Parkash Singh Badal: ಪಂಜಾಬ್ ಮಾಜಿ ಸಿಎಂ ಪ್ರಕಾಶ್ ಸಿಂಗ್ ಬಾದಲ್ ನಿಧನ, ಗಣ್ಯರ ಸಂತಾಪ
ನವದೆಹಲಿ, ಏಪ್ರಿಲ್ 25: ಉತ್ತರ ಭಾರತದ ಪ್ರಮುಖ ರಾಜ್ಯಗಳಲ್ಲಿ ಒಂದಾಗಿರುವ ಪಂಜಾಬ್‌ನಲ್ಲಿ ಐದು ಬಾರಿ ಮುಖ್ಯಮಂತ್ರಿಯಾಗಿ ಆಡಳಿತ ನೀಡಿದ್ದ ಮಾಜಿ ಸಿಎಂ ಹಾಗೂ ಅಕಾಲಿದಳದ ಮುಖ್ಯಸ್ಥ ಪ್ರಕಾಶ್ ಸಿಂಗ್ ಬಾದಲ್ (95) ಅವರು ಮಂಗಳವಾರ ನಿಧನರಾದರು.
Extremely saddened by the passing away of Shri Parkash Singh Badal Ji. He was a colossal figure of Indian politics, and a remarkable statesman who contributed greatly to our nation. He worked tirelessly for the progress of Punjab and anchored the state through critical times. pic.twitter.com/scx2K7KMCq
— Narendra Modi (@narendramodi) April 25, 2023
ವಯೋಸಹಜ ಕಾಯಿಲೆಗೆ ತುತ್ತಾಗಿದ್ದ ಮಾಜಿ ಮುಖ್ಯಮಂತ್ರಿ ಪ್ರಕಾಶ್ ಸಿಂಗ್ ಬಾದಲ್ ಅವರಿಗೆ ಉಸಿರಾಟ ತೊಂದರೆ ಕಾಣಿಸಿಕೊಂಡಿತ್ತು. ಈ ಕಾರಣದಿಂದ ವಾರದ ಹಿಂದೆ ಅವರನ್ನು ಮೊಹಾಲಿಯ ಫೋರ್ಟಿಸ್ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ರಾತ್ರಿ 8 ಗಂಟೆ ಸುಮಾರಿಗೆ ಮೃತಪಟ್ಟರು ಎಂದು ಮೃತರ ಪುತ್ರ ಹಾಗೂ ಪಕ್ಷದ ಅಧ್ಯಕ್ಷ ಸುಖಬೀರ್ ಸಿಂಗ್ ಬಾದಲ್ ಅವರ ಆಪ್ತ ಸಹಾಯಕರಿಗೆ ಆಸ್ಪತ್ರೆಯ ನಿರ್ದೇಶಕ ಅಭಿಜೀತ್ ಸಿಂಗ್ ಮಾಹಿತಿ ನೀಡಿದರು.
ಪ್ರಕಾಶ್ ಸಿಂಗ್ ಬಾದಲ್ ಅವರು ಪಂಜಾಬ್ ರಾಜ್ಯದಲ್ಲಿ ಅತ್ಯಂತ ಕಡಿಮೆ ವಯಸ್ಸಿನಲ್ಲೇ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದರು. ಆಗ ಅವರಿಗೆ 43 ವರ್ಷ ವಯಸ್ಸಾಗಿದ್ದರಿಂದ ಅವರು ಅತ್ಯಂತ ಕಿರಿಯ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದರು.
ಪ್ರಧಾನಿ ಮೋದಿ ಸಂತಾಪ
ಪಂಜಾಬ್ ಮಾಜಿ ಸಿಎಂ ನಿಧನಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಗೌರವ ಸಲ್ಲಿಸಿದರು. ಭಾರತದ ರಾಜಕೀಯ ರಂಗ ಒಬ್ಬ ಬೃಹತ್ ವ್ಯಕ್ತಿ, ಉತ್ತಮ ರಾಜಕಾರಣಿಯನ್ನು ಕಳೆದುಕೊಂಡಿದೆ ಎಂದು ಸಂತಾಪ ವ್ಯಕ್ತಪಡಿಸಿದರು.

ಪ್ರಕಾಶ್ ಸಿಂಗ್ ಬಾದಲ್ ಅವರ ನಿಧನ ತುಂಬಾ ದುಃಖ ತಂದಿದೆ. ಭಾರತೀಯ ರಾಜಕೀಯಕ್ಕೆ, ರಾಷ್ಟ್ರಕ್ಕೆ ಮಹತ್ತರವಾದ ಕೊಡುಗೆ ನೀಡಿದವರು ಮತ್ತು ರಾಜನೀತಿಜ್ಞರು ಆಗಿ ಗುರುತಿಸಿಕೊಂಡಿದ್ದರು. ಪಂಜಾಬ್ ರಾಜ್ಯದ ಪ್ರಗತಿಗಾಗಿ ದಣಿವರಿಯಿಲ್ಲದೆ ಶ್ರಮಿಸಿದ್ದರು ಎಂದ ಪ್ರಧಾನಿ ಮೋದಿ ಪ್ರಕಾಶ್ ಸಿಂಗ್ ಬಾದ್ ಅವರೊಂದಿಗೆ ಫೋಟೊವನ್ನು ಟ್ವೀಟ್ ಮಾಡಿದ್ದಾರೆ.
ಪ್ರಧಾನಿ ಜೊತೆಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಹಿರಿಯ ನಾಯಕನ ಸಾವಿನಿಂದ ಅಪಾರ ನಷ್ಟವಾಗಿದೆ ಎಂದು ಟ್ವೀಟ್ ಮೂಲಕ ಅವರು ಸಂತಾಪ ಸೂಚಿಸಿದ್ದಾರೆ. ಪ್ರಕಾಶ್ ಸಿಂಗ್ ಬಾದಲ್ ಅವರು ಪಂಜಾಬ್‌ನ ಅಬುಲ್ ಖುರಾನಾದಲ್ಲಿ ರಾಜಸ್ಥಾನದ ಗಡಿಗೆ ಸಮೀಪದಲ್ಲಿ ಜನಿಸಿದರು. ಲಾಹೋರ್‌ನ ಫಾರ್ಮನ್ ಕ್ರಿಶ್ಚಿಯನ್ ಕಾಲೇಜಿನಲ್ಲಿ ವ್ಯಾಸಂಗ ಮಾಡಿ ಪದವಿ ಪಡೆದರು ಎಂದು ಅವರು ತಿಳಿಸಿದ್ದಾರೆ.












Click it and Unblock the Notifications