Puri Stampede: ಪುರಿ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತದಲ್ಲಿ 3 ಸಾವು, 10ಕ್ಕೂ ಹೆಚ್ಚು ಮಂದಿಗೆ ಗಾಯ
Puri Jagannath Rath Yatra Stampede: ಪುರಿ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ ಸಂಭವಿಸಿ 3 ಸಾವು, 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಈ ದುರಂತ ಇಂದು (ಜೂನ್ 29) ಬೆಳಗಿನ ಜಾವ 4 ಗಂಟೆ ಸುಮಾರಿಗೆ ಗುಂಡಿಚಾ ದೇವಸ್ಥಾನದ ಬಳಿ ನಡೆದಿದೆ ಎಂದು ಎಂದು ವರದಿಯಾಗಿದೆ.
ಒಡಿಶಾದ ಪುರಿಯಲ್ಲಿ ಇಂದು ನಡೆದ ರಥಯಾತ್ರೆಯ ವೇಳೆ ಕಾಲ್ತುಳಿತದಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ ಮೂವರು ಸಾವನ್ನಪ್ಪಿದ್ದು, 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಮೃತರನ್ನು ಪ್ರೇಮಕಾಂತ ಮೊಹಂತಿ (80), ಬಸಂತಿ ಸಾಹೂ (36) ಮತ್ತು ಪ್ರಭಾತಿ ದಾಸ್ (42) ಎಂದು ಗುರುತಿಸಲಾಗಿದೆ.

ಮೃತಪಟ್ಟ ಮೂವರೂ ಖುರ್ದಾ ಜಿಲ್ಲೆಯವರಾಗಿದ್ದು, ರಥಯಾತ್ರೆಗಾಗಿ ಪುರಿಗೆ ಬಂದಿದ್ದರು ಎಂದು ತಿಳಿದುಬಂದಿದೆ. ಮೃತರ ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಸಾವಿಗೆ ನಿಖರವಾದ ಕಾರಣ ತಿಳಿದುಬರುತ್ತದೆ ಎಂದು ಪುರಿ ಜಿಲ್ಲಾಧಿಕಾರಿ ಸಿದ್ಧಾರ್ಥ್ ಶಂಕರ್ ಸ್ವೈನ್ ಹೇಳಿದ್ದಾರೆ.
ಇನ್ನು ಕಾಲ್ತುಳಿತ ದುರಂತ ಸಂಬಂಧ ಒಡಿಶಾ ಸರ್ಕಾರವು ಪುರಿ ಜಿಲ್ಲಾಧಿಕಾರಿ ಮತ್ತು ಪೊಲೀಸ್ ವರಿಷ್ಠಾಧಿಕಾರಿಯನ್ನು ವರ್ಗಾವಣೆ ಮಾಡಿದೆ. ಅಲ್ಲದೆ, ಹಲವು ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಿದೆ.
ಈ ಬಗ್ಗೆ ಮಾತನಾಡಿರುವ ಒಡಿಶಾ ಸಿಎಂ ಮೋಹನ್ ಚರಣ್ ಮಾಝಿ, ಕಾಲ್ತುಳಿತ ದುರಂತದ ಬಳಿಕ ಪುರಿ ಕಲೆಕ್ಟರ್ ಸಿದ್ಧಾರ್ಥ್ ಎಸ್ ಸ್ವೈನ್ ಮತ್ತು ಎಸ್ಪಿ ಬಿನಿತ್ ಅಗರ್ವಾಲ್ ಅವರನ್ನು ವರ್ಗಾವಣೆ ಮಾಡಲಾಗಿದೆ. ಪುರಿ ಪುರಿ ಡಿಸಿಪಿ ಬಿಷ್ಣು ಚರಣ್ ಪತಿ ಮತ್ತು ಪೊಲೀಸ್ ಕಮಾಂಡೆಂಟ್ ಅಜಯ್ ಪಧಿ ಅವರನ್ನು ಅಮಾನತು ಮಾಡಲಾಗಿದೆ ಎಂದು ಸಿಎಂ ತಿಳಿಸಿದ್ದಾರೆ.
ಘಟನೆ ನಡೆದಿದ್ದು ಹೇಗೆ?: ಇಂದು ಬೆಳಗಿನ ಜಾವ ಶ್ರೀ ಗುಂಡಿಚಾ ದೇವಸ್ಥಾನದ ಮುಂದೆ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದಾಗ ಈ ಘಟನೆ ಸಂಭವಿಸಿದೆ. ಕಾಲ್ತುಳಿತಕ್ಕೆ ಮುಂಚೆಯೇ, ಆರೋಗ್ಯ ಅಧಿಕಾರಿಗಳು ಜನಸಂದಣಿಗೆ ಸಂಬಂಧಿಸಿದ ಗಮನಾರ್ಹ ಆರೋಗ್ಯ ಸಮಸ್ಯೆಗಳನ್ನು ವರದಿ ಮಾಡಿದ್ದರು. ನೂರಾರು ಭಕ್ತರಿಗೆ ಆಯಾಸ ಮತ್ತು ಒತ್ತಡದಿಂದಾಗಿ ವೈದ್ಯಕೀಯ ನೆರವು ಅಗತ್ಯ ಆಗಿತ್ತು.
ದುರಂತದ ಬಗ್ಗೆ ಮಾತನಾಡಿದ ಒಡಿಶಾ ಕಾನೂನು ಸಚಿವ ಪೃಥಿವಿರಾಜ್ ಹರಿಚಂದನ್ ಅವರು, ಉನ್ನತ ಮಟ್ಟದ ತನಿಖೆಗೆ ವಹಿಸಲಾಗಿದೆ ಎಂದು ತಿಳಿಸಿದರು. ಅಲ್ಲದೆ, ಈ ದುರಂತದಿಂದ ಮನಸಿಗೆ ತುಂಬಾ ನೋವಾಗಿದೆ. ನಾವು ಸಮಗ್ರ ತನಿಖೆ ನಡೆಸುತ್ತೇವೆ ಮತ್ತು ಘಟನೆಗೆ ಕಾರಣರಾದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.












Click it and Unblock the Notifications