• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಉತ್ತರಾಖಂಡ ನೂತನ ಮುಖ್ಯಮಂತ್ರಿಯಾಗಿ ಪುಷ್ಕರ್ ಸಿಂಗ್ ಧಾಮಿ ಆಯ್ಕೆ

|
Google Oneindia Kannada News

ಡೆಹ್ರಾಡೂನ್, ಜುಲೈ 03: ಉತ್ತರಾಖಂಡದ ನೂತನ ಮುಖ್ಯಮಂತ್ರಿಯಾಗಿ ಪುಷ್ಕರ್ ಸಿಂಗ್ ಧಾಮಿ ಆಯ್ಕೆಯಾಗಿದ್ದಾರೆ.

ತೀರಥ್ ಸಿಂಗ್ ರಾವತ್ ನಿನ್ನೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿನ್ನಲೆ ಇಂದು ಹೊಸ ಶಾಸಕಾಂಗ ಪಕ್ಷದ ನಾಯಕ ಆಯ್ಕೆಗೆ ವೀಕ್ಷಕರಾಗಿ ಹೈಕಮಾಂಡ್ ಕೇಂದ್ರ ಸಚಿವ ನರೇಂದ್ರ ಸಿಂಗ್ ತೋಮರ್ ಅವರನ್ನು ಕಳುಹಿಸಿತ್ತು.

ಉತ್ತರಾಖಂಡ ಸಿಎಂ ತೀರಥ್ ಸಿಂಗ್ ರಾವತ್‌ ರಾಜೀನಾಮೆ?ಉತ್ತರಾಖಂಡ ಸಿಎಂ ತೀರಥ್ ಸಿಂಗ್ ರಾವತ್‌ ರಾಜೀನಾಮೆ?

ಪಕ್ಷದ ಕಚೇರಿಯಲ್ಲಿ ಸಭೆ ನಡೆಸಿದ ನರೇಂದ್ರ ಸಿಂಗ್ ತೋಮರ್ ಶಾಸಕರ ಒಪ್ಪಿಗೆ ಮೇರೆಗೆ ಪುಷ್ಕರ್ ಸಿಂಗ್ ಧಾಮಿ ಅವರನ್ನು ಶಾಸಕಾಂಗ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಿದ್ದಾರೆ.

ಖತೀಮ್ ಕ್ಷೇತ್ರದ ಹಾಲಿ ಶಾಸಕರಾಗಿರುವ ಪುಷ್ಕರ್ ಸಿಂಗ್ ಧಾಮಿ ಉತ್ತರಾಖಂಡದ 11ನೇ ಸಿಎಂ ಆಗಿ ಶೀಘ್ರದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಕುರಿತು ಮಾತನಾಡಿರುವ ರಾವತ್, ಸಾಂವಿಧಾನಿಕ ಬಿಕ್ಕಟ್ಟಿನಿಂದಾಗಿ ರಾಜೀನಾಮೆ ನೀಡುತ್ತಿದ್ದೇನೆ.

ಉತ್ತರಾಖಂಡ್‌ ವಿಧಾನಸಭೆಗೆ ಒಂದು ವರ್ಷದ ಒಳಗೆ ಚುನಾವಣೆ ನಡೆಯಲಿದ್ದು, ಚುನಾವಣಾ ವರ್ಷದಲ್ಲಿ ಧಾಮಿ ಸಿಎಂ ಸ್ಥಾನಕ್ಕೇರಿದ್ದಾರೆ. ಪಕ್ಷವನ್ನು ಮರಳಿ ಅಧಿಕಾರಕ್ಕೇ ತರುವ ಹೊಣೆ ಈಗ ಅವರ ಮೇಲಿದೆ.

ಶಾಸಕರಲ್ಲದೆ ಸಿಎಂ ಸ್ಥಾನಕ್ಕೇರಿದ್ದ ಅವರು ಹುದ್ದೆ ಉಳಿಸಿಕೊಳ್ಳಬೇಕಿದ್ದರೆ ಆರು ತಿಂಗಳ ಒಳಗೆ ವಿಧಾನಸಭೆಗೆ ಆಯ್ಕೆಯಾಗಬೇಕಿತ್ತು. ಆದರೆ ಸೆಪ್ಟೆಂಬರ್‌ 10ರ ಒಳಗೆ ಶಾಸಕರಾಗುವ ಸಾಧ್ಯತೆಯೇ ಇಲ್ಲದ ಕಾರಣಕ್ಕೆ ಅವರು ಅನಿವಾರ್ಯವಾಗಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದುಕೊಳ್ಳಲಾಗಿದೆ.

ಕೊರೊನಾದಿಂದಾಗಿ ಉಪ ಚುನಾವಣೆ ನಡೆಯದೆ ಇರುವುದರಿಂದಾಗಿ ಈ ನಿರ್ಧಾರ ಸರಿಯೆಂದು ಭಾವಿಸುತ್ತಿದ್ದೇನೆ ಎಂದಿದ್ದರು. ಇದೀಗ ಮುಖ್ಯ ಮಂತ್ರಿ ಸ್ಥಾನಕ್ಕೆ ಪುಷ್ಕರ್ ಸಿಂಗ್ ಧಾಮಿ ಆಯ್ಕೆಯಾಗಿದ್ದಾರೆ.

ಸಿಎಲ್‍ಪಿ ಸಭೆಯಲ್ಲಿ ಸರ್ವಾನುಮತದಿಂದ ಪುಷ್ಕರ್ ಸಿಂಗ್ ಧಾಮಿ ಆಯ್ಕೆ ಮಾಡಲಾಗಿದೆ. ಉತ್ತರಾಖಂಡದ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ 4 ತಿಂಗಳಿಗೆ ತೀರಥ್ ಸಿಂಗ್ ರಾವತ್ ರಾಜೀನಾಮೆ ನೀಡಿದ್ದಾರೆ. ರಾವತ್ ಉತ್ತರಾಖಂಡದ ಮುಖ್ಯಮಂತ್ರಿಯಾಗಿ 2021ರ ಮಾರ್ಚ್ ತಿಂಗಳಲ್ಲಿ ಅಧಿಕಾರವಹಿಸಿಕೊಂಡಿದ್ದರು. ಆದಾದ ಬಳಿಕ ಇದೀಗ ರಾಜೀನಾಮೆಗೆ ಮುಂದಾಗಿದ್ದಾರೆ.

English summary
Pushkar Singh Dhami was today chosen by the Uttarakhand BJP legislature party to be the eleventh Chief Minister of the state.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X