ಪಠಾಣ್‌ಕೋಟ್‌ನಲ್ಲಿ ಐಎಸ್‌ಐ ಏಜೆಂಟ್‌ ಬಂಧನ

By: ವಿಕಾಸ್ ನಂಜಪ್ಪ
Subscribe to Oneindia Kannada

ಬೆಂಗಳೂರು, ಫೆಬ್ರವರಿ 02 : ಪಂಜಾಬ್ ಪೊಲೀಸರು ಪಠಾಣ್ ಕೋಟ್‌ನಲ್ಲಿ ಐಎಸ್‌ಐ ಏಜೆಂಟ್‌ನೊಬ್ಬನನ್ನು ಬಂಧಿಸಿದ್ದಾರೆ. ಬಂಧಿತ ವ್ಯಕ್ತಿಯಿಂದ ಪಠಾಣ್ ಕೋಟ್ ಸುತ್ತಮುತ್ತಲಿನ ಸೂಕ್ಷ್ಮ ಪ್ರದೇಶಗಳ ಚಿತ್ರಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.

ಬಂಧಿತ ವ್ಯಕ್ತಿಯನ್ನು ಇರ್ಷಾದ್ ಅಹಮದ್ ಎಂದು ಗುರುತಿಸಲಾಗಿದೆ. ಇರ್ಷಾದ್ ಪಠಾಣ್‌ ಕೋಟ್‌ನಲ್ಲಿನ ಆರ್ಮಿ ಕ್ಯಾಂಟೀನ್‌ನಲ್ಲಿ ಕೆಲಸ ಮಾಡುತ್ತಿದ್ದ. ಮಂಗಳವಾರ ಬೆಳಗ್ಗೆ ಆತನನ್ನು ಬಂಧಿಸಲಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ. ಕೇಂದ್ರ ಗುಪ್ತಚರ ಇಲಾಖೆಯ ಮಾಹಿತಿಯ ಆಧಾರದ ಮೇಲೆ ಇರ್ಷಾದ್‌ ಬಂಧಿಸಲಾಗಿದೆ. [ಪಠಾಣ್ ಕೋಟ್ ಉಗ್ರರ ದಾಳಿ : ಟೈಮ್ ಲೈನ್]

pathankot

ಇರ್ಷಾದ್ ಪಾಕಿಸ್ತಾನದ ಬೇಹುಗಾರಿಕಾ ಸಂಸ್ಥೆ ಐಎಸ್ಐ ಪರವಾಗಿ ಕೆಲಸ ಮಾಡುತ್ತಿದ್ದ ಎಂದು ಶಂಕಿಸಲಾಗಿದೆ. ಇರ್ಷಾದ್ ಮೊಬೈಲ್‌ನಲ್ಲಿ ಪಠಾಣ್ ಕೋಟ್‌ನಲ್ಲಿನ ಸೂಕ್ಷ್ಮ ಪ್ರದೇಶಗಳ ಚಿತ್ರಗಳು ಪತ್ತೆಯಾಗಿವೆ ಎಂದು ಪೊಲೀಸರು ಹೇಳಿದ್ದಾರೆ. [ಪಠಾಣ್ ಕೋಟ್ ದಾಳಿ : ಸಲ್ವಿಂದರ್ ಸಿಂಗ್ ಆರೋಪಿ?]

ಇರ್ಷಾದ್ ತಾನು ತೆಗೆದ ಫೋಟೋಗಳನ್ನು ಜಮ್ಮು ಮತ್ತು ಕಾಶ್ಮೀರದಲ್ಲಿದ್ದ ಸಾಜಿದ್‌ಗೆ ಕಳುಹಿಸುತ್ತಿದ್ದ ಎಂದು ತಿಳಿದುಬಂದಿದೆ. ಕೆಲವು ದಿನಗಳ ಹಿಂದೆ ಕಾಶ್ಮೀರದಲ್ಲಿ ಸಾಜಿದ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸರು ಇರ್ಷಾದ್‌ನ ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ. [ಪಠಾಣ್ ಕೋಟ್ ವಾಯುನೆಲೆ ವಿಶೇಷತೆಗಳು]

ಜನವರಿ ಮೊದಲ ವಾರದಲ್ಲಿ ಪಠಾಣ್ ಕೋಟ್ ವಾಯುನೆಲೆ ಮೇಲೆ ಉಗ್ರರ ದಾಳಿ ನಡೆದ ಬಳಿಕ, ಪಠಾಣ್‌ ಕೋಟ್‌ನಲ್ಲಿ ಹೈಅಲರ್ಟ್ ಘೋಷಣೆ ಮಾಡಲಾಗಿದೆ. ಭಾರತ-ಪಾಕ್ ಗಡಿಗೆ ಹೊಂದಿಕೊಂಡಿರುವ ಪ್ರದೇಶದಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ - ನೋಂದಣಿ ಉಚಿತ!

English summary
The Punjab is investigating a man detained in Pathankot after sensitive information had been found on him. Irshad Ahmed was detained following an Intelligence Bureau tip off. He was working undercover as a labour in Pathankot.
Please Wait while comments are loading...