ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಯಾವ ರಾಜ್ಯದಲ್ಲಿ ಎಷ್ಟು ಮಕ್ಕಳಿಗೆ ಪೋಲಿಯೋ ಲಸಿಕೆ: ಇಲ್ಲಿದೆ ಮಾಹಿತಿ

|
Google Oneindia Kannada News

ನವದೆಹಲಿ, ಜನವರಿ.31: ದೇಶಾದ್ಯಂತ ರಾಷ್ಟ್ರೀಯ ಪೋಲಿಯೋ ಹನಿ ಅಭಿಯಾನ ನಡೆಸಲಾಗುತ್ತಿದೆ. ಐದು ವರ್ಷದೊಳಗಿನ ಮಕ್ಕಳಿಗೆ ಪೋಲಿಯೋ ಹನಿ ಹಾಕುವುದು ಮತ್ತು ಅದರ ಬಗ್ಗೆ ಜಾಗೃತಿ ಮೂಡಿಸುವುದಕ್ಕೆ ರಾಜ್ಯ ಸರ್ಕಾರಗಳು ಭಿನ್ನ ವಿಭಿನ್ನ ಯೋಜನೆಗಳನ್ನು ಹಾಕಿಕೊಂಡಿವೆ.

ಶನಿವಾರ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ರಾಷ್ಟ್ರೀಯ ಪೋಲಿಯೋ ಹನಿ ಅಭಿಯಾನಕ್ಕೆ ಚಾಲನೆ ನೀಡಿದ್ದರು. ಪ್ರಾಥಮಿಕ ಆರೋಗ್ಯ ಕೇಂದ್ರ, ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ ಹಾಗೂ ಮನೆ ಮನೆಗೆ ತೆರಳಿ ಆರೋಗ್ಯ ಕಾರ್ಯಕರ್ತರು ಪೋಲಿಯೋ ಲಸಿಕೆಯನ್ನು ಹಾಕಲಿದ್ದಾರೆ.

ಪೋಷಕರು ತಮ್ಮ ಮಕ್ಕಳಿಗೆ ಕಡ್ಡಾಯವಾಗಿ ಪೋಲಿಯೋ ಹನಿ ಹಾಕಿಸಿ:ಸುಧಾಕರ್ಪೋಷಕರು ತಮ್ಮ ಮಕ್ಕಳಿಗೆ ಕಡ್ಡಾಯವಾಗಿ ಪೋಲಿಯೋ ಹನಿ ಹಾಕಿಸಿ:ಸುಧಾಕರ್

ಕಳೆದ ಜನವರಿ.17ರಂದೇ ಪೋಲಿಯೋ ಹನಿ ಅಭಿಯಾನ ಆರಂಭಿಸಬೇಕಿತ್ತು. ಆದರೆ ಜನವರಿ.16ರಂದು ಕೊವಿಡ್-19 ಲಸಿಕೆ ಅಭಿಯಾನಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಚಾಲನೆ ನೀಡಿದ ಹಿನ್ನೆಲೆ ಪೋಲಿಯೋ ಹನಿ ಅಭಿಯಾನದ ದಿನಾಂಕವನ್ನು ಜನವರಿ.31ಕ್ಕೆ ಮುಂದೂಡಲಾಗಿತ್ತು. ಜನವರಿ.31ರಿಂದ ಫೆಬ್ರವರಿ.02ರವರೆಗೂ ದೇಶದಲ್ಲಿ ಪೋಲಿಯೋ ಹನಿ ಲಸಿಕೆ ಅಭಿಯಾನ ನಡೆಯಲಿದೆ. ದೇಶದ ಪ್ರಮುಖ ರಾಜ್ಯಗಳಲ್ಲಿ ಪೋಲಿಯೋ ಅಭಿಯಾನಕ್ಕೆ ಯಾವ ರೀತಿ ಯೋಜನೆ ಹಾಕಿಕೊಳ್ಳಲಾಗಿದೆ ಎನ್ನುವುದರ ಕುರಿತು ಒಂದು ವರದಿ ಇಲ್ಲಿದೆ.

ಕರುನಾಡಲ್ಲಿ ಫೋಲಿಯೋ ಹನಿ ಅಭಿಯಾನ ಹೇಗಿದೆ?

ಕರುನಾಡಲ್ಲಿ ಫೋಲಿಯೋ ಹನಿ ಅಭಿಯಾನ ಹೇಗಿದೆ?

ರಾಜ್ಯದಲ್ಲಿ ಐದು ವರ್ಷದೊಳಗಿನ ಮಕ್ಕಳ ಸಂಖ್ಯೆಯು 64 ಲಕ್ಷಕ್ಕೂ ಹೆಚ್ಚಿದೆ. ಈ ಮೊದಲೇ ನೀವು ಪೋಲಿಯೋ ಹನಿ ಹಾಕಿಸಿದ್ದರೂ ಕೂಡಾ, ಇದೀಗ ಮತ್ತೊಮ್ಮೆ ನಿಮ್ಮ ಮಕ್ಕಳಿಗೆ ಪೋಲಿಯೋ ಹಾಕಿಸಿಕೊಳ್ಳಬೇಕು. ಇದರಿಂದ ಮಕ್ಕಳ ಆರೋಗ್ಯದಲ್ಲಿ ಯಾವುದೇ ಅಡ್ಡಪರಿಣಾಮ ಇರುವುದಿಲ್ಲ. ಅಫ್ಘಾನಿಸ್ತಾನ್ ಮತ್ತು ಪಾಕಿಸ್ತಾನ ರಾಷ್ಟ್ರಗಳಲ್ಲಿ ಇಂದಿಗೂ ಅಲ್ಲಿನ ಮಕ್ಕಳಿಗೆ ಪೋಲಿಯೋ ರೋಗಕ್ಕೆ ತುತ್ತಾಗುತ್ತಿದ್ದಾರೆ. ಆದರೆ ಭಾರತದಲ್ಲಿ ಪೋಲಿಯೋ ಹನಿ ಹಾಕಿಸುವುದರಿಂದ 10-11 ವರ್ಷಗಳಿಂದ ಒಂದೇ ಒಂದು ಪೋಲಿಯೋ ಪ್ರಕರಣಗಳು ಪತ್ತೆಯಾಗಿಲ್ಲ. ಅಲ್ಲದೇ ಭಾರತವನ್ನು ಪೋಲಿಯೋ ಮುಕ್ತ ದೇಶ ಎಂದು ಘೋಷಿಸಲಾಗಿದೆ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ.

ತಮಿಳುನಾಡಿನಲ್ಲಿ 70 ಲಕ್ಷಕ್ಕಿಂತ ಹೆಚ್ಚು ಮಕ್ಕಳಿಗೆ ಲಸಿಕೆ

ತಮಿಳುನಾಡಿನಲ್ಲಿ 70 ಲಕ್ಷಕ್ಕಿಂತ ಹೆಚ್ಚು ಮಕ್ಕಳಿಗೆ ಲಸಿಕೆ

ಪಲ್ಸ್ ಪೋಲಿಯೋ ಅಭಿಯಾನದಡಿ ತಮಿಳುನಾಡಿನ 70.26 ಲಕ್ಷ ಮಕ್ಕಳಿಗೆ ಲಸಿಕೆ ಹಾಕಿಸುವ ಗುರಿ ಹೊಂದಲಾಗಿದೆ. ಮೂರು ದಿನಗಳವರೆಗೂ ರಾಜ್ಯದ ಪಲ್ಸ್ ಪೋಲಿಯೋ ಲಸಿಕಾ ಕೇಂದ್ರಗಳಲ್ಲಿ 5 ವರ್ಷದೊಳಗಿನ ಮಕ್ಕಳಿಗೆ ಲಸಿಕೆ ನೀಡಲಾಗುತ್ತದೆ. ಬೆಳಗ್ಗೆ 7 ರಿಂದ ಸಂಜೆ 5 ಗಂಟೆವರೆಗೂ ಪೋಲಿಯೋ ಲಸಿಕೆ ಕೇಂದ್ರಗಳನ್ನು ಕಾರ್ಯ ನಿರ್ವಹಿಸಲಿವೆ ಎಂದು ರಾಜ್ಯ ಆರೋಗ್ಯ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಉತ್ತರ ಪ್ರದೇಶದಲ್ಲಿ 3.40 ಕೋಟಿ ಮಕ್ಕಳಿಗೆ ಲಸಿಕೆ

ಉತ್ತರ ಪ್ರದೇಶದಲ್ಲಿ 3.40 ಕೋಟಿ ಮಕ್ಕಳಿಗೆ ಲಸಿಕೆ

ಉತ್ತರ ಪ್ರದೇಶದ ಲಕ್ನೋದ ಆಸ್ಪತ್ರೆಗಳಲ್ಲಿ ಕೆಲವು ಮಕ್ಕಳಿಗೆ ಲಸಿಕೆ ಹಾಕುವ ಮೂಲಕ ಪಲ್ಸ್ ಪೋಲಿಯೋ ಅಭಿಯಾನಕ್ಕೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಚಾಲನೆ ನೀಡಿದರು. ರಾಜ್ಯದಲ್ಲಿ 1,10 ಲಕ್ಷ ಪೋಲಿಯೋ ಕೇಂದ್ರಗಳನ್ನು ತೆರೆಯಲಾಗಿದ್ದು, ಮನೆ ಮನೆಗೆ ತೆರಳಿ ಲಸಿಕೆ ಹಾಕುವುದಕ್ಕಾಗಿ 69 ಸಾವಿರ ಆರೋಗ್ಯ ಕಾರ್ಯಕರ್ತರನ್ನು ನೇಮಿಸಲಾಗಿದೆ. ಒಟ್ಟು ರಾಜ್ಯದ 3 ಕೋಟಿ 40 ಲಕ್ಷ ಮಕ್ಕಳಿಗೆ ಲಸಿಕೆ ಹಾಕುವ ಗುರಿ ಹೊಂದಲಾಗಿದೆ.

ಐದು ವರ್ಷದೊಳಗಿನ 25 ಲಕ್ಷ ಮಕ್ಕಳಿಗೆ ಲಸಿಕೆ

ಐದು ವರ್ಷದೊಳಗಿನ 25 ಲಕ್ಷ ಮಕ್ಕಳಿಗೆ ಲಸಿಕೆ

ಕೊರೊನಾವೈರಸ್ ಸೋಂಕು ಹರಡುವಿಕೆ ಭೀತಿ ನಡುವೆಯೂ ಪೋಲಿಯೋ ಲಸಿಕೆ ಅಭಿಯಾನವನ್ನು ನಡೆಸಲಾಗುತ್ತಿದೆ. ಮಕ್ಕಳ ಆರೋಗ್ಯ ಭದ್ರತೆ ದೃಷ್ಟಿಯಿಂದ ಎಲ್ಲ ರೀತಿಯ ಕೊವಿಡ್-19 ಶಿಷ್ಟಚಾರವನ್ನು ಪಾಲನೆ ಮಾಡಲಾಗುತ್ತಿದ್ದು, 25 ಲಕ್ಷ ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆಯನ್ನು ಹಾಕುವ ಗುರಿ ಹೊಂದಲಾಗಿದೆ.

ಉತ್ತರಾಖಂಡ್, ಪಶ್ಚಿಮ ಬಂಗಾಳದಲ್ಲಿ ಹೇಗಿದೆ ವ್ಯವಸ್ಥೆ?

ಉತ್ತರಾಖಂಡ್, ಪಶ್ಚಿಮ ಬಂಗಾಳದಲ್ಲಿ ಹೇಗಿದೆ ವ್ಯವಸ್ಥೆ?

ಪಶ್ಚಿಮ ಬಂಗಾಳದಲ್ಲಿ ಐದು ವರ್ಷದೊಳಗಿನ 64,07,930 ಮಕ್ಕಳಿದ್ದು ಎಲ್ಲರಿಗೂ ಪಲ್ಸ್ ಪೋಲಿಯೋ ಲಸಿಕೆ ಹಾಕಿಸುವ ಕುರಿತಂತೆ ರಾಜ್ಯ ಆರೋಗ್ಯ ಇಲಾಖೆಯು ಎಲ್ಲ ರೀತಿಯ ಸಿದ್ಧತೆ ಮಾಡಿಕೊಂಡಿದೆ. ಉತ್ತರಾಖಂಡ್ ನಲ್ಲಿ 39,000 ಮಕ್ಕಳಿಗೆ ಲಸಿಕೆ ಹಾಕುವುದಕ್ಕಾಗಿ 600 ಪೋಲಿಯೋ ಬೂತ್ ಗಳನ್ನು ತೆರೆಯಲಾಗಿದೆ. ಪೋಲಿಯೋ ಲಸಿಕೆ ಕೇಂದ್ರಗಳಲ್ಲಿ ಕೊವಿಡ್-19 ನಿಯಮ ಮತ್ತು ಶಿಷ್ಟಾಚಾರಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದಕ್ಕೆ ಎಲ್ಲ ರಾಜ್ಯ ಸರ್ಕಾರಗಳು ಕ್ರಮ ತೆಗೆದುಕೊಂಡಿವೆ ಎಂದು ತಿಳಿದು ಬಂದಿದೆ.

English summary
Pulse Polio Vaccine 2021 Campaign Kicked Off Across India: Check State-Wise Plan Here.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X