ಭಾರತೀಯ ವಾಯುಪಡೆಗೆ ಸೆ.10ರಂದು ರಫೇಲ್ ಜೆಟ್ ಸೇರ್ಪಡೆ
ನವದೆಹಲಿ, ಸೆಪ್ಟೆಂಬರ್ 09 : ಭಾರತ ಫ್ರಾನ್ಸ್ನಿಂದ ಖರೀದಿ ಮಾಡಿರುವ ರಫೇಲ್ ಯುದ್ಧ ವಿಮಾನಗಳು ಸೆಪ್ಟೆಂಬರ್ 10ರಂದು ಅಧಿಕೃತವಾಗಿ ಭಾರತೀಯ ವಾಯುಪಡೆಗೆ ಸೇರ್ಪಡೆಗೊಳ್ಳಲಿವೆ. 5 ರಫೇಲ್ ಯುದ್ಧ ವಿಮಾನ ಈಗಾಗಲೇ ಆಗಮಿಸಿವೆ.
ಅಂಬಾಲ ವಾಯುನೆಲೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ರಫೇಲ್ ಯುದ್ಧ ವಿಮಾನ ವಾಯುಪಡೆಗೆ ಸೇರಲಿದೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್, ಫ್ರಾನ್ಸ್ ರಕ್ಷಣಾ ಸಚಿವ ಫ್ಲೋರೆನ್ಸ್ ಪಾರ್ಲೆ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ಜುಲೈನಲ್ಲಿ 29ರಂದು 5 ರಫೇಲ್ ಯುದ್ಧ ವಿಮಾನಗಳು ಫ್ರಾನ್ಸ್ನಿಂದ ಭಾರಕ್ಕೆ ಬಂದಿದ್ದವು. ಅಂಬಾಲ ವಾಯುನೆಲೆಯಲ್ಲಿ ವಿಮಾನಗಳಿಗೆ ಅದ್ದೂರಿ ಸ್ವಾಗತ ನೀಡಲಾಗಿತ್ತು. ಅಧಿಕೃತವಾಗಿ ಅವುಗಳನ್ನು ವಾಯುಪಡೆಗೆ ಸೇರಿಸಿಕೊಳ್ಳಲಾಗುತ್ತದೆ.
ಈ ಕಾರ್ಯಕ್ರಮದ ಬಳಿಕ ಸಚಿವ ರಾಜನಾಥ್ ಸಿಂಗ್ ಮತ್ತು ಫ್ರಾನ್ಸ್ ರಕ್ಷಣಾ ಸಚಿವ ಫ್ಲೋರೆನ್ಸ್ ಪಾರ್ಲೆ ಸಭೆಯನ್ನು ನಡೆಸಲಿದ್ದಾರೆ. ಉಭಯ ದೇಶಗಳ ನಡುವಿನ ರಕ್ಷಣಾ ಇಲಾಖೆಗೆ ದ್ವಿಪಕ್ಷೀಯ ಸಂಬಂಧದ ಬಗ್ಗೆ ಚರ್ಚೆ ನಡೆಸಲಿದ್ದಾರೆ.

ಭಾರತಕ್ಕೆ ಬಂದಿರುವ 5 ವಿಮಾನ
ಭಾರತ ಮತ್ತು ಫ್ರಾನ್ಸ್ ನಡುವೆ ರಫೇಲ್ ಯುದ್ಧ ವಿಮಾನ ಖರೀದಿ ಒಪ್ಫಂದ ನಡೆದಿದೆ. ಸುಮಾರು 59,000 ಕೋಟಿ ರೂ. ಒಪ್ಪಂದವಿದು. ಫ್ರಾನ್ಸ್ ಭಾರತಕ್ಕೆ 36 ರಫೇಲ್ ಯುದ್ಧ ವಿಮಾನಗಳನ್ನು ಪೂರೈಕೆ ಮಾಡಲಿದೆ. ಈ ಪೈಕಿ ಡಾಸೋ ಏವಿಯೇಷನ್ ಕಂಪನಿ 10 ವಿಮಾನ ಹಸ್ತಾಂತರ ಮಾಡಿದೆ.

ಭಾರತೀಯರಿಗೆ ತರಬೇತಿ
5 ರಫೇಲ್ ಯುದ್ಧ ವಿಮಾನಗಳು ಭಾರತಕ್ಕೆ ಬಂದಿದ್ದು, ಸೆ.10ರಂದು ಅಧಿಕೃತವಾಗಿ ವಾಯುಪಡೆ ಸೇರಲಿವೆ. ಇನ್ನೂ 5 ವಿಮಾನ ಫ್ರಾನ್ಸ್ನಲ್ಲಿಯೇ ಇದ್ದು, ಭಾರತೀಯ ವಾಯಪಡೆ ಪೈಲೆಟ್ಗಳ ತರಬೇತಿಗಾಗಿ ಬಳಕೆ ಮಾಡಲಾಗುತ್ತಿದೆ.

ಜುಲೈ 29ರಂದು ಆಗಮನ
5 ವಿಮಾನಗಳು ಜುಲೈ 29ರಂದು ಭಾರತಕ್ಕೆ ಬಂದಿವೆ.ಈಗ ಆಗಿರುವ ಒಪ್ಪಂದದ ಜೊತೆ ಭಾರತ ಇನ್ನೂ 36 ರಫೇಲ್ ಯುದ್ಧ ವಿಮಾನಗಳನ್ನು ಫ್ರಾನ್ಸ್ನಿಂದ ಖರೀದಿ ಮಾಡುವ ಸಾಧ್ಯತೆ ಇದೆ. ಇದಕ್ಕಾಗಿ ಗುರುವಾರ ಪ್ರಾಥಮಿಕ ಹಂತದ ಮಾತುಕತೆಗಳು ನಡೆಯಲಿವೆ.

ನವೆಂಬರ್ನಲ್ಲಿ ಮತ್ತೆ ಆಗಮನ
ಡಾಸೋ ಏವಿಯೇಷನ್ ಕಂಪನಿ ಈಗಾಗಲೇ 10 ರಫೇಲ್ ಯುದ್ಧ ವಿಮಾನ ಹಸ್ತಾಂತರ ಮಾಡಿದೆ. ನವೆಂಬರ್ನಲ್ಲಿ 4 ರಿಂದ 5 ವಿಮಾನ ಭಾರತಕ್ಕೆ ಬರಲಿದೆ ಎಂದು ಅಂದಾಜಿಸಲಾಗಿದೆ. 2021ರೊಳಗೆ ಎಲ್ಲಾ 36 ವಿಮಾನ ಭಾರತದ ವಾಯುಪಡೆ ಸೇರಲಿದೆ.
-
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Anushka Shetty Marriage: ಬೆಂಗಳೂರಿನ ಖ್ಯಾತ ಉದ್ಯಮಿ ಜೊತೆ ನಟಿ ಅನುಷ್ಕಾ ಶೆಟ್ಟಿ ಮದುವೆ, ಈ ವರ್ಷದಲ್ಲೇ ಮುಹೂರ್ತ: ವರದಿ -
1 ರೂಪಾಯಿಗೆ 1 ಲೀಟರ್ ಹಾಲು: ಫ್ಲಿಪ್ಕಾರ್ಟ್ ವಿರುದ್ಧ ಸಿಡಿದೆದ್ದ ಡಿ.ಕೆ. ಸುರೇಶ್; ಪ್ರಧಾನಿ ಮೋದಿಗೆ ದೂರು -
ಬಿಜೆಪಿಯಿಂದ ನಟ ವಿಜಯ್ಗೆ ಡಿಸಿಎಂ ಹುದ್ದೆ, 80 ಸೀಟುಗಳ ಆಫರ್; ತಮಿಳುನಾಡು ಚುನಾವಣೆಗೆ ಹೊಸ ಮೈತ್ರಿ ಲೆಕ್ಕಾಚಾರ -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
LPG New Rule: ಎಲ್ಪಿಜಿ ಹೊಸ ನಿಯಮ: ಪಿಎನ್ಜಿ ಸಂಪರ್ಕ ಇದ್ದರೆ ಇನ್ನು ಮುಂದೆ ಸಿಲಿಂಡರ್ ಸಿಗಲ್ಲ -
Government Employees: ಪಶ್ಚಿಮ ಬಂಗಾಳ ಸರ್ಕಾರಿ ನೌಕರರಿಗೆ ಸಿಎಂ ಮಮತಾ ಬ್ಯಾನರ್ಜಿ ಬಂಪರ್ ಕೊಡುಗೆ -
ರಾಜ್ಯದಲ್ಲಿ ಕಮರ್ಷಿಯಲ್ ಉದ್ದೇಶಕ್ಕೆ ಗೃಹಬಳಕೆ LPG ಸಿಲಿಂಡರ್ ಬಳಸಿದವರ ಮೇಲೆ ಅಧಿಕಾರಿಗಳ ಖಡಕ್ ದಾಳಿ












Click it and Unblock the Notifications