• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಸರ್ಕಾರಕ್ಕೆ ಸಂಕಷ್ಟ: ಪುದುಚೇರಿಯಲ್ಲಿ ಮತ್ತಿಬ್ಬರು ಶಾಸಕರ ರಾಜೀನಾಮೆ!

|
Google Oneindia Kannada News

ಪುದುಚೇರಿ, ಫೆಬ್ರವರಿ.21: ವಿಧಾನಸಭಾ ಚುನಾವಣೆ ಹೊಸ್ತಿಲಿನಲ್ಲೇ ರಾಜ್ಯ ಸರ್ಕಾರಕ್ಕೆ ಸಂಕಷ್ಟ ಎದುರಾಗಿದೆ. ಫೆಬ್ರವರಿ.22ರಂದು ಸಂಜೆ 5 ಗಂಟೆಗೆ ಮುಖ್ಯಮಂತ್ರಿ ನಾರಾಯಣಸಾಮಿ ಅವರಿಗೆ ವಿಶ್ವಾಸ ಮತಯಾಚನೆಗೆ ಆದೇಶಿಸಲಾಗಿದೆ.

ಕಾಂಗ್ರೆಸ್ ಸರ್ಕಾರಕ್ಕೆ ಮತ್ತೊಂದು ಹಿನ್ನಡೆಯಾಗಿದ್ದು, ಮಿತ್ರರಾಷ್ಟ್ರ ಡಿಎಂಕೆಯ ಶಾಸಕರೊಬ್ಬರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಮುಖ್ಯಮಂತ್ರಿಯ ಸಂಸದೀಯ ಕಾರ್ಯದರ್ಶಿ ಕೆ ಲಕ್ಷ್ಮೀನಾರಾಯಣನ್ ರಾಜೀನಾಮೆ ಬೆನ್ನಲ್ಲೇ, ಸೋಮವಾರ ಸರ್ಕಾರವು ತೀವ್ರ ಬಿಕ್ಕಟ್ಟಿಗೆ ಸಿಲುಕಲಿದೆ.

ಫೆಬ್ರವರಿ.25ರಂದು ಪುದುಚೇರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ಫೆಬ್ರವರಿ.25ರಂದು ಪುದುಚೇರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ

ಕಳೆದ 2019ರಲ್ಲಿ ಥತ್ತಂಚವಾಡಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಡಿಎಂಕೆ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಡಿ. ವೆಂಕಟೇಶನ್ ಗೆಲುವು ಸಾಧಿಸಿದ್ದರು. ಫೆಬ್ರವರಿ.21ರಂದು ಸ್ಪೀಕರ್ ವಿ ಪಿ ಶಿವಕೋಲುಂಥು ಅವರಿಗೆ ರಾಜೀನಾಮೆ ಸಲ್ಲಿಸಿದ್ದಾರೆ. ಇದಕ್ಕೂ ಮೊದಲು ಲಕ್ಷ್ಮಿನಾರಾಯಣನ್ ಅವರು ತಮ್ಮ ಸ್ಥಾನಕ್ಕೆ ಭಾನುವಾರ ಮಧ್ಯಾಹ್ನ ರಾಜೀನಾಮೆ ಸಲ್ಲಿಸಿದ್ದಾರೆ.


ಪುದುಚೇರಿಯಲ್ಲಿ ಶಾಸಕರ ಲೆಕ್ಕಾಚಾರ:

ಪುದುಚೇರಿ ಮುಖ್ಯಮಂತ್ರಿ ನಾರಾಯಣಸಾಮಿ ಅವರು ಫೆಬ್ರವರಿ.22ರ ಸಂಜೆ 5 ಗಂಟೆಗೆ ವಿಶ್ವಾಸ ಮತಯಾಚನೆ ನಡೆಸುವಂತೆ ಲೆಫ್ಟಿನೆಂಟ್ ಗವರ್ನರ್ ಡಾ. ತಮಿಳುಸಾಯಿ ಸುಂದರ್ ರಾಜನ್ ಈಗಾಗಲೇ ಆದೇಶಿಸಿದ್ದಾರೆ. ಒಟ್ಟು 27 ಚುನಾಯಿತ ಶಾಸಕರಿದ್ದು, ಮೂವರು ಬಿಜೆಪಿಯ ನಾಮನಿರ್ದೇಶಿತ ಸದಸ್ಯರನ್ನು ಒಳಗೊಂಡಿದ್ದಾರೆ. ಆಡಳಿತ ಪಕ್ಷದ ಒಟ್ಟು ಸದಸ್ಯರ ಸಂಖ್ಯೆಯು 12ಕ್ಕೆ ಇಳಿಕೆಯಾಗಿದ್ದು, ವಿರೋಧ ಪಕ್ಷದಲ್ಲಿಯೇ 14 ಮಂದಿ ಶಾಸಕರಿದ್ದಾರೆ ಎಂದು ತಿಳಿದು ಬಂದಿದೆ.

ವಿಧಾನಸಭೆಯಲ್ಲಿ ಸದಸ್ಯ ಬಲದ ಲೆಕ್ಕಾಚಾರ:

ಕಾಂಗ್ರೆಸ್ ಶಾಸಕ ನೀಡಿದ ರಾಜೀನಾಮೆಯಿಂದ ಚುನಾವಣೆ ಹೊಸ್ತಿಲಿನಲ್ಲೇ ಸರ್ಕಾರಕ್ಕೆ ಮತ್ತೊಂದು ಆಘಾತ ನೀಡಿದಂತಾಗಿದೆ. ಸರ್ಕಾರವು ಅಲ್ಪಮತಕ್ಕೆ ಕುಸಿಯುವ ಆತಂಕ ಎದುರಾಗಿದೆ. 30 ಶಾಸಕ ಸ್ಥಾನ ಬಲವಿರುವ ವಿಧಾನಸಭೆಯಲ್ಲಿ ಕಾಂಗ್ರೆಸ್ 11, ಡಿಎಂಕೆ 3 ಮತ್ತು ಒಬ್ಬ ಪಕ್ಷೇತರ ಶಾಸಕನ ಬೆಂಬಲದಿಂದ ಸರ್ಕಾರ ರಚಿಸಲಾಗಿತ್ತು. ವಿರೋಧ ಪಕ್ಷವಾಗಿ ಎನ್ ಆರ್ ಕಾಂಗ್ರೆಸ್ 7, ಎಐಎಡಿಎಂಕೆ 4 ಮತ್ತು ಬಿಜೆಪಿಯ ಮೂವರು ನಾಮನಿರ್ದೇಶಿತ ಶಾಸಕರಿದ್ದು, 14 ಸದಸ್ಯ ಬಲವನ್ನು ಹೊಂದಿತ್ತು.

English summary
Puducherry: Before Floor Test Two More MLAs Are Resign, Narayanasamy Govt Majority Reduced.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X