ವಾಯುಪಡೆಗೆ ರಫೇಲ್ ಸೇರ್ಪಡೆ; ಭಾರತಕ್ಕೆ ಬಂದ ಫ್ರಾನ್ಸ್ ಸಚಿವೆ
ನವದೆಹಲಿ, ಸೆಪ್ಟೆಂಬರ್ 10: ರಫೇಲ್ ಯುದ್ಧ ವಿಮಾನಗಳು ಇಂದು ಅಧಿಕೃತವಾಗಿ ಭಾರತದ ವಾಯುಪಡೆಗೆ ಸೇರ್ಪಡೆಗೊಳ್ಳಲಿವೆ. ಫ್ರಾನ್ಸ್ ರಕ್ಷಣಾ ಸಚಿವೆ ಫ್ಲಾರೆನ್ಸ್ ಪಾರ್ಲೆ ಈ ಕಾರ್ಯಕ್ರಮಕ್ಕಾಗಿ ನವದೆಹಲಿಗೆ ಆಗಮಿಸಿದ್ದಾರೆ.
ಅಂಬಾಲ ವಾಯುನೆಲೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ 5 ರಫೇಲ್ ಯುದ್ಧ ವಿಮಾನಗಳನ್ನು ವಾಯುಪಡೆಗೆ ಸೇರಿಸಿಕೊಳ್ಳಲಾಗುತ್ತದೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಕಾರ್ಯಕ್ರಮಲ್ಲಿ ಪಾಲ್ಗೊಳ್ಳಲಿದ್ದಾರೆ.

ಭಾರತ ಫ್ರಾನ್ಸ್ನಿಂದ 36 ರಫೇಲ್ ಯುದ್ಧ ವಿಮಾನಗಳನ್ನು ಖರೀದಿ ಮಾಡಲಿದೆ. ಇವುಗಳಲ್ಲಿ 10 ವಿಮಾನಗಳನ್ನು ಡಾಸೋ ಏವಿಯೇಷನ್ ಕಂಪನಿ ಭಾರತಕ್ಕೆ ನೀಡಿದೆ. ಇವುಗಳಲ್ಲಿ 5 ವಿಮಾನಗಳು ಜುಲೈ 29ರಂದು ಭಾರತಕ್ಕೆ ಬಂದಿವೆ.
ಸರ್ವಧರ್ಮ ಪೂಜೆ : ಅಂಬಾಲ ವಾಯುನೆಲೆಯಲ್ಲಿ ರಫೇಲ್ ವಾಯುಪಡೆ ಸೇರ್ಪಡೆ ಕಾರ್ಯಕ್ರಮದಲ್ಲಿ ಸರ್ವಧರ್ಮ ಪೂಜೆಯನ್ನು ಮಾಡಲಾಗುತ್ತದೆ. ಫ್ರಾನ್ಸ್ ಅಧಿಕಾರಿಗಳ ಜೊತೆ ಬಂದಿರುವ ರಕ್ಷಣಾ ಸಚಿವೆ ಫ್ಲಾರೆನ್ಸ್ ಪಾರ್ಲೆ ವಾಯುನೆಲೆಗೆ ಬರುತ್ತಿದ್ದಂತೆ ಗೌರವ ವಂದನೆ ಸಲ್ಲಿಸಲಾಗುತ್ತದೆ.
ಈಗ ಆಗಿರುವ ಒಪ್ಪಂದದ ಜೊತೆಗೆ ಇನ್ನೂ 36 ರಫೇಲ್ ಯುದ್ಧ ವಿಮಾನಗಳನ್ನು ಭಾರತ ಫ್ರಾನ್ಸ್ನಿಂದ ಖರೀದಿ ಮಾಡುವ ನಿರೀಕ್ಷೆ ಇದೆ. ಈ ಕುರಿತ ಮಾತುಕತೆ ಇಂದು ವಿಮಾನಗಳ ಸೇರ್ಪಡೆ ಕಾರ್ಯಕ್ರಮದ ಬಳಿಕ ನಡೆಯಲಿದೆ.
Minister of the Armed Forces of France Florence Parly receives a ceremonial Guard of Honour on her arrival at Delhi.
— ANI (@ANI) September 10, 2020
She will attend the Rafale induction ceremony at Ambala. pic.twitter.com/6XHwxXhbZV
ಭಾರತಕ್ಕೆ ಈಗಾಗಲೇ 5 ರಫೇಲ್ ಯುದ್ಧ ವಿಮಾನಗಳು ಆಗಮಿಸಿವೆ. ನವೆಂಬರ್ ತಿಂಗಳಿನಲ್ಲಿ 5 ರಿಂದ 10 ವಿಮಾನಗಳು ಭಾರತಕ್ಕೆ ಆಗಮಿಸುವ ನಿರೀಕ್ಷೆ ಇದೆ. 5 ವಿಮಾನಗಳನ್ನು ಫ್ರಾನ್ಸ್ನಲ್ಲಿ ಭಾರತೀಯ ವಾಯುಪಡೆ ಪೈಲೆಟ್ಗಳ ತರಬೇತಿಗಾಗಿ ಇಟ್ಟುಕೊಳ್ಳಲಾಗಿದೆ.
-
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
April 13 Horoscope: 12 ರಾಶಿಗಳಿಗೆ ಇಂದು ಪ್ರೇಮ, ಹಣಕಾಸು, ಉದ್ಯೋಗದಲ್ಲಿ ಏನು ಹೇಳುತ್ತದೆ ನಿಮ್ಮ ರಾಶಿ? -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ












Click it and Unblock the Notifications