ಪುದುಚೇರಿ ಚುನಾವಣೆ 2021; ಸಮೀಕ್ಷೆಗಳ ಸಮೀಕ್ಷೆ ಅಂಕಿ-ಸಂಖ್ಯೆಗಳು

ಪುದುಚೇರಿ, ಏಪ್ರಿಲ್ 29; ಪುದುಚೇರಿ ವಿಧಾನಸಭೆ ಚುನಾವಣೆ 2021ರ ಚುನಾವಣೋತ್ತರ ಫಲಿತಾಂಶ ಪ್ರಕಟವಾಗಿದೆ. ಕೇಂದ್ರಾಡಳಿತ ಪ್ರದೇಶದಲ್ಲಿ 30 ವಿಧಾನಸಭಾ ಕ್ಷೇತ್ರಗಳಿದ್ದು, ಯಾವುದೇ ಪಕ್ಷ ಸರ್ಕಾರ ರಚನೆ ಮಾಡಲು ಬೇಕಾದ ಮ್ಯಾಜಿಕ್ ನಂಬರ್ 16. ಚುನಾವಣಾ ಫಲಿತಾಂಶ ಮೇ 2ರ ಭಾನುವಾರ ಪ್ರಕಟವಾಗಲಿದೆ.

ಗುರುವಾರ ವಿವಿಧ ವಾಹಿನಿಗಳು ನಡೆಸಿರುವ ಚುನಾವಣೋತ್ತರ ಸಮೀಕ್ಷೆಯ ವರದಿ ಬಿಡುಗಡೆಯಾಗಿದೆ. ಪುದುಚೇರಿಯಲ್ಲಿ ಎನ್‌ಡಿಯ ಮೈತ್ರಿಕೂಟ ಅಧಿಕಾರ ಹಿಡಿಯಲಿದೆ ಎಂದು ಹಲವಾರು ಸಮೀಕ್ಷೆಗಳು ಹೇಳಿವೆ. ಕಾಂಗ್ರೆಸ್ ಅಧಿಕಾರವನ್ನು ಕಳೆದುಕೊಳ್ಳಲಿದೆ.

ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ ಕೇಂದ್ರಾಡಳಿತ ಪ್ರದೇಶದಲ್ಲಿ ಅಧಿಕಾರದಲ್ಲಿತ್ತು. ಆದರೆ, ಅವಧಿ ಪೂರ್ಣಗೊಳ್ಳುವ ಮುನ್ನವೇ ಶಾಸಕರ ರಾಜೀನಾಮೆಯಿಂದಾಗಿ ಸರ್ಕಾರ ಪತನಗೊಂಡಿತ್ತು. ಬಳಿಕ ಯಾವುದೇ ಪಕ್ಷ ಸರ್ಕಾರ ರಚಿಸಿದ ಕಾರಣ ರಾಷ್ಟ್ರಪತಿ ಆಳ್ವಿಕೆ ಜಾರಿಗೆ ಬಂದಿದೆ.

Puducherry Assembly Election 2021 Poll Of Polls

ಪುದುಚೇರಿ ರಾಜ್ಯದ ಸಮೀಕ್ಷೆಗಳ ಸಮೀಕ್ಷೆಗಳು ಹೇಳುವ ಅಂಕಿ ಸಂಖ್ಯೆಗಳ ವಿವರಗಳು ಇಲ್ಲಿವೆ. ಎಲ್ಲಾ ಸಮೀಕ್ಷೆಗಳ ಪ್ರಕಾರ ಎನ್‌ಡಿಎ ಮೈತ್ರಿಕೂಟ 21 ಸ್ಥಾನಗಳಲ್ಲಿ ಜಯಗಳಿಸುವ ಮೂಲಕ ಅಧಿಕಾರದ ಗದ್ದುಗೆ ಏರಲಿದೆ. ಯುಪಿಎ ಮೈತ್ರಿಕೂಟ 9 ಸ್ಥಾನಗಳಲ್ಲಿ ಜಯಗಳಿಸಲಿದೆ.

ಸಿ-ವೋಟರ್ ಸಮೀಕ್ಷೆ ಪ್ರಕಾರ ಯುಪಿಎ 8, ಎನ್‌ಡಿಎ 22 ಸ್ಥಾನಗಳಲ್ಲಿ ಜಯಗಳಿಸಲಿದೆ. ರಿಪಬ್ಲಿಕ್-ಸಿಎನ್‌ಎಕ್ಸ್ ಯುಪಿಎಗೆ 12, ಎನ್‌ಡಿಎ 18 ಸ್ಥಾನಗಳಲ್ಲಿ ಗೆಲ್ಲಲಿದೆ ಎಂದು ಹೇಳಿದೆ. ಆಕ್ಸಿಸ್ ಮೈ ಇಂಡಿಯಾ ಪ್ರಕಾರ ಯುಪಿಎ 8 ಮತ್ತು ಎನ್‌ಡಿಎ 22 ಸ್ಥಾನಗಳಲ್ಲಿ ಜಯಗಳಿಸಲಿದೆ.

ವಯನಾಡು ಕ್ಷೇತ್ರದ ಸಂಸದರೂ ಆಗಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೇರಳ ಮತ್ತು ಪುದುಚೇರಿಯಲ್ಲಿ ಪಕ್ಷದ ಅಭ್ಯರ್ಥಿಗಳ ಪರವಾಗಿ ಸಾಕಷ್ಟು ಪ್ರಚಾರವನ್ನು ನಡೆಸಿದ್ದರು. ಆದರೆ, ಅದು ಫಲ ನೀಡಿದಂತೆ ಕಾಣುತ್ತಿಲ್ಲ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+