ರಫೇಲ್ ಪ್ರಕರಣದಲ್ಲಿ ಕೇಂದ್ರ ಸರ್ಕಾರಕ್ಕೆ ಮತ್ತೆ ಕ್ಲೀನ್ ಚಿಟ್
ನವದೆಹಲಿ, ನವೆಂಬರ್ 14: ರಫೇಲ್ ಯುದ್ಧ ವಿಮಾನಗಳ ಖರೀದಿಯಲ್ಲಿ ಭಾರಿ ಅವ್ಯವಹಾರ ನಡೆದಿದೆ ಎಂಬ ಆರೋಪವನ್ನು ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರದ ಮೇಲೆ ಹೊರೆಸಲಾಗಿತ್ತು. ಎನ್‌ಡಿಎ ಸರ್ಕಾರವು ಫ್ರಾನ್ಸ್ ಜತೆ ನಡೆಸಿದ ಒಪ್ಪಂದದಲ್ಲಿ ಅವ್ಯವಹಾರ ನಡೆದಿದೆ ಎಂಬುದನ್ನು ಸುಪ್ರೀಂಕೋರ್ಟ್ ನ್ಯಾಯಪೀಠವು ನವೆಂಬರ್ 14ರಂದು ತಳ್ಳಿಹಾಕಿದ್ದು, ಕೇಂದ್ರ ಸರ್ಕಾರಕ್ಕೆ ಕ್ಲೀನ್ ಚಿಟ್ ನೀಡಿದೆ.
ಕಳೆದ ಡಿಸೆಂಬರ್‌ನಲ್ಲಿ ನೀಡಲಾಗಿದ್ದ ತೀರ್ಪನ್ನು ಪ್ರಶ್ನಿಸಿ ಕಾಂಗ್ರೆಸ್ ಸೇರಿದಂತೆ ವಿಪಕ್ಷಗಳು ಮರು ಪರಿಶೀಲನಾ ಅರ್ಜಿಯನ್ನು ಸುಪ್ರೀಂಕೋರ್ಟ್ ಗುರುವಾರದಂದು ತಿರಸ್ಕರಿಸಿದೆ. ಈ ಮೂಲಕ ಎರಡು ಬಾರಿ ಕ್ಲೀನ್ ಚಿಟ್ ನೀಡಿದೆ.
36 ರಫೇಲ್ ಯುದ್ಧ ವಿಮಾನಗಳ ಖರೀದಿ ಒಪ್ಪಂದ ಪ್ರಕರಣದಲ್ಲಿ ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಡಿಸೆಂಬರ್‌ನಲ್ಲಿ ಕ್ಲೀನ್ ಚಿಟ್ ನೀಡಿತ್ತು. ಇದನ್ನು ಪ್ರಶ್ನಿಸಿ ಅರ್ಜಿದಾರರು ತೀರ್ಪು ಮರುಪರಿಶೀಲನಾ ಅರ್ಜಿ ಸಲ್ಲಿಸಿದ್ದರು. ಈ ಕುರಿತಂತೆ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಅವರ ನೇತೃತ್ವದ ನ್ಯಾ. ಸಂಜಯ್ ಕಿಶನ್ ಕೌಲ್ ಮತ್ತು ಕೆಎಂ ಜೋಸೆಫ್ ಅವರನ್ನು ಒಳಗೊಂಡ ಮೂವರು ಸದಸ್ಯರ ನ್ಯಾಯಪೀಠ ತೀರ್ಪು ಪ್ರಕಟಿಸಿದೆ.

ಯುದ್ಧ ವಿಮಾನಗಳ ತಯಾರಿಕೆಗೆ ಫ್ರಾನ್ಸ್‌ನ ಡಸಾಲ್ಟ್ ಏವಿಯೇಷನ್ ಸಂಸ್ಥೆ ಜತೆ 59 ಸಾವಿರ ಕೋಟಿ ರೂ ಒಪ್ಪಂದ ಮಾಡಿಕೊಳ್ಳಲಾಗಿತ್ತು. ಇದರ ಕುರಿತು ತನಿಖೆ ನಡೆಯಬೇಕು ಎಂದು ಆಗ್ರಹಿಸಿ ಸಲ್ಲಿಸಲಾಗಿದ್ದ ಎಲ್ಲ ಅರ್ಜಿಗಳನ್ನೂ 2018ರ ಡಿಸೆಂಬರ್‌ನಲ್ಲಿ ಸುಪ್ರೀಂಕೋರ್ಟ್ ವಜಾಗೊಳಿಸಿತ್ತು.
ಈಗಾಗಲೇ ಈ ಒಪ್ಪಂದಕ್ಕೆ ಸಂಬಂಧಿಸಿದ ಒಂದು ರಫೇಲ್ ಯುದ್ಧ ವಿಮಾನ ಭಾರತೀಯ ರಕ್ಷಣಾ ಪಡೆಯನ್ನು ಸೇರಿಕೊಂಡಿದೆ. ಉಳಿದ ವಿಮಾನಗಳು ಶೀಘ್ರದಲ್ಲಿಯೇ ಸೇರ್ಪಡೆಯಾಗಲಿವೆ ಎಂದು ಸರ್ಕಾರ ಹೇಳಿದೆ.












Click it and Unblock the Notifications