ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬೆಂಗಳೂರು ಹಿಂದಿಕ್ಕಿ ಎರಡನೇ ಕೊರೊನಾ ಪೀಡಿತ ನಗರವೆನಿಸಿಕೊಂಡ ಪುಣೆ

|
Google Oneindia Kannada News

ನವದೆಹಲಿ,ಫೆಬ್ರವರಿ 27:ಬೆಂಗಳೂರನ್ನು ಹಿಂದಿಕ್ಕಿ ಪುಣೆಯು ಎರಡನೇ ಕೊರೊನಾಪೀಡಿತ ನಗರವೆನಿಸಿಕೊಂಡಿದೆ. ಮೊದಲನೆಯ ಸ್ಥಾನದಲ್ಲಿ ದೆಹಲಿ ಇದೆ.

Recommended Video

ಸಿಲಿಕಾನ್ ಸಿಟಿಗೆ ಕೊರೋನಾ ಶಾಕ್..!- ಕೇರಳ- ಮಹಾರಾಷ್ಟ್ರ ದಿಂದ ಬಂದ ವಿದ್ಯಾರ್ಥಿಗಳಲ್ಲಿ ಸೋಂಕು | Oneindia Kannad

ಪುಣೆಯಲ್ಲಿ 4.6 ಲಕ್ಷ ಕೊರೊನಾ ಸೋಂಕಿತರಿದ್ದಾರೆ, ಬೆಂಗಳೂರಿನಲ್ಲಿ 4.4 ಲಕ್ಷ ಕೊರೊನಾ ಸೋಂಕಿದ್ದಾರೆ, ದೆಹಲಿಯಲ್ಲಿ 6.38ಲಕ್ಷಕ್ಕೂ ಅಧಿಕ ಕೊರೊನಾ ಸೋಂಕಿತರಿದ್ದಾರೆ.

ಕಳೆದ ನಾಲ್ಕುದಿನದಿಂದ ಪುಣೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗಿದೆ. ಪ್ರತಿ ನಿತ್ಯ ಒಂದು ಸಾವಿರಕ್ಕಿಂತಲೂ ಅಧಿಕ ಕೊರೊನಾ ಪ್ರಕರಣಗಳು ದಾಖಲಾಗುತ್ತಿವೆ.

 ಬೆಂಗಳೂರಿನಲ್ಲಿ 10 ದಿನದಲ್ಲಿ ಕೊರೊನಾ ಏರಿಕೆ; 9 ಕಂಟೇನ್ಮೆಂಟ್ ಝೋನ್ ಘೋಷಣೆ ಬೆಂಗಳೂರಿನಲ್ಲಿ 10 ದಿನದಲ್ಲಿ ಕೊರೊನಾ ಏರಿಕೆ; 9 ಕಂಟೇನ್ಮೆಂಟ್ ಝೋನ್ ಘೋಷಣೆ

ಪಂಜಾಬ್‌ನಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿದ್ದು,ನಿತ್ಯ 500ಕ್ಕಿಂತಲೂ ಅಧಿಕ ಪ್ರಕರಣಗಳು ಕಂಡುಬರುತ್ತಿವೆ. ಶುಕ್ರವಾರ 622 ಪ್ರಕರಣಗಳು ಪತ್ತೆಯಾಗಿದ್ದವು.

ಶುಕ್ರವಾರ ಒಂದೇ ದಿನ ದೇಶದಲ್ಲಿ 12,771 ಸೋಂಕಿತರು ಗುಣಮುಖರಾಗಿದ್ದು, ಆ ಮೂಲಕ ಒಟ್ಟಾರೆ ಚೇತರಿಕೆ ಪ್ರಮಾಣ 1,07,63,451ಕ್ಕೆ ಏರಿಕೆಯಾಗಿದೆ. ಭಾರತದಕೋವಿಡ್-19 ಚೇತರಿಕೆ ಪ್ರಮಾಣವು ಶೇಕಡಾ 97.17ಕ್ಕೆ ಏರಿಕೆಯಾಗಿದ್ದು, ಇದು ವಿಶ್ವದಲ್ಲೇ ಅತಿ ಹೆಚ್ಚು ಎಂದು ಸಚಿವಾಲಯ ಒತ್ತಿಹೇಳಿದೆ.

6 ರಾಜ್ಯಗಳಲ್ಲಿ ಶೇ.86ರಷ್ಟು ಕೊರೊನಾ ಸೋಂಕಿತರಿದ್ದಾರೆ

6 ರಾಜ್ಯಗಳಲ್ಲಿ ಶೇ.86ರಷ್ಟು ಕೊರೊನಾ ಸೋಂಕಿತರಿದ್ದಾರೆ

ದೇಶದ ಕೆಲ ರಾಜ್ಯಗಳಲ್ಲಿನ ಮಾರಕ ಕೊರೊನಾ ವೈರಸ್ ಆರ್ಭಟ ಮುಂದುವರೆದಿದ್ದು, ದೇಶದ ಒಟ್ಟಾರೆ ಸೋಂಕಿತರ ಪೈಕಿ ಕೇವಲ 6 ರಾಜ್ಯಗಳಲ್ಲಿ ಶೇ.86ರಷ್ಟು ಸೋಂಕಿತರು ಇದ್ದಾರೆ ಎಂಬ ಆಘಾತಕಾರಿ ಮಾಹಿತಿಯನ್ನು ಕೇಂದ್ರ ಆರೋಗ್ಯ ಇಲಾಖೆ ನೀಡಿದೆ. ಇದೇ ಕಾರಣಕ್ಕಾಗಿ ಇಂದು ದೆಹಲಿಯಲ್ಲಿ ಉನ್ನತ ಮಟ್ಟದ ಸಭೆ ಏರ್ಪಡಿಸಲಾಗಿದೆ.
ದೇಶದಲ್ಲಿನ ಎಂಟು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಕೊವಿಡ್ ಹೊಸ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದ್ದು ಇದೇ ಕಾರಣಕ್ಕೆ ಕ್ಯಾಬಿನೆಟ್ ಕಾರ್ಯದರ್ಶಿಗಳ ಉನ್ನತ ಮಟ್ಟದ ಪರಿಶೀಲನಾ ಸಭೆ ನಡೆಸಲಾಗುತ್ತಿದೆ. ದೇಶದಲ್ಲಿ ದಾಖಲಾಗುತ್ತಿರುವ ಹೊಸ ಪ್ರಕರಣಗಳ ಪೈಕಿ ದೇಶದ ಆರು ರಾಜ್ಯಗಳಲ್ಲಿ ಮಾತ್ರವೇ ಶೇಕಡಾ 85.75 ರಷ್ಟು ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಎಲ್ಲೆಲ್ಲಿ ಕೊರೊನಾ ಪ್ರಕರಣಗಳು ಹೆಚ್ಚು

ಎಲ್ಲೆಲ್ಲಿ ಕೊರೊನಾ ಪ್ರಕರಣಗಳು ಹೆಚ್ಚು

ಈ ಪೈಕಿ ತೆಲಂಗಾಣ, ಮಹಾರಾಷ್ಟ್ರ, ಛತ್ತೀಸ್‌ಗಢ, ಮಧ್ಯಪ್ರದೇಶ, ಗುಜರಾತ್, ಪಂಜಾಬ್, ಜಮ್ಮು ಮತ್ತು ಕಾಶ್ಮೀರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಲ್ಲಿ ಕೋವಿಡ್ ಆರ್ಭಟ ಗಣನೀಯವಾಗಿ ಉಲ್ಬಣಗೊಳ್ಳುತ್ತಿವೆ. ಭಾರತದಲ್ಲಿ ಒಟ್ಟು 1,59,590 ಸಕ್ರಿಯ ಪ್ರಕರಣಗಳಿದ್ದು, ಒಟ್ಟು ಸೋಂಕು ಪ್ರಮಾಣ ಶೇ 1.44ಕ್ಕೇರಿದೆ.

ಲಸಿಕೆ ವಿತರಣೆಗೆ ವೇಗ

ಲಸಿಕೆ ವಿತರಣೆಗೆ ವೇಗ

ಇನ್ನು ದೇಶದಲ್ಲಿ ಕೋವಿಡ್ ಲಸಿಕೆ ವಿತರಣೆಯ ವೇಗವನ್ನೂ ಹೆಚ್ಚಳ ಮಾಡಲಾಗಿದ್ದು, ಇಂದು ಬೆಳಿಗ್ಗೆ 7 ಗಂಟೆಯವರೆಗೆ ಒಟ್ಟು 1,42,42,547 ಮಂದಿಗೆ ಲಸಿಕೆ ನೀಡಲಾಗಿದ್ದು, ನಿನ್ನೆ ಒಂದೇ ದಿನ 2,92,312 ಮಂದಿಗೆ ಲಸಿಕೆ ವಿತರಣೆ ಮಾಡಲಾಗಿದೆ. ಮೊದಲ ಡೋಸ್ ನೀಡಲಾದ 66,68,974 ಆರೋಗ್ಯ ಕಾರ್ಯಕರ್ತರು (ಎಚ್‌ಸಿಡಬ್ಲ್ಯು), ಎಚ್‌ಸಿಡಬ್ಲ್ಯೂ ಕಾರ್ಯಕರ್ತರಿಗೆ 24,53,878 ಎರಡನೇ ಡೋಸ್ ಮತ್ತು 51,19,695 ಮುಂಚೂಣಿ ಕಾರ್ಯಕರ್ತರಿಗೆ ಮೊದಲ ಡೋಸ್ ನೀಡಲಾಗಿದೆ. ಮೊದಲ ಡೋಸ್ ಪಡೆದ 28 ದಿನಗಳ ನಂತರ ಪೂರ್ಣಗೊಳಿಸಿದ ಫಲಾನುಭವಿಗಳಿಗೆ ಫೆಬ್ರವರಿ 13 ರಂದು 2ನೇ ಹಂತದ ವ್ಯಾಕ್ಸಿನೇಷನ್ ನೀಡಿಕೆ ಆರಂಭವಾಗಿತ್ತು.

ಮಹಾರಾಷ್ಟ್ರ,ಕೇರಳದಲ್ಲಿ ಹೆಚ್ಚು

ಮಹಾರಾಷ್ಟ್ರ,ಕೇರಳದಲ್ಲಿ ಹೆಚ್ಚು

ಆರು ರಾಜ್ಯಗಳು ಅಂದರೆ ಮಹಾರಾಷ್ಟ್ರ, ಕೇರಳ, ಪಂಜಾಬ್, ಕರ್ನಾಟಕ, ತಮಿಳುನಾಡು ಮತ್ತು ಗುಜರಾತ್ ನಲ್ಲಿ 24 ಗಂಟೆಗಳ ಅವಧಿಯಲ್ಲಿ ಪತ್ತೆಯಾದ ಹೊಸ ಪ್ರಕರಣಗಳ ಸಂಖ್ಯೆ ಹೆಚ್ಚಿವೆ. ಪ್ರಮುಖವಾಗಿ ಮಹಾರಾಷ್ಟ್ರದಲ್ಲಿ ನಿನ್ನೆ ಒಂದೇ ದಿನ 8,333 ಹೊಸ ಸೋಂಕು ಪ್ರಕರಣಗಳು ದಾಖಲಾಗಿವೆ. ಅದರ ನಂತರ ಕೇರಳದಲ್ಲಿ 3,671 ಹೊಸ ಪ್ರಕರಣಗಳು ಮತ್ತು ಪಂಜಾಬ್‌ನಲ್ಲಿ 622 ಹೊಸ ಪ್ರಕರಣಗಳು ದಾಖಲಾಗಿವೆ.

ದೇಶದಲ್ಲಿ ದಾಖಲಾದ ಕೊರೊನಾ ಪ್ರಕರಣಗಳು

ದೇಶದಲ್ಲಿ ದಾಖಲಾದ ಕೊರೊನಾ ಪ್ರಕರಣಗಳು

24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 16,488 ಹೊಸ ಪ್ರಕರಣಗಳು ದಾಖಲಾಗಿದ್ದು. ಈ ಪೈಕಿ ಆರು ರಾಜ್ಯಗಳು ಮತ್ತು 2 ಕೇಂದ್ರಾಡಳಿತ ಪ್ರದೇಶಗಳ ಪಾಲೇ ಶೇ 85.75 ರಷ್ಟಾಗಿವೆ. 8 ರಾಜ್ಯಗಳಲ್ಲಿ ದೈನಂದಿನ ಹೊಸ ಪ್ರಕರಣಗಳ ಸಂಖ್ಯೆ ಮೇಲ್ಮುಖವಾಗಿ ಪಥದಲ್ಲಿ ಸಾಗಿದೆ. ಕಳೆದ ಎರಡು ವಾರಗಳಲ್ಲಿ, ಕೇರಳದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿ ಗರಿಷ್ಠ ಕುಸಿತ ತೋರಿಸಿದ್ದು, ಫೆಬ್ರವರಿ 14 ರಂದು 63,847ರಷ್ಟಿದ್ದ ಸಕ್ರಿಯ ಪ್ರಕರಣಗಳ ಸಂಖ್ಯೆ ಇದೀಗ 51,679 ಕ್ಕೆ ಕುಸಿದಿದೆ. ಮಹಾರಾಷ್ಟ್ರದಲ್ಲಿ ಇದೇ ಅವಧಿಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 34,449 ರಿಂದ ಪ್ರಸ್ತುತ 68,810 ಕ್ಕೆ ಏರಿದೆ.

English summary
India coronavirus numbers, cases explained: The recent surge in coronavirus infections has seen Pune re-emerge as the city with the second highest number of confirmed cases, overtaking Bengaluru, after a gap of nearly four months.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X