• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಜಾಮೀನಿನ ಮೇಲಿರುವ ರಾಹುಲ್‌ಗೆ ಯಾವ ಹಕ್ಕಿದೆ?: ನಿರ್ಮಲಾ ಕಿಡಿ

|

ನವದೆಹಲಿ, ಏಪ್ರಿಲ್ 10: ರಫೇಲ್ ಡೀಲ್‌ನ ಹಿಂದಿನ ತೀರ್ಪಿನ ಮರುಪರಿಶೀಲನೆಗೆ ಕೋರಿ ಸಲ್ಲಿಸಿದ್ದ ಅರ್ಜಿಗಳಿಗೆ ಕೇಂದ್ರ ಸರ್ಕಾರದ ಆಕ್ಷೇಪವನ್ನು ತಳ್ಳಿಹಾಕಿರುವ ಸುಪ್ರೀಂಕೋರ್ಟ್ ನಿರ್ಧಾರಕ್ಕೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮೆಚ್ಚುಗೆ ವ್ಯಕ್ತಪಡಿಸಿದ್ದರು.

ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ

ರಫೇಲ್ ವಿವಾದದ ಕುರಿತಾದ ದಾಖಲೆಗಳನ್ನು ಪರಿಶೀಲಿಸುವಂತೆ ಸುಪ್ರೀಂಕೋರ್ಟ್ ನೀಡಿರುವ ತೀರ್ಪಿನಿಂದ ಚೌಕಿದಾರ ಚೋರ ಎಂಬುದು ಸಾಬೀತಾಗಿದೆ ಎಂದು ರಾಹುಲ್ ಗಾಂಧಿ ಹೇಳಿದ್ದರು.

ರಫೇಲ್ ತೀರ್ಪು: ಮತ್ತೊಮ್ಮೆ 'ಚೌಕಿದಾರ್ ಚೋರ್' ಎಂದ ರಾಹುಲ್ ಗಾಂಧಿ

ರಾಹುಲ್ ಹೇಳಿಕೆಯನ್ನು ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಕಟುವಾಗಿ ಟೀಕಿಸಿದ್ದಾರೆ. ರಾಹುಲ್ ಹೇಳಿಕೆ ನ್ಯಾಯಾಂಗ ನಿಂದನೆ ಮಾಡುವಂತಿದೆ ಎಂದು ಅವರು ಕಿಡಿಕಾರಿದ್ದಾರೆ.

'ಕಾಂಗ್ರೆಸ್ ಅಧ್ಯಕ್ಷರು ಬಹುಶಃ ಅದರ ಅರ್ಧ ಪ್ಯಾರಾಗ್ರಾಫ್ ಕೂಡ ಓದಿರಲಾರರು ಎಂಬುದು ನಮಗೆ ತಿಳಿದಿದೆ. ಆದರೆ ಇಲ್ಲಿ, ಕೋರ್ಟ್ ಅದನ್ನು ಒಪ್ಪಿಕೊಂಡಿದೆ ಮತ್ತು 'ಚೌಕಿದಾರ ಚೋರ' ಎಂದು ಕೋರ್ಟ್ ಹೇಳಿದೆ ಎಂದು ಅವರು ಹೇಳಿದ್ದಾರೆ. ಇದು ನ್ಯಾಯಾಂಗ ನಿಂದನೆ ಮಾಡುವಂತಿದೆ' ಎಂದು ನಿರ್ಮಲಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಹುಲ್ ವಿರುದ್ಧ ವಾಗ್ದಾಳಿ ಮುಂದುವರಿಸಿರುವ ಅವರು, 'ಸ್ವತಃ ಜಾಮೀನಿನ ಮೇಲೆ ಹೊರಗಿರುವ ವ್ಯಕ್ತಿ, ನ್ಯಾಯಾಲಯದ ತೀರ್ಪನ್ನು ತಪ್ಪಾಗಿ ಅರ್ಥೈಸಲು ಅವರಿಗೆ ಯಾರು ಅಧಿಕಾರ ನೀಡಿದ್ದಾರೆ?' ಎಂದು ಹೇಳಿದ್ದಾರೆ.

ರಫೇಲ್ ಒಪ್ಪಂದ: ಸುಪ್ರೀಂಕೋರ್ಟ್‌ನಲ್ಲಿ ಕೇಂದ್ರ ಸರ್ಕಾರಕ್ಕೆ ಹಿನ್ನಡೆ

"ನೀವು ಭ್ರಷ್ಟಾಚಾರ ಮಾಡಿದ್ದೀರಿ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ನಾನು ಈಗಲೂ ಮೋದಿಯವರಿಗೆ ಸವಾಲೆಸೆಯುತ್ತೇನೆ. ನನ್ನೊಂದಿಗೆ ಚರ್ಚೆಗೆ ಬನ್ನಿ. ಪ್ರೀತಿಯಿಂದ ಚರ್ಚಿಸೋಣ. ಈ ದೇಶದ ಜನರಿಗೆ ರಫೇಲ್ ಬಗ್ಗೆ ತಿಳಿಸಬೇಕಿದೆ. ಭ್ರಷ್ಟಾಚಾರದ ಬಗ್ಗೆ ತಿಳಿಯಬೇಕಿದೆ. ಅಪನಗದೀಕರಣದ ಬಗ್ಗೆ ತಿಳಿಯಬೇಕಿದೆ" ಎಂದು ರಾಹುಲ್ ಗಾಂಧಿ ಹೇಳಿದ್ದರು.

English summary
Defence Minister Nirmala Sitharaman slams Congress President Rahul Gandhi for his statement on Supreme Court calling PM Narendra Modi again Chowkidar Chor Hain.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X