ಸಿಂಗಪುರ: ಭಾರತೀಯ ಮೂಲದ ಸಿಇಒಗಳ ಜೊತೆ ರಾಹುಲ್ ಚರ್ಚೆ

ಸಿಂಗಪುರ, ಮಾರ್ಚ್ 08: ಮೂರು ದಿನಗಳ ಸಿಂಗಪುರ ಮತ್ತು ಮಲೇಶಿಯಾ ಪ್ರವಾಸದಲ್ಲಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಇಲ್ಲಿನ ಭಾರತೀಯ ಮೂಲದ ಸಿಇಒಗಳ ಜೊತೆ ಮಾತುಕತೆ ನಡೆಸಿದರು.

ಉದ್ಯೋಗ, ಬಂಡವಾಳ ಮತ್ತು ಭಾರತದ ಆರ್ಥಿಕ ಸ್ಥಿತಿಗತಿಯ ಬಗ್ಗೆ ರಾಹುಲ್ ಗಾಂಧಿ ಚರ್ಚೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ. 'ಗ್ರಾಮೀಣ ಪ್ರದೇಶದ ಜನರು ನಗರ ಪ್ರದೇಶಕ್ಕೆ ವಲಸೆ ಬರುವ ಪ್ರಕರಣಗಳು ಭಾರತದಲ್ಲಿ ಹೆಚ್ಚುತ್ತಿದೆ. ಎಲ್ಲರನ್ನೂ ಒಟ್ಟಾಗಿ ಪ್ರಗತಿಯ ಪಥದತ್ತ ಕೊಂಡೊಯ್ಯುವ ಬದಲಾವಣೆ ನಮಗೆ ಅಗತ್ಯವಿದೆ' ಎಂದು ಇದೇ ಸಂದರ್ಭದಲ್ಲಿ ಅವರು ಹೇಳಿದರು.

ಇಂದು(ಮಾ.8) ಅವರು ಸಿಂಗಪುರದ ರಾಷ್ಟ್ರೀಯ ವಿಶ್ವವಿದ್ಯಾಲಯದ ಲೀ ಕೌನ್ ಯು ಸ್ಕೂಲ್ ಆಫ್ ಪಬ್ಲಿಕ್ ಪಾಲಿಸಿಯನ್ನುದ್ದೇಶಿಸಿ ಮಾತನಾಡಲಿದ್ದಾರೆ ಎಂದು ಕಾಂಗ್ರೆಸ್ ನ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ತಿಳಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+