Breaking: ಉತ್ತರಾಖಂಡದಲ್ಲಿ ಪುಷ್ಕರ್ ಧಾಮಿಗೆ 2ನೇ ಬಾರಿ ಸಿಎಂ ಕುರ್ಚಿ ಪಕ್ಕಾ!
ಡೆಹ್ರಾಡೂನ್, ಮಾರ್ಚ್ 21: ಉತ್ತರಾಖಂಡ ಮುಖ್ಯಮಂತ್ರಿ ಸ್ಥಾನಕ್ಕೆ ಪುಷ್ಕರ್ ಸಿಂಗ್ ಧಾಮಿ ಅವರನ್ನೇ ಎರಡನೇ ಬಾರಿ ಆಯ್ಕೆ ಮಾಡಲಾಗಿದೆ. ವಿಧಾನಸಭೆ ಚುನಾವಣೆಯಲ್ಲಿ ಸೋಲು ಕಂಡಿದ್ದರೂ, ಧಾಮಿಗೆ ಪಟ್ಟ ಕಟ್ಟುವುದು ಪಕ್ಕಾ ಆಗಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.
ಉತ್ತರಾಖಂಡ ಭಾರತೀಯ ಜನತಾ ಪಕ್ಷದ ಶಾಸಕಾಂಗ ಪಕ್ಷದ ನಾಯಕರಾಗಿ ಪುಷ್ಕರ್ ಸಿಂಗ್ ಧಾಮಿ ಅವರನ್ನು ಘೋಷಿಸಲಾಗಿದೆ. ಇತ್ತೀಚಿಗೆ ನಡೆದ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಖತಿಮಾ ಕ್ಷೇತ್ರದಲ್ಲಿ ಸ್ಪರ್ಧಿಸಿದ ಸಿಎಂ ಪುಷ್ಕರ್ ಸಿಂಗ್ ಧಾಮಿ ಕಾಂಗ್ರೆಸ್ ಅಭ್ಯರ್ಥಿ ಎದುರು ಸೋಲು ಕಂಡಿದ್ದರು.

ಕಳೆದ 2017ರ ಚುನಾವಣೆಯಲ್ಲಿ ಉಧಮ್ ಸಿಂಗ್ ನಗರ್ ಜಿಲ್ಲೆಯ ಖತಿಮಾ ವಿಧಾನಸಭಾ ಕ್ಷೇತ್ರದಲ್ಲಿ ಇದೇ ಕಪ್ರಿಯನ್ನು ಧಾಮಿ ಕೇವಲ 2700 ಮತಗಳ ಅಂತರದಿಂದ ಸೋಲಿಸಿದ್ದರು. ಆದರೆ 2022ರಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಪ್ರತಿಕಾರವಾಗಿ ಅದೇ ಪುಷ್ಕರ್ ಸಿಂಗ್ ಧಾಮಿ ಅವರನ್ನು ಭುವನ್ ಕಪ್ರಿ 7000 ಮತಗಳ ಅಂತರದಿಂದ ಸೋಲಿಸಿದ್ದಾರೆ. ಜನರಿಗೆ ಬಹಳ ಹತ್ತಿರದ ನಾಯಕರಾಗಿ ಗುರುತಿಸಿಕೊಂಡ ಕಾಂಗ್ರೆಸ್ ಅಭ್ಯರ್ಥಿ ಭುವನ್ ಕಪ್ರಿ ಬಳಿ ರಾಜ್ಯ ಚುನಾವಣಾ ಆಯೋಗಕ್ಕೆ ಸಲ್ಲಿಸಿದ ಅಫಿಡವಿಟ್ ಪ್ರಕಾರ, ಭುವನ್ ಚಂದ್ರ ಕಪ್ರಿ ಅವರ ಒಟ್ಟಾರೆ ಆಸ್ತಿ ಮೌಲ್ಯವೇ 50 ಲಕ್ಷ ರೂಪಾಯಿ ಆಗಿದೆ.
ಉತ್ತರಾಖಂಡ ವಿಧಾನಸಭೆ ಚುನಾವಣೆ ಫಲಿತಾಂಶ:
ಕೇಂದ್ರ ಚುನಾವಣಾ ಆಯೋಗದ ಪ್ರಕಾರ, ಉತ್ತರಾಖಂಡದ 70 ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಸಂಪೂರ್ಣ ಬಹುಮತ ಗಳಿಸುವಲ್ಲಿ ಯಶಸ್ವಿಯಾಗಿದೆ. ಯಾವುದೇ ಪಕ್ಷ ಸರ್ಕಾರ ರಚಿಸುವುದಕ್ಕೆ ಮ್ಯಾಜಿಕ್ ನಂಬರ್ 36 ಆಗಿದೆ. ಆದರೆ ಬಿಜೆಪಿಯು 47 ಕ್ಷೇತ್ರಗಳಲ್ಲಿ ಗೆಲುವಿನ ಪತಾಕೆ ಹಾರಿಸುವ ಮೂಲಕ ಅಧಿಕಾರವನ್ನು ಪಕ್ಕಾ ಮಾಡಿಕೊಂಡಿದೆ. 19 ಸ್ಥಾನಗಳಲ್ಲಿ ಗೆಲುವು ಸಾಧಿಸಿರುವ ಕಾಂಗ್ರೆಸ್ ಅತಿಹೆಚ್ಚು ಸ್ಥಾನ ಗಳಿಸಿದ ಎರಡನೇ ಪಕ್ಷವಾಗಿ ಹೊರ ಹೊಮ್ಮಿದೆ. ಉಳಿದಂತೆ ಬಹುಜನ ಸಮಾಜವಾದಿ ಪಕ್ಷ 2, ಸ್ವತಂತ್ರ್ಯ ಅಭ್ಯರ್ಥಿಗಳು 2 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿದ್ದಾರೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications