ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಫೇಲ್ ಪ್ರಕರಣದಲ್ಲಿ ಕೇಂದ್ರ ಸರ್ಕಾರಕ್ಕೆ ಮತ್ತೆ ಕ್ಲೀನ್ ಚಿಟ್

|
Google Oneindia Kannada News

ನವದೆಹಲಿ, ನವೆಂಬರ್ 14: ರಫೇಲ್ ಯುದ್ಧ ವಿಮಾನಗಳ ಖರೀದಿಯಲ್ಲಿ ಭಾರಿ ಅವ್ಯವಹಾರ ನಡೆದಿದೆ ಎಂಬ ಆರೋಪವನ್ನು ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರದ ಮೇಲೆ ಹೊರೆಸಲಾಗಿತ್ತು. ಎನ್‌ಡಿಎ ಸರ್ಕಾರವು ಫ್ರಾನ್ಸ್‌ ಜತೆ ನಡೆಸಿದ ಒಪ್ಪಂದದಲ್ಲಿ ಅವ್ಯವಹಾರ ನಡೆದಿದೆ ಎಂಬುದನ್ನು ಸುಪ್ರೀಂಕೋರ್ಟ್ ನ್ಯಾಯಪೀಠವು ನವೆಂಬರ್ 14ರಂದು ತಳ್ಳಿಹಾಕಿದ್ದು, ಕೇಂದ್ರ ಸರ್ಕಾರಕ್ಕೆ ಕ್ಲೀನ್ ಚಿಟ್ ನೀಡಿದೆ.

ಕಳೆದ ಡಿಸೆಂಬರ್‌ನಲ್ಲಿ ನೀಡಲಾಗಿದ್ದ ತೀರ್ಪನ್ನು ಪ್ರಶ್ನಿಸಿ ಕಾಂಗ್ರೆಸ್ ಸೇರಿದಂತೆ ವಿಪಕ್ಷಗಳು ಮರು ಪರಿಶೀಲನಾ ಅರ್ಜಿಯನ್ನು ಸುಪ್ರೀಂಕೋರ್ಟ್ ಗುರುವಾರದಂದು ತಿರಸ್ಕರಿಸಿದೆ. ಈ ಮೂಲಕ ಎರಡು ಬಾರಿ ಕ್ಲೀನ್ ಚಿಟ್ ನೀಡಿದೆ.

36 ರಫೇಲ್ ಯುದ್ಧ ವಿಮಾನಗಳ ಖರೀದಿ ಒಪ್ಪಂದ ಪ್ರಕರಣದಲ್ಲಿ ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಡಿಸೆಂಬರ್‌ನಲ್ಲಿ ಕ್ಲೀನ್ ಚಿಟ್ ನೀಡಿತ್ತು. ಇದನ್ನು ಪ್ರಶ್ನಿಸಿ ಅರ್ಜಿದಾರರು ತೀರ್ಪು ಮರುಪರಿಶೀಲನಾ ಅರ್ಜಿ ಸಲ್ಲಿಸಿದ್ದರು. ಈ ಕುರಿತಂತೆ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಅವರ ನೇತೃತ್ವದ ನ್ಯಾ. ಸಂಜಯ್ ಕಿಶನ್ ಕೌಲ್ ಮತ್ತು ಕೆಎಂ ಜೋಸೆಫ್ ಅವರನ್ನು ಒಳಗೊಂಡ ಮೂವರು ಸದಸ್ಯರ ನ್ಯಾಯಪೀಠ ತೀರ್ಪು ಪ್ರಕಟಿಸಿದೆ.

Rafale Deal Verdict:Supreme Court dismisses review petitions

ಯುದ್ಧ ವಿಮಾನಗಳ ತಯಾರಿಕೆಗೆ ಫ್ರಾನ್ಸ್‌ನ ಡಸಾಲ್ಟ್ ಏವಿಯೇಷನ್ ಸಂಸ್ಥೆ ಜತೆ 59 ಸಾವಿರ ಕೋಟಿ ರೂ ಒಪ್ಪಂದ ಮಾಡಿಕೊಳ್ಳಲಾಗಿತ್ತು. ಇದರ ಕುರಿತು ತನಿಖೆ ನಡೆಯಬೇಕು ಎಂದು ಆಗ್ರಹಿಸಿ ಸಲ್ಲಿಸಲಾಗಿದ್ದ ಎಲ್ಲ ಅರ್ಜಿಗಳನ್ನೂ 2018ರ ಡಿಸೆಂಬರ್‌ನಲ್ಲಿ ಸುಪ್ರೀಂಕೋರ್ಟ್ ವಜಾಗೊಳಿಸಿತ್ತು.

ಈಗಾಗಲೇ ಈ ಒಪ್ಪಂದಕ್ಕೆ ಸಂಬಂಧಿಸಿದ ಒಂದು ರಫೇಲ್ ಯುದ್ಧ ವಿಮಾನ ಭಾರತೀಯ ರಕ್ಷಣಾ ಪಡೆಯನ್ನು ಸೇರಿಕೊಂಡಿದೆ. ಉಳಿದ ವಿಮಾನಗಳು ಶೀಘ್ರದಲ್ಲಿಯೇ ಸೇರ್ಪಡೆಯಾಗಲಿವೆ ಎಂದು ಸರ್ಕಾರ ಹೇಳಿದೆ.

English summary
Rafale Deal Verdict: The Supreme Court on Thursday dismissed the review petitions that had challenged its December 14, 2018 verdict giving a clean chit to the NDA government.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X