ವಲಸೆ ಕಾರ್ಮಿಕರ ಖಾತೆಗೆ ಹಣ ಹಾಕಿ: ಸರ್ಕಾರಕ್ಕೆ ರಾಹುಲ್ ಗಾಂಧಿ ಆಗ್ರಹ
ನವದೆಹಲಿ, ಏಪ್ರಿಲ್ 20: ಕೋವಿಡ್-19 ಹೆಚ್ಚಳದ ಹಿನ್ನೆಲೆಯಲ್ಲಿ ಕಠಿಣ ನಿರ್ಬಂಧಗಳನ್ನು ಹೇರುತ್ತಿರುವುದರಿಂದ ದೇಶದ ಅನೇಕ ಭಾಗಗಳ ವಲಸಿಗರು ತಮ್ಮ ತಮ್ಮ ರಾಜ್ಯಗಳಿಗೆ ಮರಳಿ ಹೋಗುತ್ತಿದ್ದಾರೆ. ಈ ವಿಚಾರದಲ್ಲಿ ಕೇಂದ್ರ ಸರ್ಕಾರ ತನ್ನ ಹೊಣೆಗಾರಿಕೆಯನ್ನು ತೆಗೆದುಕೊಳ್ಳಬೇಕು ಎಂದು ನೆನಪಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ವಲಸಿಗರ ಬ್ಯಾಂಕ್ ಖಾತೆಗಳಿಗೆ ಸರ್ಕಾರ ಹಣ ವರ್ಗಾವಣೆ ಮಾಡಲಿದೆಯೇ ಎಂದು ಕೇಳಿದ್ದಾರೆ.
'ವಲಸೆ ಕಾರ್ಮಿಕರು ಮತ್ತೊಮ್ಮೆ ಗುಳೆ ಹೋಗುತ್ತಿದ್ದಾರೆ. ಇಂತಹ ಸನ್ನಿವೇಶಗಳಲ್ಲಿ ಅವರ ಬ್ಯಾಂಕ್ ಖಾತೆಗಳಿಗೆ ಹಣ ಹಾಕುವುದು ಕೇಂದ್ರ ಸರ್ಕಾರದ ಜವಾಬ್ದಾರಿ' ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.
ಮತ್ತೊಂದು ಟ್ವೀಟ್ನಲ್ಲಿ ಸರ್ಕಾರದ ವಿರುದ್ಧ ಹರಿಹಾಯ್ದಿರುವ ಅವರು, 'ಆದರೆ ಕೊರೊನಾ ಹರಡುತ್ತಿರುವುದಕ್ಕೆ ಸಾರ್ವಜನಿಕರನ್ನು ದೂಷಿಸುತ್ತಿರುವ ಸರ್ಕಾರವೊಂದು ಅಂತಹ ಸಾರ್ವಜನಿಕ ಕಲ್ಯಾಣದ ಕ್ರಮವನ್ನು ತೆಗೆದುಕೊಳ್ಳುತ್ತದೆಯೇ?' ಎಂದು ಪ್ರಶ್ನಿಸಿದ್ದಾರೆ.

ದೆಹಲಿಯಲ್ಲಿ ಆರು ದಿನಗಳ ಲಾಕ್ಡೌನ್ ಜಾರಿಗೊಳಿಸಲಾಗಿದೆ. ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಕಾರಣ ಲಾಕ್ಡೌನ್ ಹಾಗೂ ಕಠಿಣ ನಿರ್ಬಂಧಗಳು ಮುಂದುವರಿಯುವ ಸಾಧ್ಯತೆ ಇದೆ. ಇದರಿಂದ ನೂರಾರು ವಲಸಿಗರು ಸೋಮವಾರ ಸಂಜೆ ತಮ್ಮ ಊರುಗಳಿಗೆ ಮರಳಲು ಬಸ್ ನಿಲ್ದಾಣ, ರೈಲು ನಿಲ್ದಾಣಗಳಲ್ಲಿ ತುಂಬಿಕೊಂಡಿದ್ದರು. ಇದರಿಂದ ಭಾರಿ ಸಂಚಾರ ದಟ್ಟಣೆ ಉಂಟಾಗಿತ್ತು.
ಮಹಾರಾಷ್ಟ್ರದಲ್ಲಿಯೂ ನಿರ್ಬಂಧಗಳನ್ನು ಜಾರಿಗೆ ತಂದಿರುವುದರಿಂದ ವಿವಿಧ ರಾಜ್ಯಗಳ ವಲಸಿಗರು ತಮ್ಮ ಊರುಗಳಿಗೆ ಮರಳಿ ಹೋಗುತ್ತಿದ್ದಾರೆ.
-
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ












Click it and Unblock the Notifications