ಇಂದು ನಾಲ್ಕು ದೇಶಗಳ ಮೊದಲ 'ಕ್ವಾಡ್' ಸಮ್ಮೇಳನ: ಅಮೆರಿಕದ ಲಸಿಕೆ ಭಾರತದಲ್ಲಿ ಉತ್ಪಾದನೆ
ನವದೆಹಲಿ, ಮಾರ್ಚ್ 10: ಭಾರತ, ಜಪಾನ್, ಅಮೆರಿಕ ಮತ್ತು ಆಸ್ಟ್ರೇಲಿಯಾ- ನಾಲ್ಕು ದೇಶಗಳ ನಾಯಕರ ಮೊದಲ ಆನ್‌ಲೈನ್ ಸಮ್ಮೇಳನ ಇಂದು ನಡೆಯಲಿದ್ದು, ಜಗತ್ತಿನ ಗಮನ ಸೆಳೆದಿದೆ. ಈ ಸಭೆಯಲ್ಲಿ ಮುಖ್ಯವಾಗಿ ಕೋವಿಡ್ ನಿಯಂತ್ರಣ ಹಾಗೂ ಕೋವಿಡ್ ಲಸಿಕೆಯ ಕುರಿತು ಚರ್ಚೆ ನಡೆಯಲಿದೆ.
ನಾಲ್ಕು ದೇಶಗಳ ಕಾರ್ಯಯೋಜನೆ ಚೌಕಟ್ಟಿನ ಕುರಿತಾದ ನಾಯಕರ ಮೊದಲ ಸಭೆ (ಕ್ವಾಡ್) ಮಾರ್ಚ್ 12ರಂದು ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ, ಆಸ್ಟ್ರೇಲಿಯಾದ ಪ್ರಧಾನಿ ಸ್ಕಾಟ್ ಮಾರಿಸನ್, ಜಪಾನ್ ಪ್ರಧಾನಿ ಯೋಶಿಹಿಡೆ ಸುಗಾ ಮತ್ತು ಅಮೆರಿಕದ ಅಧ್ಯಕ್ಷ ಜೋ ಬೈಡನ್ ಅವರು ಈ ಅನ್‌ಲೈನ್ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ.
ಅಮೆರಿಕದಲ್ಲಿ ಅಭಿವೃದ್ಧಿಯಾಗುವ ಲಸಿಕೆಗಳನ್ನು ಭಾರತದಲ್ಲಿ ಉತ್ಪಾದಿಸಲಾಗುವುದು. ಇದಕ್ಕೆ ಜಪಾನ್ ಮತ್ತು ಅಮೆರಿಕಗಳು ಆರ್ಥಿಕ ನೆರವು ನೀಡಲಿದ್ದು, ಆಸ್ಟ್ರೇಲಿಯಾ ಸಹಾಯ ಮಾಡಲಿದೆ. ಲಸಿಕೆ ಯೋಜನೆಯು ಭಾರತದ ಲಸಿಕೆ ಉತ್ಪಾದನಾ ಸಾಮರ್ಥ್ಯವನ್ನು ಹೆಚ್ಚಿಸಲಿದ್ದು, ಇಂಡೋ-ಪೆಸಿಫಿಕ್ ಪ್ರದೇಶಕ್ಕೆ ರಫ್ತು ಮಾಡಲಾಗುತ್ತದೆ. ಇದು ಈ ಪ್ರದೇಶದಲ್ಲಿ ಚೀನಾವನ್ನು ಎದುರಿಸುವ ಗುರಿ ಹೊಂದಿದೆ.

ಇದೇ ವೇಳೆ ಈ ನಾಲ್ಕು ದೇಶಗಳ ನಾಯಕರು ಹಂಚಿಕೆಯಾದ ಹಿತಾಸಕ್ತಿಗಳ ಜಾಗತಿಕ ಹಾಗೂ ಪ್ರಾದೇಶಿಕ ಸಮಸ್ಯೆಗಳ ಬಗ್ಗೆ ಚರ್ಚಿಸಲಿದ್ದಾರೆ. ಜತೆಗೆ ಮುಕ್ತ, ತೆರೆದ ಹಾಗೂ ಒಳಗೊಳ್ಳುವಿಕೆಯ ಇಂಡೋ-ಪೆಸಿಫಿಕ್ ಪ್ರದೇಶವನ್ನು ನಿಭಾಯಿಸುವತ್ತ ಸಹಕಾರದ ಕುರಿತಾದ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಳ್ಳಲಿದ್ದಾರೆ.
ಪೂರೈಕೆ ಸರಪಳಿಯ ಚೇತರಿಕೆ, ಹೊಸ ಸೃಷ್ಟಿ ಹಾಗೂ ಮಹತ್ವದ ತಂತ್ರಜ್ಞಾನಗಳು, ಸಮುದ್ರತೀರ ಭದ್ರತೆ ಮತ್ತು ಹವಾಮಾನ ವೈಪರೀತ್ಯ ಸೇರಿದಂತೆ ಸಮಕಾಲೀನ ಸವಾಲುಗಳ ಕುರಿತು ಸಹ ಅಭಿಪ್ರಾಯಗಳ ವಿನಿಮಯಕ್ಕೆ ಸಮಾವೇಶದಲ್ಲಿ ಅವಕಾಶ ಸಿಗಲಿದೆ.
ಇದಕ್ಕೂ ಮುನ್ನ ಜಪಾನ್ ಪ್ರಧಾನಿ ಯೊಶಿಹಿಡೆ ಅವರ ಜತೆಗೆ ಪ್ರಧಾನಿ ನರೇಂದ್ರ ಮೋದಿ ದೂರವಾಣಿ ಮಾತುಕತೆ ನಡೆಸಿದರು. ಇಂಡೋ ಪೆಸಿಫಿಕ್ ಪ್ರದೇಶದಲ್ಲಿ ಸಹಕಾರವನ್ನು ಮತ್ತಷ್ಟು ಹೆಚ್ಚಿಸುವ ಸಂಬಂಧ ಕ್ವಾಡ್ ಚೌಕಟ್ಟಿನಲ್ಲಿ ಹಾಗೂ ದ್ವಿಪಕ್ಷೀಯವಾಗಿ ಸಹಭಾಗಿತ್ವವನ್ನು ತೀವ್ರಗೊಳಿಸುವುದರ ಬಗ್ಗೆ ಸಮಾಲೋಚನೆ ನಡೆಸಿದರು.
-
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Asha Bhosle: ಭಾರತೀಯ ಸಿನಿಮಾ ರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ, ಸಂಗೀತ ರಾಣಿ ಎಂದೇ ಖ್ಯಾತಿ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ












Click it and Unblock the Notifications