ಪಂಜಾಬ್: ಮನೆಗೊಂದು ನೌಕರಿ, ಬಿಜೆಪಿ ಪ್ರಣಾಳಿಕೆಯ ಹೈಲೈಟ್

Subscribe to Oneindia Kannada

ಬೆಂಗಳೂರು, ಜನವರಿ 22: ಪಿಎಚ್ಡಿವರೆಗೆ ಬಡ ವಿದ್ಯಾರ್ಥಿನಿಯರಿಗೆ ಉಚಿತ ಶಿಕ್ಷಣ, ಮನೆಗೊಂದು ನೌಕರಿ.. ಇವು ಪಂಜಾಬ್ ಚುನಾವಣೆಗೆ ಪೂರ್ವಭಾವಿಯಾಗಿ ಬಿಜೆಪಿ ಬಿಡುಗಡೆ ಮಾಡಿದ ಪ್ರಣಾಳಿಕೆಯ ಹೈಲೈಟ್ಸ್.

ಇಂದು ಪಂಜಾಬಿನ ಜಲಂಧರ್ ನಲ್ಲಿ ಕೇಂದ್ರ ಹಣಕಾಸು ಮಂತ್ರಿ ಅರುಣ್ ಜೇತ್ಲೀ ಬಿಜೆಪಿ ಪ್ರಣಾಳಿಕೆ ಬಿಡುಗಡೆ ಮಾಡಿದರು. ಈ ಸಂದರ್ಭ ಮಾತನಾಡಿದ ಅವರು, "ಅಲಕಾಲಿದಳದ ಜತೆಗಿನ ಬಿಜೆಪಿ ಮೈತ್ರಿ ಮುಂದುವರಿಯಲಿದೆ. ಮತ್ತೊಂದು ಬಾರಿ ಅವಕಾಶ ನೀಡಿದರೆ ಈಗಿನಂತೆಯೇ ಅಭಿವೃದ್ಧಿ ಚಟುವಟಿಕೆಗಳನ್ನು ಮುಂದುವರಿಸಲಾಗುವುದು," ಎಂದು ತಿಳಿಸಿದರು.

 Punjab: Free education till PhD for weaker section girls, BJP's manifesto promises

ಬಿಜೆಪಿ ಅಧಿಕಾರಕ್ಕೆ ಬಂದರೆ ಬಡ ಕುಟುಂಬದ ಹೆಣ್ಣು ಮಕ್ಕಳಿಗೆ ಪಿಎಚ್ಡಿ ವರೆಗೆ ಉಚಿತ ಶಿಕ್ಷಣ ನೀಡಲಾಗುವುದು, ಪ್ರತಿ ಮನೆಯವರಿಗೂ ನೌಕರಿ ನೀಡಲಾಗುವುದು ಎಂದು ಬಿಜೆಪಿ ಪ್ರಣಾಳಿಕೆಯಲ್ಲಿ ಹೇಳಲಾಗಿದೆ.

ಇದೇ ವೇಳೆ ಪಂಜಾಬಿನಲ್ಲಿ ಮಾತನಾಡಿರುವ ಕಾಂಗ್ರೆಸ್ ನಾಯಕ ಅಮರಿಂದರ್ ಸಿಂಗ್ ಅಧಿಕಾರಕ್ಕೆ ಬಂದರೆ, ಹಿರಿಯ ನಾಗರಿಕರು, ಮಾಜಿ ಸೈನಿಕರು ಮತ್ತು ವಿದ್ಯಾರ್ಥಿಗಳಿಗೆ ರಾಜ್ಯ ಸಾರಿಗೆ ಸಂಸ್ಥೆಯ ಬಸ್ಸುಗಳಲ್ಲಿ ಉಚಿತ ಪಾಸುಗಳನ್ನು ನೀಡಲಾಗುವುದು ಎಂದು ತಿಳಿಸಿದರು.

ಚುನಾವಣೆ ಸಮೀಪಿಸುತ್ತಿದ್ದು ಎಲ್ಲಾ ಪಕ್ಷಗಳು ಮತದಾರರಿಗೆ ವಿವಿಧ ಆಮಿಷಗಳನ್ನು ತೋರಿಸುತ್ತಿದ್ದು. ಪ್ರಣಾಳಿಕೆಗಳಲ್ಲಿಯೂ ಇದೇ ಆಂಇಷಗಳನ್ನು ಮುಂದುವರಿಸಲಾಗಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Finance Minister Arun Jaitley releases BJP's manifesto for Punjab elections in Jalandhar.
Please Wait while comments are loading...