ಪಂಜಾಬ್: 100ರಲ್ಲಿ 80 ಸೋಂಕಿತರಲ್ಲಿ ಕೊರೊನಾ ರೂಪಾಂತರ ವೈರಸ್!

ನವದೆಹಲಿ, ಏಪ್ರಿಲ್ 06: ಪಂಜಾಬ್‌ನ 100 ಮಂದಿ ಕೊರೊನಾವೈರಸ್ ಸೋಂಕಿತರ ಪೈಕಿ ಶೇ.80ರಷ್ಟು ಮಂದಿಗೆ ಇಂಗ್ಲೆಂಡಿನ ರೂಪಾಂತರ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ ಎಂದು ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್ ತಿಳಿಸಿದ್ದಾರೆ.

ದೇಶದ 11 ರಾಜ್ಯಗಳ ಆರೋಗ್ಯ ಸಚಿವರ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಿದ ಅವರು ಮಾಹಿತಿ ಪಡೆದುಕೊಂಡರು. ಈ ಪೈಕಿ ಪಂಜಾಬ್‌ನಲ್ಲಿ ಮದುವೆ, ಸಭೆ-ಸಮಾರಂಭ, ಸ್ಥಳೀಯ ಚುನಾವಣೆ ಮತ್ತು ಕೃಷಿ ಕಾಯ್ದೆಗಳ ವಿರುದ್ಧ ರೈತರು ನಡೆಸುತ್ತಿರುವ ಹೋರಾಟದಿಂದ ಜನರು ಹೆಚ್ಚಿನ ಸಂಖ್ಯೆಯಲ್ಲಿ ಸೇರುತ್ತಿದ್ದಾರೆ. ಹೀಗಾಗಿ ಸೋಂಕಿತ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದೆ ಎಂದು ಹೇಳಿದರು.

ಕೇಂದ್ರ ಸರ್ಕಾರದ ವಿವಾದಿತ ರೈತರ ಉತ್ಪಾದನೆ ವ್ಯಾಪಾರ ಮತ್ತು ವಾಣಿಜ್ಯ (ಪ್ರಚಾರ ಮತ್ತು ಸೌಲಭ್ಯ) ಕಾಯ್ದೆ, ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ಕಾಯ್ದೆ (ಸಬಲೀಕರಣ ಮತ್ತು ಸಂರಕ್ಷಣೆ) ಒಪ್ಪಂದ ಹಾಗೂ ಅಗತ್ಯ ಸರಕುಗಳ (ತಿದ್ದುಪಡಿ) ಕಾಯ್ದೆಗಳ ವಿರುದ್ಧ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಕಳೆದ ನವೆಂಬರ್.26ರಿಂದ ನವದೆಹಲಿಯ ಸಿಂಘು ಗಡಿ, ಟಿಕ್ರಿ ಗಡಿ ಮತ್ತು ಘಾಜಿಪುರ್ ಗಡಿ ಪ್ರದೇಶಗಳಲ್ಲಿ ರೈತರು ನಡೆಸುತ್ತಿರು ಪ್ರತಿಭಟನೆ ಮತ್ತೊಂದು ಹಂತಕ್ಕೆ ತಲುಪಿದೆ. ಪಂಜಾಬ್, ಹರಿಯಾಣ, ಉತ್ತರ ಪ್ರದೇಶದ ಸಾವಿರಾರು ರೈತರು ಈ ಹೋರಾಟದಲ್ಲಿ ಭಾಗಿಯಾಗಿದ್ದಾರೆ.

Punjab: UK Variant Coronavirus Tested In 80% Of Patients In State, Says Health Minister Dr Harshvardhan

ಛತ್ತೀಸ್ ಗಢದಲ್ಲಿ ಶೇ.20ರಷ್ಟು ಸೋಂಕು ಏರಿಕೆ:

ಕೊರೊನಾವೈರಸ್ ಸೋಂಕು ಹರಡುವಿಕೆಯಿಂದ ಛತ್ತೀಸ್ ಗಢ ತತ್ತರಿಸಿ ಹೋಗಿದೆ. ರಾಜ್ಯದಲ್ಲಿ ಕೊವಿಡ್-19 ಸೋಂಕಿನ ಏರಿಕೆಯ ಪ್ರಮಾಣವು ಶೇ.20ರಷ್ಟು ಹೆಚ್ಚಾಗಿದೆ ಎಂದು ಸಚಿವ ಡಾ. ಹರ್ಷವರ್ಧನ್ ಮಾಹಿತಿ ನೀಡಿದರು. ರಾಜ್ಯದಲ್ಲಿ ಈ ಮೊದಲು 400 ಕೊರೊನಾವೈರಸ್ ಪ್ರಕರಣಗಳು ಪತ್ತೆಯಾಗುತ್ತಿದ್ದು, ಇದೀಗ ದಿನಕ್ಕೆ 4000ಕ್ಕೂ ಹೆಚ್ಚು ಪ್ರಕರಣಗಳು ಪತ್ತೆಯಾಗುತ್ತಿವೆ ಎಂದು ಹೇಳಿದ್ದಾರೆ.

ಪಂಜಾಬ್‌ನಲ್ಲಿ ಕೊರೊನಾವೈರಸ್ ಅಂಕಿ-ಸಂಖ್ಯೆ:

ರಾಜ್ಯದಲ್ಲಿ ಒಂದೇ ದಿನ 2,924 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿದ್ದು, ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 2,57,057ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 2,350 ಸೋಂಕಿತರು ಗುಣಮುಖರಾಗಿದ್ದರೆ, 62 ಮಂದಿರ ಮಹಾಮಾರಿಗೆ ಬಲಿಯಾಗಿದ್ದಾರೆ. ಈವರೆಗೂ 2,23,928 ಸೋಂಕಿತರು ಗುಣಮುಖರಾಗಿದ್ದರೆ, ಕೊವಿಡ್-19 ಸೋಂಕಿಗೆ ಇದುವರೆಗೂ 7,216 ಮಂದಿ ಪ್ರಾಣ ಬಿಟ್ಟಿದ್ದಾರೆ. ಉಳಿದಂತೆ 25,913 ಸಕ್ರಿಯ ಪ್ರಕರಣಗಳಿವೆ ಎಂದು ತಿಳಿದು ಬಂದಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+