Breaking News: ನಾಲ್ಕು ತಿಂಗಳ ನಂತರ ತೆರೆದ ಪುರಿ ಜಗನ್ನಾಥ ದೇವಸ್ಥಾನ
ಪುರಿ, ಆಗಸ್ಟ್ 24: "ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಹರಡುವಿಕೆ ಭೀತಿಯಲ್ಲಿ ಕಳೆದ ನಾಲ್ಕು ತಿಂಗಳಿನಿಂದ ಮುಚ್ಚಿದ್ದ ಪ್ರಸಿದ್ಧ ಪುರಿ ಜಗನ್ನಾಥ ದೇವಸ್ಥಾನವು ಸೋಮವಾರದಿಂದ ಸಾರ್ವಜನಿಕರ ದರ್ಶನಕ್ಕೆ ಮುಕ್ತವಾಗಿದೆ," ಎಂದು ಪುರಿ ಜಗನ್ನಾಥ ದೇವಸ್ಥಾನದ ಆಡಳಿತ ಮಂಡಳಿ ತಿಳಿಸಿದೆ.
"ಪುರಿ ಜಗನ್ನಾಥ ದೇವಸ್ಥಾನದಲ್ಲಿ ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೊಳಿಸಲಾಗಿದೆ. ಭಕ್ತರು ಕೊವಿಡ್-19 ನಿಯಂತ್ರಿಸುವುದಕ್ಕಾಗಿ ಮಾರ್ಗಸೂಚಿಗಳು ಹಾಗೂ ಶಿಷ್ಟಾಚಾರವನ್ನು ಪಾಲನೆ ಮಾಡುವುದು ಕಡ್ಡಾಯ," ಎಂದು ದೇವಸ್ಥಾನ ಆಡಳಿತ ಮಂಡಳಿ ಮುಖ್ಯಸ್ಥ ಕೃಷ್ಣ ಕುಮಾರ್ ಹೇಳಿದ್ದಾರೆ.
"ಭಕ್ತಾದಿಗಳು ಪುರಿ ಜಗನ್ನಾಥ ದೇವಸ್ಥಾನಕ್ಕೆ ಆಗಮಿಸುವ ಸಂದರ್ಭದಲ್ಲಿ ಕೊವಿಡ್-19 ಲಸಿಕೆ ಪ್ರಮಾಣಪತ್ರ ಅಥವಾ RT-PCR ಪರೀಕ್ಷಿಸಿದ ನೆಗೆಟಿವ್ ವರದಿ ಜೊತೆಗೆ ಭಾವಚಿತ್ರವುಳ್ಳ ಒಂದು ಗುರುತಿನ ಚೀಟಿಯನ್ನು ತೆಗೆದುಕೊಂಡು ಹೋಗುವುದನ್ನು ಕಡ್ಡಾಯಗೊಳಿಸಲಾಗಿದೆ," ಎಂದು ಕೃಷ್ಣ ಕುಮಾರ್ ತಿಳಿಸಿದ್ದಾರೆ.

ಪುರಿ ಜಗನ್ನಾಥ ದೇವಸ್ಥಾನ ಬಂದ್:
"ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಹರಡುವಿಕೆ ನಿಯಂತ್ರಿಸುವ ಉದ್ದೇಶದಿಂದ ಕಳೆದ ನಾಲ್ಕು ತಿಂಗಳಿನಿಂದ ಪುರಿ ಜಗನ್ನಾಥ ದೇವಸ್ಥಾನವನ್ನು ಬಂದ್ ಮಾಡಲಾಗಿತ್ತು. ಹಬ್ಬ ಹರಿದಿನಗಳ ಸಂದರ್ಭದಲ್ಲೂ ಭಕ್ತರ ದರ್ಶನಕ್ಕೆ ನಿರ್ಬಂಧವನ್ನು ವಿಧಿಸಲಾಗಿತ್ತು. ಧಾರ್ಮಿಕ ಕಾರ್ಯಕ್ರಮಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಸೇರದಂತೆ ಮುನ್ನೆಚ್ಚರಿಕೆ ವಹಿಸಲಾಗಿತ್ತು," ಎಂದು ಕೃಷ್ಣ ಕುಮಾರ್ ತಿಳಿಸಿದ್ದಾರೆ.












Click it and Unblock the Notifications