ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವಿಶ್ವ ಬ್ಯಾಡ್ಮಿಂಟನ್ ಫೆಡರೇಷನ್ ಆಯೋಗಕ್ಕೆ ಪಿ.ವಿ. ಸಿಂಧು?

ಇಂಡಿಯಾ ಓಪನ್ ಬ್ಯಾಡ್ಮಿಂಟನ್ ಟೂರ್ನಿ ಗೆದ್ದ ನಂತರ, ಲಂಡನ್ ಒಲಿಂಪಿಕ್ಸ್ ಬೆಳ್ಳಿ ವಿಜೇತೆಯೂ ಆಗಿರುವ ಪಿ.ವಿ. ಸಿಂಧು, ವಿಶ್ವ ಬ್ಯಾಡ್ಮಿಂಟನ್ ನ ಮಹಿಳೆಯರ ಸಿಂಗಲ್ಸ್ ಶ್ರೇಯಾಂಕ ಪಟ್ಟಿಯಲ್ಲಿ 2ನೇ ಸ್ಥಾನಕ್ಕೇರಿದ್ದಾರೆ.

|
Google Oneindia Kannada News

ನವದೆಹಲಿ, ಏಪ್ರಿಲ್ 11: ವಿಶ್ವ ಬ್ಯಾಡ್ಮಿಂಟನ್ ಸಂಸ್ಥೆಯ ಕ್ರೀಡಾಳುಗಳ ಆಯೋಗಕ್ಕೆ ಖ್ಯಾತ ಬ್ಯಾಡ್ಮಿಂಟನ್ ಆಟಗಾರ್ತಿ ಹಾಗೂ ಹಾಲಿ ವಿಶ್ವ ಬ್ಯಾಡ್ಮಿಂಟನ್ ಶ್ರೇಯಾಂಕದಲ್ಲಿ 2ನೇ ಸ್ಥಾನ ಹೊಂದಿರುವ ಪಿ.ವಿ. ಸಿಂಧು ಹಾಗೂ ಭಾರತದ ಮತ್ತೊಬ್ಬ ಬ್ಯಾಡ್ಮಿಂಟನ್ ಆಟಗಾರ ನಿಖಾರಾ ಗಾರ್ಗ್ ನಾಮಾಂಕಿತಗೊಂಡಿದ್ದಾರೆಂದು ಮೂಲಗಳು ತಿಳಿಸಿವೆ.

ಇತ್ತೀಚೆಗಷ್ಟೇ, ಇಂಡಿಯಾ ಓಪನ್ ಬ್ಯಾಡ್ಮಿಂಟನ್ ಟೂರ್ನಿ ಗೆದ್ದ ನಂತರ, ಲಂಡನ್ ಒಲಿಂಪಿಕ್ಸ್ ಬೆಳ್ಳಿ ವಿಜೇತೆಯೂ ಆಗಿರುವ ಪಿ.ವಿ. ಸಿಂಧು, ವಿಶ್ವ ಬ್ಯಾಡ್ಮಿಂಟನ್ ನ ಮಹಿಳೆಯರ ಸಿಂಗಲ್ಸ್ ಶ್ರೇಯಾಂಕ ಪಟ್ಟಿಯಲ್ಲಿ 2ನೇ ಸ್ಥಾನಕ್ಕೇರಿದ್ದಾರೆ.

PV Sindhu, unknown Nikhar Garg in fray for BWF athletes' commission

ಇಂಡಿಯಾ ಓಪನ್ ಫೈನಲ್ ಪಂದ್ಯದಲ್ಲಿ ಅವರು ಸ್ಪೇನ್ ನ ಕರೊಲಿನಾ ಮರಿನ್ ವಿರುದ್ಧ ಜಯಿಸಿ ಪ್ರಶಸ್ತಿಗೆ ಭಾಜನರಾಗಿದ್ದರು.

ನಿಖಾರಾ ಗಾರ್ಗ್ ಅವರು ಹೆಚ್ಚಾಗಿ ಕ್ರೀಡಾಕೂಟಗಳಲ್ಲಿ ಭಾಗವಹಿಸದಿದ್ದರೂ, ಕಳೆದ ವರ್ಷ ಆನ್ ಲೈನ್ ಮೂಲಕ ಸಹಿ ಸಂಗ್ರಹ ಅಭಿಯಾನವೊಂದನ್ನು ಆರಂಭಿಸುವ ಮೂಲಕ ಹೆಚ್ಚು ಸುದ್ದಿಯಲ್ಲಿದ್ದರು. ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಟೂರ್ನಿಗಳಲ್ಲಿ ರಿಜಿಸ್ಟಾರ್ ಮಾಡಿಸಬೇಕಿರುವ ಸಿಂಗಲ್ಸ್ ಆಟಗಾರರು, ಆಟಗಾರ್ತಿಯರು ನೇರವಾಗಿ ರಿಜಿಸ್ಟರ್ ಮಾಡಿಸಬೇಕು.

ಈಗ ಚಾಲ್ತಿಯಲ್ಲಿರುವಂತೆ, ಸಂಬಂಧಪಟ್ಟ ಬ್ಯಾಡ್ಮಿಂಟನ್ ಸಂಸ್ಥೆಗಳ ಮೂಲಕವೇ ರಿಜಿಸ್ಟರ್ ಮಾಡಿಸುವ ಪದ್ಧತಿಯನ್ನು ಕೈಬಿಡಬೇಕು ಎಂದು ಅವರು, ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಸಂಸ್ಥೆಯನ್ನು ಆಗ್ರಹಿಸಿದ್ದರು.

English summary
Olympic silver-medallist and world no.2 PV Sindhu will be among the nine shuttlers vying for a position in the Badminton World Feration's Athletes Commission. The other Indian in fray for the four slots is relatively unknown male shuttler called Nikhar Garg.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X