮ್ಮೆ ಕಾಂಗ್ರೆಸ್ ಅಥವಾ ಡಿಎಂಕೆ ಪಕ್ಷವು ಬಿಜೆಪಿ ಅಥವಾ ಎಐಎನ್ಆರ್ ಕಾಂಗ್ರೆಸ್ ಪಕ್ಷದಿಂದ ಒಬ್ಬ ಶಾಸಕರನ್ನು ತನ್ನತ್ತ ಸೆಳೆದುಕೊಂಡರು ಬಿಜೆಪಿ ಮತ್ತು ಎಐಎನ್ಆರ್ ಕಾಂಗ್ರೆಸ್ ಪಕ್ಷ ಸರ್ಕಾರ ರಚಿಸುವುದು ಕಷ್ಟವಾಗುವ ಸಾಧ್ಯತೆ ಇದೆ. ಹೀಗಾಗಿ ರಿಸ್ಕ್ ತೆಗೆದುಕೊಳ್ಳುವ ಬದಲಿಗೆ ಕೆಲವು ಪಕ್ಷೇತರ ಅಭ್ಯರ್ಥಿಗಳನ್ನು ತನ್ನತ್ತ ಸೆಳೆಯಲು ಎನ್ಡಿಎ ಯತ್ನಿಸಬಹುದು.
-
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ












Click it and Unblock the Notifications