ಸಿಗರೇಟ್ ಸೇದಿದ ಸೀತೆ!: ರಾಮಲೀಲಾ ನಾಟಕ ವಿವಾದದಲ್ಲಿ ಪ್ರೊಫೆಸರ್ ಸೇರಿ ಆರು ಮಂದಿ ಬಂಧನ
ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ಪುಣೆ ವಿಶ್ವವಿದ್ಯಾನಿಲಯದ ಪ್ರೊಫೆಸರ್ ಮತ್ತು ಐವರು ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ. ಈ ವಿದ್ಯಾರ್ಥಿಗಳು 'ರಾಮಲೀಲಾ' ವನ್ನು ಆಧಾರಿಸಿದ ನಾಟಕ ಮಾಡುತ್ತಿದ್ದರು. ಇದರ ಭಾಗವಾಗಿದ್ದ ಆರು ಮಂದಿಯನ್ನು ಬಂಧಿಸಲಾಗಿದೆ.
ಈ ನಾಟಕದಲ್ಲಿನ ಆಕ್ಷೇಪಾರ್ಹ ಸಂಭಾಷಣೆಗಳು ಮತ್ತು ದೃಶ್ಯಗಳು ಆರು ಮಂದಿಯ ಬಂಧನಕ್ಕೆ ಕಾರಣವಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ. ನಾಟಕವು 'ರಾಮಲೀಲಾ'ದ ವಿವಿಧ ಪಾತ್ರಗಳನ್ನು ಚಿತ್ರಿಸುವಂತಿತ್ತು. ಜೊತೆಗೆ ಅವರ ಸಂಭಾಷಣೆ ಕೂಡ ಹಾಗೆಯೇ ಇತ್ತು ಎಂದು ಆರೋಪಗಳು ಕೇಳಿ ಬಂದಿವೆ.

ನಾಟಕ ಪ್ರದರ್ಶನದ ವೇಳೆ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್)ಗೆ ಸಂಬಂಧಿಸಿದ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಸದಸ್ಯರು ಮತ್ತು ಪುಣೆ ವಿಶ್ವವಿದ್ಯಾಲಯದ ಲಲಿತ ಕಲಾ ಕೇಂದ್ರದ ವಿದ್ಯಾರ್ಥಿಗಳ ನಡುವೆ ಘರ್ಷಣೆ ಸಂಭವಿಸಿದೆ. ವಿಶ್ವವಿದ್ಯಾನಿಲಯದ ಅಧಿಕೃತ ಪ್ರದರ್ಶನ ಕಲೆ ಕೇಂದ್ರವಾದ ಲಲಿತ ಕಲಾ ಕೇಂದ್ರವು ಶುಕ್ರವಾರ ಸಂಜೆ ಈ ನಾಟಕವನ್ನು ಪ್ರಸ್ತುತ ಪಡಿಸಿತ್ತು. ಇದು ವಿವಾದಕ್ಕೆ ಕಾರಣವಾಗಿದೆ.
ಲಲಿತ ಕಲಾ ಕೇಂದ್ರದ ವಿಭಾಗದ ಮುಖ್ಯಸ್ಥ ಡಾ.ಪ್ರವೀಣ್ ಭೋಲೆ ಮತ್ತು ವಿದ್ಯಾರ್ಥಿಗಳಾದ ಭವೇಶ್ ಪಾಟೀಲ್, ಜಯ್ ಪೆಡ್ನೇಕರ್, ಪ್ರಥಮೇಶ್ ಸಾವಂತ್, ರಿಷಿಕೇಶ್ ದಳವಿ ಮತ್ತು ಯಶ್ ಚಿಖ್ಲೆ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ನಂತರ ಬಿಡುಗಡೆ ಮಾಡಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಎಬಿವಿಪಿ ಕಾರ್ಯಕರ್ತ ಹರ್ಷವರ್ಧನ್ ಹರ್ಪುಡೆ ಅವರು ನೀಡಿದ ದೂರಿನ ಮೇರೆಗೆ 295 (ಎ) (ಯಾವುದೇ ವರ್ಗದ ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಉದ್ದೇಶಪೂರ್ವಕ ಮತ್ತು ದುರುದ್ದೇಶಪೂರಿತ ಉದ್ದೇಶ) ಮತ್ತು ಭಾರತೀಯ ದಂಡ ಸಂಹಿತೆಯ ಇತರ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಚತುರ್ಶೃಂಗಿ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಅಂಕುಶ್ ಚಿಂತಾಮನ್ ತಿಳಿಸಿದ್ದಾರೆ.
ಎಫ್‌ಐಆರ್‌ನಲ್ಲಿ ಒದಗಿಸಲಾದ ಆರಂಭಿಕ ಮಾಹಿತಿಯ ಪ್ರಕಾರ, ನಾಟಕದಲ್ಲಿ ಸೀತಾಮಾತೆ ಸಿಗರೇಟ್ ಸೇದುವುದು ಮತ್ತು ಆಕ್ಷೇಪಾರ್ಹ ಭಾಷೆಯನ್ನಮು ಬಳಸಿ ಇತರರಿಗೆ ಬೈಯುವುದು ಇತ್ತು. ಸೀತೆಯ ಪಾತ್ರವನ್ನು ಯುವಕನೊಬ್ಬ ನಟಿಸುತ್ತಿದ್ದು, ಸಿಗರೇಟ್ ಸೇದುವ ದೃಶ್ಯ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.
Radical Hindu Protests against Drama in #Pune University Drama
— Crime Reports India (@AsianDigest) February 2, 2024
pic.twitter.com/51TmY3RGUD
ಪ್ರದರ್ಶನದ ವೇಳೆ ಎಬಿವಿಪಿ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದ್ದರಿಂದ ನಾಟಕವನ್ನು ನಿಲ್ಲಿಸಲಾಯಿತು ಎಂದು ಎಫ್‌ಐಆರ್ ವರದಿ ಮಾಡಿದೆ. ಈ ಮಧ್ಯೆ, ಘರ್ಷಣೆ ನಡೆದು, ಕಲಾವಿದರು ಎಬಿವಿಪಿ ಸದಸ್ಯರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಅವರ ವಿರುದ್ಧವೂ ದೂರು ದಾಖಲಾಗಿದೆ. ಭಾರತೀಯ ಜನತಾ ಪಕ್ಷದ (ಬಿಜೆಪಿ) ಯುವ ಘಟಕವಾದ ಭಾರತೀಯ ಜನತಾ ಯುವ ಮೋರ್ಚಾ (ಬಿಜೆವೈಎಂ) ಗೆ ಸಂಬಂಧಿಸಿದ ಸದಸ್ಯರು ಕಲಾವಿದರ ಮೇಲೆ ಮಸಿ ಎರಚಿದರು ಮತ್ತು ಲಲಿತ ಕಲಾ ಕೇಂದ್ರದಲ್ಲಿ ಬೋರ್ಡ್ ಅನ್ನು ಧ್ವಂಸಗೊಳಿಸಿದ್ದಾರೆ ಎಂದು ವರದಿಯಾಗಿದೆ.
ಹೇಳಿಕೆಯೊಂದರಲ್ಲಿ, ಸಾವಿತ್ರಿಬಾಯಿ ಫುಲೆ ಪುಣೆ ವಿಶ್ವವಿದ್ಯಾಲಯ (SPPU) ಆಡಳಿತವು ರಾಮಾಯಣದ ಪಾತ್ರಗಳ ಅಪಹಾಸ್ಯವನ್ನು ಬೆಂಬಲಿಸುವುದಿಲ್ಲ ಮತ್ತು ಜನರ ಭಾವನೆಗಳಿಗೆ ನೋವಾಗಿದ್ದರೆ ಕ್ಷಮೆಯಾಚಿಸುವುದಾಗಿ ಹೇಳಿದೆ. ಘಟನೆಯ ಕುರಿತು ತನಿಖೆ ನಡೆಸಲು ನಿವೃತ್ತ ಜಿಲ್ಲಾ ನ್ಯಾಯಾಧೀಶರ ನೇತೃತ್ವದಲ್ಲಿ ಎಸ್‌ಪಿಪಿಯು 'ಸತ್ಯಶೋಧನಾ ಸಮಿತಿ'ಯನ್ನು ರಚಿಸಿದೆ ಮತ್ತು ಅದರ ವರದಿ ಬಂದ ನಂತರ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿಕೆಯಲ್ಲಿ ಸೇರಿಸಲಾಗಿದೆ.
-
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ












Click it and Unblock the Notifications