ಪಂಜಾಬ್‌: ಕಲ್ಲು, ಕತ್ತಿ, ಬಂದೂಕುಗಳೊಂದಿಗೆ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿದ ಪ್ರತಿಭಟನಾಕಾರರು!

ಪಂಜಾಬ್‌ನ ಅಮೃತಸರದಲ್ಲಿ ಕಲ್ಲು, ಕತ್ತಿ, ಬಂದೂಕುಗಳೊಂದಿಗೆ ಪ್ರತಿಭಟನಾಕಾರರು ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿದ ಘಟನೆ ನಡೆದಿದೆ.

ಅಮೃತಸರ ಫೆಬ್ರವರಿ 23: ವಾರಿಸ್ ಪಂಜಾಬ್ ಸಂಘಟನೆಯ ಮುಖ್ಯಸ್ಥ ಅಮೃತಪಾಲ್ ಸಿಂಗ್ ಬೆಂಬಲಿಗರು ಗುರುವಾರ ಪಂಜಾಬ್‌ನ ಅಮೃತಸರದ ಅಜ್ನಾಲಾ ಪೊಲೀಸ್ ಠಾಣೆಗೆ ನುಗ್ಗಿ ಕತ್ತಿಗಳು ಮತ್ತು ಬಂದೂಕುಗಳೊಂದಿಗೆ ಪೊಲೀಸ್ ಬ್ಯಾರಿಕೇಡ್‌ಗಳನ್ನು ಭೇದಿಸಿದ್ದಾರೆ. ಸಿಂಗ್ ಅವರ ಸಹಾಯಕ ಲವ್‌ಪ್ರೀತ್ ಸಿಂಗ್ ಅಲಿಯಾಸ್ ತೂಫಾನ್ ಬಂಧನವನ್ನು ವಿರೋಧಿಸಿ ಪ್ರತಿಭಟಿಸಲು ಅವರು ಪೊಲೀಸ್ ಠಾಣೆಯ ಹೊರಗೆ ಜಮಾಯಿಸಿದ್ದರು.

ಗುರುದಾಸ್‌ಪುರ ಜಿಲ್ಲೆಯ ಲವ್‌ಪ್ರೀತ್ ತೂಫಾನ್ ನನ್ನು ವ್ಯಕ್ತಿಯೊಬ್ಬನನ್ನು ಅಪಹರಿಸಿ ಥಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲಾಗಿದೆ. ಆದರೆ ಕುಟುಂಬ ಸದಸ್ಯರು ತೂಫಾನ್ ನಿರಪರಾಧಿಯಾಗಿದ್ದು, ಪ್ರಕರಣದಲ್ಲಿ ತಪ್ಪಾಗಿ ಸಿಲುಕಿಸಲಾಗಿದೆ ಎಂದು ಆರೋಪಿಸಿದ್ದಾರೆ.

Punjab: Protest in front of the police station with stones, swords and guns!

ಹೀಗಾಗಿ ಕತ್ತಿಗಳೊಂದಿಗೆ ಶಸ್ತ್ರಸಜ್ಜಿತವಾದ ಪ್ರತಿಭಟನಾಕಾರರು ಪೊಲೀಸ್ ಠಾಣೆಗೆ ದಾಳಿ ಮಾಡಿದರು ಮತ್ತು ಅಜ್ನಾಲಾ ಪೊಲೀಸ್ ಠಾಣೆಗೆ ನುಗ್ಗಿ ತೂಫಾನ್ ಬಿಡುಗಡೆಗೆ ಒತ್ತಾಯಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+