Punjab: ಅಮೃತಪಾಲ್ ಸಿಂಗ್ ವಿರುದ್ಧ ಖಾಕಿ ಕಠಿಣ ಕ್ರಮ: 6 ಸಹಚರರ ಬಂಧನ- ಹಲವೆಡೆ Internet ಸ್ಥಗಿತ
ಪಂಜಾಬ್ ಪೊಲೀಸರು ಸ್ವಯಂಘೋಷಿತ ಉಗ್ರಗಾಮಿ ಸಿಖ್ ಧರ್ಮ ಪ್ರಚಾರಕ ಮತ್ತು ಖಲಿಸ್ತಾನ್ ಪರ ಸಹಾನುಭೂತಿ ಹೊಂದಿದ್ದ ಅಮೃತಪಾಲ್ ಸಿಂಗ್‌ನನ್ನು ಬಂಧಿಸಿದ್ದಾರೆ.
ಸ್ವಯಂ-ಘೋಷಿತ ಸಿಖ್ ಬೋಧಕ ಅಮೃತಪಾಲ್ ಸಿಂಗ್‌ನನ್ನು ಶನಿವಾರ ಪೊಲೀಸರು ಬಂಧಿಸಿದ್ದಾರೆ. ಜೊತೆಗೆ ಅಮೃತಪಾಲ್ ಅವರ 6 ಸಹಚರರನ್ನು ಪೊಲೀಸರು ಬಂಧಿಸಿದ್ದಾರೆ. ಜೊತೆಗೆ ಹಲವು ಜಿಲ್ಲೆಗಳಲ್ಲಿ ಇಂಟರ್ನೆಟ್ ಸ್ಥಗಿತಗೊಳಿಸಲಾಗಿದೆ.
ಪಂಜಾಬ್ ಪೊಲೀಸರು ಸ್ವಯಂಘೋಷಿತ ಉಗ್ರಗಾಮಿ ಸಿಖ್ ಧರ್ಮ ಪ್ರಚಾರಕ ಮತ್ತು ಖಲಿಸ್ತಾನ್ ಪರ ಸಹಾನುಭೂತಿ ಹೊಂದಿದ್ದ ಅಮೃತಪಾಲ್ ಸಿಂಗ್ ವಿರುದ್ಧ ನಿರಂತರವಾಗಿ ಕುಣಿಕೆ ಬಿಗಿಗೊಳಿಸುತ್ತಿದ್ದಾರೆ. ಖಲಿಸ್ತಾನಿ ಬೆಂಬಲಿಗ ಅಮೃತಪಾಲ್ ಮತ್ತು ಆತನ ಸಹಚರರ ವಿರುದ್ಧ ಕ್ರಮ ಆರಂಭಿಸಿದ ಪೊಲೀಸರು 6 ಜನರನ್ನು ಬಂಧಿಸಿದ್ದಾರೆ. ಅಮೃತಪಾಲ್ ಸಿಂಗ್ ವಿರುದ್ಧ ತೆಗೆದುಕೊಳ್ಳುತ್ತಿರುವ ಕ್ರಮದ ಗಂಭೀರತೆಯನ್ನು ಗಮನದಲ್ಲಿಟ್ಟುಕೊಂಡು ಪೊಲೀಸರು ಹಲವು ಪ್ರದೇಶಗಳಲ್ಲಿ ಇಂಟರ್ನೆಟ್ ಸೇವೆಯನ್ನು ಸಹ ನಿಲ್ಲಿಸಿದ್ದಾರೆ.

ಅಮೃತಸರದ ಅಜ್ನಾಲಾ ಪೊಲೀಸ್ ಠಾಣೆಯ ಹೊರಗೆ ಇತ್ತೀಚೆಗೆ ನಡೆದ ಹಿಂಸಾಚಾರದ ನಂತರ ಅಮೃತಪಾಲ್ ಸಿಂಗ್ ನನ್ನು ಬಂಧಿಸಲಾಗಿದೆ.
ಜಲಂಧರ್‌ನ ಮೈಹತ್‌ಪುರದಲ್ಲಿ 6 ಮಂದಿ ಸಹಚರ ಬಂಧನ
ಶನಿವಾರದ ಪ್ರಮುಖ ಕಾರ್ಯಾಚರಣೆಯಲ್ಲಿ, ಅಜ್ನಾಲಾ ಪೊಲೀಸ್ ಠಾಣೆ ಮೇಲಿನ ದಾಳಿಗೆ ಸಂಬಂಧಿಸಿದಂತೆ ಖಲಿಸ್ತಾನ್ ಪರ ವಾರಿಸ್ ಪಂಜಾಬ್ ಡಿ ಮುಖ್ಯಸ್ಥ ಅಮೃತಪಾಲ್ ಸಿಂಗ್ ಅವರ ಆರು ಸಹಚರರನ್ನು ಬಂಧಿಸುವಲ್ಲಿ ಪಂಜಾಬ್ ಪೊಲೀಸರು ಯಶಸ್ವಿಯಾಗಿದ್ದಾರೆ. ಜಲಂಧರ್‌ನ ಮೆಹತ್‌ಪುರ ಪ್ರದೇಶದಲ್ಲಿ ಅಮೃತಪಾಲ್‌ನ ಸಹಚರರನ್ನು ಪೊಲೀಸರು ಬಂಧಿಸಿದ್ದಾರೆ.

ಅಮೃತಪಾಲ್ ಸಿಂಗ್ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿ
ಮಾಧ್ಯಮ ವರದಿಗಳ ಪ್ರಕಾರ, ಅಮೃತಪಾಲ್ ಸಿಂಗ್ ಬೆಂಗಾವಲು ಪಡೆಯ ಎರಡು ಮೂರು ವಾಹನಗಳು ಪೊಲೀಸರಿಗೆ ಸಿಕ್ಕಿಬಿದ್ದಿವೆ. ಆದರೆ ಅಮೃತಪಾಲ್ ಸಿಂಗ್ ಮೂರನೇ ವಾಹನದಿಂದ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದರು. ಬಳಿಕ ಅವರನ್ನು ಸೆರೆಹಿಡಿಯಲಾಗಿದೆ ಎಂದು ತಿಳಿದು ಬಂದಿದೆ. ಖಲಿಸ್ತಾನ್ ಪರ ಸಂಘಟನೆಯ 'ವಾರಿಸ್ ಪಂಜಾಬ್ ದೇ' ಮುಖ್ಯಸ್ಥ ಅಮೃತಪಾಲ್ ವಿರುದ್ಧ ಪಂಜಾಬ್ ಪೊಲೀಸ್ ಠಾಣೆಯಲ್ಲಿ ಮೂರು ಪ್ರಕರಣಗಳು ದಾಖಲಾಗಿವೆ. ಅದರಲ್ಲಿ ಎರಡು ಪ್ರಕರಣಗಳು ದ್ವೇಷ ಭಾಷಣದ ಆರೋಪದಡಿ ಅಮೃತಸರ ಜಿಲ್ಲೆಯ ಅಜ್ನಾಲಾ ಪೊಲೀಸ್ ಠಾಣೆಯಲ್ಲಿ ದಾಖಲಾಗಿವೆ.
ಹಲವು ಜಿಲ್ಲೆಗಳಲ್ಲಿ ಇಂಟರ್‌ನೆಟ್ ಸ್ಥಗಿತ
ಪಂಜಾಬ್‌ನ ಹಲವು ಜಿಲ್ಲೆಗಳಲ್ಲಿ ಮೊಬೈಲ್ ಇಂಟರ್ನೆಟ್ ಸೇವೆಗಳನ್ನು ನಿಷೇಧಿಸಲಾಗಿದೆ. ಎಲ್ಲಾ ಮೊಬೈಲ್ ಇಂಟರ್ನೆಟ್ ಸೇವೆಗಳು, ಎಲ್ಲಾ SMS ಸೇವೆಗಳು (ಬ್ಯಾಂಕಿಂಗ್ ಮತ್ತು ಮೊಬೈಲ್ ರೀಚಾರ್ಜ್ ಹೊರತುಪಡಿಸಿ) ಮತ್ತು ಪಂಜಾಬ್‌ನ ಪ್ರಾದೇಶಿಕ ನ್ಯಾಯವ್ಯಾಪ್ತಿಯಲ್ಲಿ ಧ್ವನಿ ಕರೆಗಳನ್ನು ಹೊರತುಪಡಿಸಿ ಮೊಬೈಲ್ ನೆಟ್‌ವರ್ಕ್‌ಗಳಲ್ಲಿ ಒದಗಿಸಲಾದ ಎಲ್ಲಾ ಡಾಂಗಲ್ ಸೇವೆಗಳು ಮಾರ್ಚ್ 18 ರಿಂದ (12:00 ಗಂಟೆಗಳು) ಮಾರ್ಚ್ 19 ರವರೆಗೆ ಭದ್ರತೆಯ ಹಿತದೃಷ್ಟಿಯಿಂದ ನಿಷೇಧಿಸಲಾಗಿದೆ.

ಅಮೃತಪಾಲ್ ಬಂಧನ
ದಾಳಿ ವೇಳೆ ಅಮೃತಪಾಲ್ ಸಿಂಗ್ ತಪ್ಪಿಸಿಕೊಂಡಿದ್ದನು. ಇದರಿಂದ ಆತನ ಬಂಧನಕ್ಕೆ ಖಾಕಿ ಕಣ್ಣಿಟ್ಟಿತ್ತು. ಪಂಜಾಬ್‌ನ ಭಾರೀ ಪೊಲೀಸ್ ಪಡೆ ಅಮೃತಪಾಲ್ ಸಿಂಗ್ ಬೆಂಗಾವಲು ಪಡೆಯನ್ನು ಹಿಂಬಾಲಿಸಿದೆ. ಪೊಲೀಸರ ಕೈ ತಪ್ಪಿ ಪರಾರಿಯಾಗಿದ್ದ ಅಮೃತಪಾಲ್ ಸಿಂಗ್ ನನ್ನು ಪೊಲೀಸರು ಬಂಧಿಸಿದ್ದಾರೆ. ಮತ್ತೊಂದೆಡೆ ಆತನ ಸಹಚರರಿಂದ ಪೊಲೀಸರು ಅಪಾರ ಪ್ರಮಾಣದ ಶಸ್ತ್ರಾಸ್ತ್ರಗ
ಅಜ್ನಾಲಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದಾಳಿ
ಪ್ರಕರಣವೊಂದರಲ್ಲಿ ಪಂಜಾಬ್ ಪೊಲೀಸರು ಅಮೃತಪಾಲ್ ಸಿಂಗ್ ಅವರ ಸಹಾಯಕನನ್ನು ಬಂಧಿಸಿದ್ದರು. ನಂತರ ಅಮೃತಪಾಲ್ ಬೆಂಬಲಿಗರು ಫೆಬ್ರವರಿ 23 ರಂದು ಅಜ್ನಾಲಾ ಪೊಲೀಸ್ ಠಾಣೆ ಮೇಲೆ ದಾಳಿ ಮಾಡಿದರು. ಈ ಪ್ರಕರಣ ದೇಶದಾದ್ಯಂತ ಸುದ್ದಿಯಾಯಿತು. ಇದರೊಂದಿಗೆ ಪಂಜಾಬ್ ಪೊಲೀಸರೂ ಸಾಕಷ್ಟು ಟೀಕೆಗಳನ್ನು ಎದುರಿಸಬೇಕಾಯಿತು.












Click it and Unblock the Notifications