ರೈತರ ಪರವಾಗಿದ್ದವರ ಮೇಲೆ ಕೇಂದ್ರ ಸರ್ಕಾರ ಐಟಿ ದಾಳಿ ಮಾಡಿಸಿದೆ: ರಾಹುಲ್ ಗಾಂಧಿ

ನವದೆಹಲಿ, ಮಾರ್ಚ್ 04: ಕೇಂದ್ರ ಸರ್ಕಾರವು ರೈತರ ಪರವಾಗಿದ್ದವರ ಮೇಲೆ ಐಟಿ ದಾಳಿ ಮಾಡಿಸಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.

ಬಾಲಿವುಡ್ ನಟಿ ತಾಪ್ಸಿ ಪನ್ನು, ನಿರ್ಮಾಪಕ ಅನುರಾಗ್ ಕಶ್ಯಪ್ ಮತ್ತಿತರರ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿದ ನಂತರ ರಾಹುಲ್ ಗಾಂಧಿ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ತಾಳಕ್ಕೆ ತಕ್ಕಂತೆ ಐಟಿ ಏಜೆನ್ಸಿ ಕುಣಿಯುತ್ತಿದೆ, ರೈತರನ್ನು ಬೆಂಬಲಿಸುವವರನ್ನು ಟಾರ್ಗೆಟ್ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

Rahul Accuses Modi Govt Of Carrying Out Raids Against Those Who Are Pro-Farmers

ಹಿಂದಿಯ ನುಡಿಗಟ್ಟುಗಳನ್ನು ಉಲ್ಲೇಖಿಸಿ ಟ್ವೀಟ್ ಮಾಡಿರುವ ಅವರು, ಆದಾಯ ತೆರಿಗೆ ಇಲಾಖೆ ತನ್ನ ತಾಳಕ್ಕೆ ಕುಣಿಯುವಂತೆ ಕೇಂದ್ರ ಸರ್ಕಾರ ಮಾಡಿದೆ ಎಂದು ಟೀಕಿಸಿದ್ದಾರೆ.

ಬಾಲಿವುಡ್ ನಟಿ ತಾಪ್ಸಿ ಪನ್ನು, ನಿರ್ದೇಶಕ ಮತ್ತು ನಿರ್ಮಾಪಕರಾದ ಅನುರಾಗ್ ಕಶ್ಯಪ್ ಹಾಗೂ ರಿಲಾಯನ್ಸ್ ಎಂಟರ್‌ಟೈನ್‌ಮೆಂಟ್ ಗ್ರೂಪ್‌ನ ಸಿಇಒ ಶಿಭಾಶಿಶ್ ಸರ್ಕಾರ್ ಅವರಿಗೆ ಸೇರಿದ ವಿವಿಧ ಸ್ಥಳಗಳಲ್ಲಿ ಆದಾಯ ತೆರಿಗೆ ಇಲಾಖೆ ಶೋಧಕಾರ್ಯ ನಡೆಸಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+