ಮೇವು ಹಗರಣ: ಲಾಲೂ ಶಿಕ್ಷೆ ಪ್ರಮಾಣ ಪ್ರಕಟಣೆ ಮತ್ತೆ ಮುಂದೂಡಿಕೆ

Subscribe to Oneindia Kannada

ರಾಂಚಿ, ಜನವರಿ 03: ಬಿಹಾರದ ಮಾಜಿ ಮುಖ್ಯಮಂತ್ರಿ, ಆರ್.ಜೆ.ಡಿ ನಾಯಕ ಲಾಲೂ ಪ್ರಸಾದ್ ಯಾದವ್ ಗೆ ಕೋರ್ಟ್ ಇಂದೂ ಕೂಡ ಶಿಕ್ಷೆ ಪ್ರಮಾಣ ಪ್ರಕಟಿಸಿಲ್ಲ. ರಾಂಚಿಯ ಸಿಬಿಐ ವಿಶೇಷ ನ್ಯಾಯಾಲಯ ಶಿಕ್ಷೆ ಪ್ರಮಾಣವನ್ನು ಶುಕ್ರವಾರ (ಜ.5)ರಂದು ಪ್ರಕಟಿಸಲಾಗುತ್ತದೆ ಎಂದು ಸೂಚನೆ ನೀಡಿದೆ.

ಲಾಲೂನ ಜೈಲಿಗೆ ಕರೆದೊಯ್ದ 900 ಕೋಟಿ ಮೇವು ಹಗರಣದ ಟೈಮ್ ಲೈನ್

89 ಲಕ್ಷ ರೂಪಾಯಿ ಮೌಲ್ಯದ ದೇವಘರ್ ಮೇವು ಹಗರಣದಲ್ಲಿ ಪ್ರಮುಖ ಅಪರಾಧಿಯಾಗಿರುವ ಲಾಲೂ ಪ್ರಸಾದ್ ಯಾದವ್ ಮತ್ತು 15ಇತರರ ಶಿಕ್ಷೆ ಪ್ರಮಾಣ ಪ್ರಕಟವನ್ನು ಗುರುವಾರಕ್ಕೆ ಮುಂದೂಡಿ ರಾಂಚಿ ಸಿಬಿಐ ವಿಶೇಷ ನ್ಯಾಯಾಲಯ ಬುಧವಾರ ಆದೇಶ ಹೊರಡಿಸಿತ್ತು.

Quantum of sentence for Lalu Prasad Yadav in Fodder Scam case pronounced on Friday

ಲಾಲೂ ಪ್ರಸಾದ್ ಯಾದವ್ ಸೇರಿದಂತೆ 15 ಜನರನ್ನು ದೋಷಿ ಎಂದು ರಾಂಚಿ ಸಿಬಿಐ ವಿಶೇಷ ಕೋರ್ಟ್ ಡಿಸೆಂಬರ್ 23ರಂದು ಅಂತಿಮ ತೀರ್ಪನ್ನು ನೀಡಿ ಶಿಕ್ಷೆ ಪ್ರಮಾಣವನ್ನು ಜನವರಿ 3ಕ್ಕೆ ಪ್ರಕಟಿಸಲಾಗುವುದು ಎಂದು ಹೇಳಿತ್ತು.

ಅದರಂತೆ ಬುಧವಾರ ಪ್ರಕಟಿಸಬೇಕಿದ್ದ ಶಿಕ್ಷೆ ಪ್ರಮಾಣವನ್ನು ಕೋರ್ಟ್ ಕೆಲ ಕಾರಣಾಂತರಗಳಿಂದ ಗುರುವಾರಕ್ಕೆ ಮುಂದೂಡಿತ್ತು. ಇದೀಗ ಶುಕ್ರವಾರಕ್ಕೆ ಶಿಕ್ಷೆ ಪ್ರಮಾಣ ಘೋಷಣೆಯನ್ನು ಮುಂದೂಡಿದೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Quantum of sentence for Lalu prasad Yadav and 15 others in a fodder scam case to be pronounced on Friday, January 5.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ