ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

BREAKING: ರಾಹುಲ್ ಗಾಂಧಿಗೆ ಅಧ್ಯಕ್ಷ ಪಟ್ಟ: ಕಾಂಗ್ರೆಸ್ ದಿಢೀರ್ ಘೋಷಣೆ

ಪದೇ ಪದೇ ಅನಾರೋಗ್ಯಕ್ಕೆ ಕಾರಣವಾಗುತ್ತಿರುವ ಹಿನ್ನೆಲೆಯಲ್ಲಿ ಸೋನಿಯಾ ಜೀ ಅವರು, ಉಪಾಧ್ಯಕ್ಷ ರಾಹುಲ್ ಗಾಂಧಿಯವರಿಗೆ ಅಧ್ಯಕ್ಷರನ್ನಾಗಿ ಆರಿಸಲಾಗಿದೆ ಎಂದು ಕಾಂಗ್ರೆಸ್ ಹೇಳಿದೆ.

By Oneindia Staff Writer
|
Google Oneindia Kannada News

ನವದೆಹಲಿ, ಏಪ್ರಿಲ್ 1: ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿಯವರನ್ನು ಪಕ್ಷದ ಅಧ್ಯಕ್ಷರನ್ನಾಗಿ ನೇಮಿಸಿ, ಪಕ್ಷದ ಅಧಿನಾಯಕಿ ಸೋನಿಯಾ ಗಾಂಧಿ ಆದೇಶ ಹೊರಡಿಸಿದ್ದಾರೆ. ಈ ಬಗ್ಗೆ ಕಾಂಗ್ರೆಸ್ ಪಕ್ಷವು ಟ್ವಿಟರ್ ಮೂಲಕ ಅಧಿಕೃತವಾಗಿ ಪ್ರಕಟಿಸಿದೆ.

ಪದೇ ಪದೇ ಅನಾರೋಗ್ಯಕ್ಕೆ ಕಾರಣವಾಗುತ್ತಿರುವ ಹಿನ್ನೆಲೆಯಲ್ಲಿ ಸೋನಿಯಾ ಜೀ ಅವರು, ಉಪಾಧ್ಯಕ್ಷ ರಾಹುಲ್ ಗಾಂಧಿಯವರಿಗೆ ಅಧ್ಯಕ್ಷರನ್ನಾಗಿ ಆರಿಸಲಾಗಿದೆ ಎಂದು ಹೇಳಿರುವ ಕಾಂಗ್ರೆಸ್, ಇದು ಅವಿರೋಧ ಆಯ್ಕೆ ಎಂದು ಸ್ಪಷ್ಟಪಡಿಸಿದೆ.

Rahul declared AICC President suddenly

ಉಪಾಧ್ಯಕ್ಷ ಸ್ಥಾನಕ್ಕೆ ಯಾರು ?: ಇದೀಗ, ರಾಹುಲ್ ಗಾಂಧಿಯವರಿಂದ ತೆರವಾಗಿರುವ ಪಕ್ಷದ ಉಪಾಧ್ಯಕ್ಷ ಸ್ಥಾನಕ್ಕೆ ಯಾರು ಎಂಬುದು ಇನ್ನೂ ಘೋಷಣೆಯಾಗಿಲ್ಲ. ಈ ಬಗ್ಗೆ ಒನ್ ಇಂಡಿಯಾಕ್ಕೆ ಹೆಸರನ್ನೇಳಲು ಇಚ್ಛಿಸದ ಹಿರಿಯ ಕಾಂಗ್ರೆಸ್ಸಿಗರೊಬ್ಬರು, ಮಾಹಿತಿ ನೀಡಿದ್ದು, ಉಪಾಧ್ಯಕ್ಷ ಸ್ಥಾನಕ್ಕೆ ಹಿರಿಯ ಕಾಂಗ್ರೆಸ್ಸಿಗ ಹಾಗೂ ಲೋಕಸಭೆಯ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆಯವರನ್ನು ನೇಮಿಸುವ ಸಾಧ್ಯತೆಗಳಿವೆ ಎಂದು ಹೇಳಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆ ಪಡೆಯಲು 'ಒನ್ ಇಂಡಿಯಾ' ಮಲ್ಲಿಕಾರ್ಜುನ ಖರ್ಗೆಯವರನ್ನು ಸಂಪರ್ಕಿಸಲು ಪ್ರಯತ್ನಿಸದರೆ ಅವರೂ ಸಂಪರ್ಕಕ್ಕೆ ಸಿಕ್ಕಿಲ್ಲ.

ಆದರೆ, ಈ ಮಾಹಿತಿಯನ್ನು ಅಲ್ಲಗಳೆದಿರುವ ರಾಹುಲ್ ಗಾಂಧಿಯವರ ಆಪ್ತ ವಲಯದ ನಾಯಕರು, ಜನರ ಮೇಲೆ ಪ್ರಭಾವ ಬೀರಲು ಅನುಕೂಲವಾಗುವ ನಿಟ್ಟಿನಲ್ಲಿ ಪ್ರಿಯಾಂಕಾ ಗಾಂಧಿಯವರನ್ನು ಉಪಾಧ್ಯಕ್ಷರನ್ನಾಗಿಸುವ ಬಗ್ಗೆ ಮಾತುಕತೆ ನಡೆಯುತ್ತಿದೆ ಎಂದು ಹೇಳಿದ್ದಾರೆ.

ಈ ನಿಟ್ಟಿನಲ್ಲಿ ಇಂದು ಸಂಜೆಯೇ, ಕಾಂಗ್ರೆಸ್ ಹಿರಿಯ ನಾಯಕರು ಪ್ರಿಯಾಂಕಾ ಗಾಂಧಿಯವರ ಬಳಿಗೆ ತೆರಳಿ ಅವರ ಮನವೊಲಿಸಲು ಪ್ರಯತ್ನಿಸಲಿದ್ದಾರೆಂದು ಹೇಳಲಾಗಿದೆ.

(ವಿ.ಸೂ: ಇದು ಏಪ್ರಿಲ್ 1ರ ಮೂರ್ಖರ ದಿನಕ್ಕಾಗಿ ಮಾಡಿದ ಕಾಲ್ಪನಿಕ ಸುದ್ದಿ.)

English summary
The Congress suddenly announces that its Vice President Rahul Gandhi elected as president of AICC President. The decision was taken unanimously, the party said on Twitter on April 1, 2017. Disclaimer: This news is fake and made to comply with the fools day celebration.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X