ರಫೇಲ್ ಖರೀದಿ: ಮಾಧ್ಯಮಗಳು ಬೆದರಿಕೆಗೆ ಜಗ್ಗಬಾರದು ಎಂದ ಎನ್ ರಾಮ್

ರಫೇಲ್ ಯುದ್ಧ ವಿಮಾನ ಖರೀದಿಗೆ ಸಂಬಂಧಿಸಿದ ದಾಖಲೆಗಳು ರಕ್ಷಣಾ ಸಚಿವಾಲಯದಿಂದ ಕಳುವಾದರೆ ಅದಕ್ಕೆ ಸಂಬಂಧಿಸಿದಂತೆ ಯಾಕೆ ಯಾವುದೇ ಕ್ರಮ ತೆಗೆದುಕೊಂಡಿಲ್ಲ ಎಂದು ಹಿರಿಯ ಪತ್ರಕರ್ತರಾದ ಎನ್.ರಾಮ್ ಅವರು ಬಿಜೆಪಿ ನೇತೃತ್ವದ ಕೇಂದ್ರ ಸರಕಾರವನ್ನು ಪ್ರಶ್ನೆ ಮಾಡಿದ್ದಾರೆ.

ರಫೇಲ್ ಖರೀದಿ ವ್ಯವಹಾರಕ್ಕೆ ಸಂಬಂಧಿಸಿದ ದಾಖಲೆಗಳು ಕಳುವಾಗಿವೆ. ಆ ಮೂಲಕವೇ ಅದರ ಬಗೆಗಿನ ಮಾಹಿತಿಯು ವಿಪಕ್ಷಗಳಿಗೆ ಹಾಗೂ ಕೆಲ ಮಾಧ್ಯಮಗಳಿಗೆ ತಲುಪಿವೆ. ಈ ಕುರಿತು ತನಿಖೆ ಮಾಡುತ್ತಿದ್ದೇವೆ ಎಂದು ಎಂದು ಅಟಾರ್ನಿ ಜನರಲ್ ಕೆ.ಕೆ.ವೇಣುಗೋಪಾಲ್ ಅವರು ಹೇಳಿಕೆ ನೀಡಿದ್ದಾರೆ.

Rafale deal documents: we are committed to protecting our sources, says N. Ram

ಇನ್ನು ಸೋರಿಕೆಯಾದ ರಫೇಲ್ ವ್ಯವಹಾರದ ದಾಖಲೆಗಳನ್ನು ಪ್ರಕಟ ಮಾಡಿದ ಪತ್ರಿಕೆಗಳ ವಿರುದ್ಧ ಕೂಡ ಕ್ರಮ ಕೈಗೊಳ್ಳುವುದಾಗಿ ಕೇಂದ್ರ ಸರಕಾರವು ಸುಪ್ರೀಂ ಕೋರ್ಟ್ ಗೆ ಹೇಳಿದೆ. ಕೇಂದ್ರದ ಈ ಹೇಳಿಕೆಗೆ ಪ್ರತಿಕ್ರಿಯಿಸಿರುವ ಪತ್ರಕರ್ತ ಎನ್.ರಾಮ್, ನಮ್ಮ ಮಾಹಿತಿ ಮೂಲಗಳನ್ನು ಕಾಪಾಡಿಕೊಳ್ಳುತ್ತೇವೆ. ಮಾಧ್ಯಮಗಳು ಈ ಬೆದರಿಕೆಗೆ ಹೆದರಬಾರದು. ಯಾವುದೋ ಹಳೇ ಕಾನೂನಿನ ಹಿಂದೆ ಅವಿತಿಟ್ಟುಕೊಳ್ಳುವ ಕೆಲಸವನ್ನು ಕೇಂದ್ರ ಸರಕಾರ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+