Rahul Gandhi: ಎಲ್ಲರನ್ನೂ ಬಂಧಿಸಿ, ನಾವು ಹೆದರಲ್ಲ: ಮೋದಿ ಸರ್ಕಾರಕ್ಕೆ ರಾಹುಲ್‌ ಗಾಂಧಿ ನೇರ ಸವಾಲು!

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹಾಗೂ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ವಿರುದ್ಧ ಕಾಂಗ್ರೆಸ್‌ ನಾಯಕ ರಾಹುಲ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಕಳೆದ ಒಂದು ದಶಕಕ್ಕೂ ಹೆಚ್ಚು ಕಾಲದಿಂದ ಮೋದಿ ಮತ್ತು ಆರ್‌ಎಸ್‌ಎಸ್‌ ವಿರುದ್ಧ ಹೋರಾಡುತ್ತಿದ್ದು, ಅವರ ಕಾರ್ಯವೈಖರಿಯನ್ನು ಚೆನ್ನಾಗಿ ಅರ್ಥಮಾಡಿಕೊಂಡಿದ್ದೇನೆ ಎಂದು ಹೇಳಿದ್ದಾರೆ. ಸಂವಿಧಾನವನ್ನು ರಕ್ಷಿಸಲು ಹಾಗೂ ಭಾರತೀಯ ಜನರ ಧ್ವನಿಯನ್ನು ಕಾಪಾಡಲು ಹೋರಾಟ ಮುಂದುವರಿಸುವುದಾಗಿ ಅವರು ತಿಳಿಸಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಹಂಚಿಕೊಂಡಿರುವ ಸಂದೇಶದಲ್ಲಿ ರಾಹುಲ್‌ ಗಾಂಧಿ, ಮೋದಿ ಮತ್ತು ಆರ್‌ಎಸ್‌ಎಸ್‌ ವಿರುದ್ಧದ ತಮ್ಮ ರಾಜಕೀಯ ಹೋರಾಟವನ್ನು ಉಲ್ಲೇಖಿಸಿದ್ದಾರೆ. ತಮ್ಮ ಸಂದೇಶದಲ್ಲಿ ನರೇಂದ್ರ ಮೋದಿ, ಅಮಿತ್‌ ಶಾ, ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್‌ ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್‌ ದೋವಲ್‌ ಅವರ ಹೆಸರನ್ನೂ ಪ್ರಸ್ತಾಪಿಸಿದ್ದಾರೆ.

Rahul Gandhi Arrest Us All We Won t Back Down Congress leader Rahul Challenges Narendra Modi Government

'ಎಷ್ಟೇ ಪೊಲೀಸರನ್ನು ಕರೆತಂದರೂ ನಾವು ಹಿಂದೆ ಸರಿಯಲ್ಲ'

ತಮ್ಮ ಸಂದೇಶದಲ್ಲಿ ಮೋದಿ ನೇತೃತ್ವದ ಆಡಳಿತದ ವಿರುದ್ಧ ತೀವ್ರ ಟೀಕೆ ವ್ಯಕ್ತಪಡಿಸಿರುವ ರಾಹುಲ್‌ ಗಾಂಧಿ, ಪ್ರತಿಭಟನೆಗಳನ್ನು ಹತ್ತಿಕ್ಕಲು ಎಷ್ಟೇ ಪೊಲೀಸರನ್ನು ನಿಯೋಜಿಸಿದರೂ ತಾವು ಹಿಂದೆ ಸರಿಯುವುದಿಲ್ಲ ಎಂದು ಹೇಳಿದ್ದಾರೆ.

'ಮೋದಿ ಅವರೇ, ನಿಮಗೆ ಬೇಕಾದುದನ್ನು ಮಾಡಿ. 10 ಸಾವಿರ, 20 ಸಾವಿರ ಅಥವಾ 50 ಸಾವಿರ ಪೊಲೀಸರನ್ನು ಕರೆಸಿ. ನಾಯಕರನ್ನು ಬಂಧಿಸಿ, ಯುವಜನರನ್ನು ಬಂಧಿಸಿ, ನಮ್ಮೆಲ್ಲರನ್ನೂ ಬಂಧಿಸಿ. ನಾವು ನಿಮ್ಮನ್ನು ಸುತ್ತುವರಿದಿದ್ದೇವೆ. ನಾವು ಹಿಂದೆ ಸರಿಯುವುದಿಲ್ಲ' ಎಂಬರ್ಥದಲ್ಲಿ ಅವರು ತಮ್ಮ ಸಂದೇಶದಲ್ಲಿ ಹೇಳಿದ್ದಾರೆ. ತಮ್ಮ ಬಳಿ ಈಗಾಗಲೇ ಅಗತ್ಯ ಮಾಹಿತಿಗಳಿವೆ ಎಂದು ಹೇಳಿರುವ ರಾಹುಲ್‌ ಗಾಂಧಿ, ಮುಂದಿನ ಹೋರಾಟದ ಕುರಿತು ಎಚ್ಚರಿಕೆಯ ಮಾತುಗಳನ್ನೂ ಆಡಿದ್ದಾರೆ.

Rahul Gandhi: ಸಂವಿಧಾನ ರಕ್ಷಣೆಗಾಗಿ ಹೋರಾಟ

ಭಾರತದ ಸಂವಿಧಾನವನ್ನು ರಕ್ಷಿಸುವುದು ಮತ್ತು ದೇಶದ ಜನರ ಧ್ವನಿಯನ್ನು ಉಳಿಸುವುದು ತಮ್ಮ ಹೋರಾಟದ ಪ್ರಮುಖ ಉದ್ದೇಶ ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ. ಕಳೆದ 10ರಿಂದ 15 ವರ್ಷಗಳಲ್ಲಿ ದೇಶದಲ್ಲಿ ನಡೆದಿರುವ ಬೆಳವಣಿಗೆಗಳು ಮತ್ತೆ ಮರುಕಳಿಸದಂತೆ ನೋಡಿಕೊಳ್ಳುವುದಾಗಿ ಅವರು ತಿಳಿಸಿದ್ದಾರೆ.

ಇದೇ ವೇಳೆ, ಪ್ರತಿಭಟನೆ ನಡೆಸುತ್ತಿರುವ ಯುವಜನರಿಗೆ ಬೆಂಬಲ ಸೂಚಿಸಿರುವ ಅವರು, ಪ್ರತಿಭಟನೆ ಮುಂದುವರಿಸುವಂತೆ ಕರೆ ನೀಡಿದ್ದಾರೆ. ದೇಶದ ಸಂವಿಧಾನದ ಮೇಲೆ ದಾಳಿ ನಡೆಸಿದ್ದಾರೆ ಎಂದು ತಾವು ಆರೋಪಿಸುವ ಆಡಳಿತ ಮತ್ತು ಅದರ ಭಾಗವಾಗಿರುವವರನ್ನು ರಾಜಕೀಯವಾಗಿ ಸೋಲಿಸುವುದಾಗಿ ಸಂದೇಶದಲ್ಲಿ ಹೇಳಿದ್ದಾರೆ.

ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾದ ಹೇಳಿಕೆ

ಮೋದಿ ಸರ್ಕಾರ ಮತ್ತು ಆರ್‌ಎಸ್‌ಎಸ್‌ ವಿರುದ್ಧ ರಾಹುಲ್‌ ಗಾಂಧಿ ನೀಡಿರುವ ಈ ಹೇಳಿಕೆ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗುವ ಸಾಧ್ಯತೆಯಿದೆ. ಸಂವಿಧಾನ, ಪ್ರಜಾಪ್ರಭುತ್ವ, ಚುನಾವಣಾ ವ್ಯವಸ್ಥೆ ಮತ್ತು ಯುವಜನರ ಪ್ರತಿಭಟನೆಗಳ ಕುರಿತು ಕಾಂಗ್ರೆಸ್‌ ಹಾಗೂ ಬಿಜೆಪಿ ನಡುವೆ ನಡೆಯುತ್ತಿರುವ ರಾಜಕೀಯ ವಾಗ್ವಾದಕ್ಕೆ ಈ ಸಂದೇಶ ಮತ್ತಷ್ಟು ತೀವ್ರತೆ ನೀಡಬಹುದು.

ತಪ್ಪು ಮಾಡಿರುವುದಕ್ಕೆ ಇದಕ್ಕಿಂತ ಸಾಕ್ಷಿ ಬೇಕೆ?: ಡಿಕೆಶಿ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರು ವಿರೋಧ ಪಕ್ಷದ ನಾಯಕರನ್ನು ಭೇಟಿಯಾಗಿ ಮಾತುಕತೆ ನಡೆಸಿ, ಆಗಿರುವ ತಪ್ಪನ್ನು ಒಪ್ಪಿಕೊಳ್ಳಬೇಕು" ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಆಗ್ರಹಿಸಿದರು. ದೊಡ್ಡಮಟ್ಟದಲ್ಲಿ ಹೋರಾಟ ಮಾಡುತ್ತಿದ್ದರೂ ವಿರೋಧ ಪಕ್ಷದ ನಾಯಕರನ್ನು ಮುಖ್ಯ ಚುನಾವಣಾ ಆಯುಕ್ತರು ಭೇಟಿಯಾಗುತ್ತಿಲ್ಲ ಎಂದರೆ ಇದರ ಅರ್ಥವೇನು? ಅವರು ತಪ್ಪು ಮಾಡಿರುವುದಕ್ಕೆ ಇದಕ್ಕಿಂತ ಸಾಕ್ಷಿ ಬೇಕೆ? ಎಂದರು.

ಚುನಾವಣಾ ಆಯೋಗ ಸಂವಿಧಾನವನ್ನು ಉಳಿಸಲಿಕ್ಕೆ ಸರ್ಕಾರ ರೂಪಿಸಿರುವ ಸ್ವಾಯತ್ತ ಸಂಸ್ಥೆ. ಈ ಆಯೋಗ ಎಲ್ಲರನ್ನೂ ಸಮಾನತೆಯಿಂದ ನೋಡಬೇಕಾದದ್ದು ಇದರ ಧರ್ಮ. ವಿರೋಧ ಪಕ್ಷ ಇಲ್ಲದೆ ಸರ್ಕಾರ ನಡೆಸುವುದನ್ನು ಯಾವ ಪ್ರಜಾಪ್ರಭುತ್ವವವೂ ಒಪ್ಪದು ಎಂದರು. ಕುಮಾರ್ ವಿರೋಧ ಪಕ್ಷದ ನಾಯಕರನ್ನು ಭೇಟಿಯಾಗಿ ತಪ್ಪಾಗಿದೆ ಎನ್ನುವ ಮಾತನ್ನು ಹೇಳಬೇಕು. ನಮ್ಮ ರಾಜ್ಯದಲ್ಲಿ ನಡೆದಿರುವ ಎಸ್ ಐ ಆರ್ ಅಕ್ರಮದ ಬಗ್ಗೆ ನಾವು ಚುನಾವಣೆ ಆಯೋಗಕ್ಕೆ ದೂರು ನೀಡಿದ ಮೇಲೆ ಒಂದೇ ರಾತ್ರಿಯಲ್ಲಿ ಬದಲಾವಣೆ ಮಾಡಿದ್ದಾರೆ ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+