ಪ್ರಧಾನಿ ಮೋದಿ ವಿದ್ಯಾರ್ಹತೆ ಏನು? ರಾಹುಲ್ ಗಾಂಧಿ ಪ್ರಶ್ನೆ

ಇಂಫಾಲ್, ಮಾರ್ಚ್ 20: ಈಶಾನ್ಯ ರಾಜ್ಯ ಪ್ರವಾಸದಲ್ಲಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಮಣಿಪುರದ ರಾಜಧಾನಿ ಇಂಫಾಲ್ ನಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸುತ್ತಿದ್ದ ಸಂದರ್ಭದಲ್ಲಿ ಮೋದಿಯವರ ವಿದ್ಯಾರ್ಹತೆಯ ಬಗ್ಗೆ ಪ್ರಶ್ನಿಸಿ ವೈಯಕ್ತಿಕ ಆರೋಪ ಮಾಡಿದರು.

"ಪ್ರಧಾನಿಯವರು ಯಾವ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದಿದ್ದಾರೆ ಎಂಬ ಬಗ್ಗೆ ನಮಗೆ ಇಂದಿಗೂ ಮಾಹಿತಿ ಲಭ್ಯವಾಗಿಲ್ಲ. ಪ್ರಧಾನಿ ನಿಜಕ್ಕೂ ಕಾಲೇಜಿಗೆ ಹೋಗಿದ್ದಾರೋ, ಇಲ್ಲವೋ ಎಂಬ ಬಗ್ಗೆಯೇ ಹಲವರಿಗೆ ತಿಳಿದಿಲ್ಲ" ಎಂದು ರಾಹುಲ್ ಗಾಂಧಿ ಲೇವಡಿ ಮಾಡಿದರು.

ನರೇಂದ್ರ ಮೋದಿ ಅವರ ವಿದ್ಯಾರ್ಹತೆಯ ಬಗ್ಗೆ ಪ್ರಶ್ನಿಸುತ್ತಿರುವುದು ಇದೇ ಮೊದಲೇನಲ್ಲ. ಈಗಾಗಲೇ ಹಲವು ಕಾಂಗ್ರೆಸ್ ನಾಯಕರು ಈ ಬಗ್ಗೆ ಪ್ರಶ್ನಿಸಿದ್ದಾರೆ.

Rahul Gandhi asks PM Narendra Modis educational qualification

2017 ರಲ್ಲಿ ಕಾಂಗ್ರೆಸ್ ನ ಹಿರಿಯ ಮುಖಂಡ ದಿಗ್ವಿಜಯ್ ಸಿಂಗ್ ಸಹ ಮೋದಿ ಅವರ ವಿದ್ಯಾರ್ಹತೆಯ ಬಗ್ಗೆ ಪ್ರಶ್ನಿಸಿದ್ದರು. ನಂತರ, ಪ್ರಧಾನಿಯನ್ನು ಪ್ರಶ್ನಿಸುವುದೇನು ಅಪರಾಧವೇ? ಎಂದು ಪ್ರಶ್ನಿಸಿದ್ದರು.

ದೆಹಲಿ ಮುಖ್ಯಮಂತ್ರಿ ಮತ್ತು ಎಎಪಿ ಮುಖಂಡ ಅರವಿಂದ್ ಕೇಜ್ರಿವಾಲ್ ಅವರೂ ಈ ಬಗ್ಗೆ ಪ್ರಶ್ನಿಸಿದ್ದರು. ಅದಕ್ಕಾಗಿ ಅವರ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿಗೊಳಿಸಲಾಗಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+