ಮೋದಿ ಮೇಲೆ ರಾಹುಲ್ 'ರಫೇಲ್' ಅಟ್ಯಾಕ್! ಟ್ವೀಟ್ ಏಟು!
ನವದೆಹಲಿ, ಸೆಪ್ಟೆಂಬರ್ 22: ರಫೇಲ್ ಖರೀದಿ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಶುಕ್ರವಾರ ಫ್ರೆಂಚ್ ಮಾಜಿ ಅಧ್ಯಕ್ಷರು ನೀಡಿದ ಸ್ಪೋಟಕ ಹೇಳಿಕೆಯ ನಂತರ ಕಾಂಗ್ರೆಸ್ ಮೈಕೊಡವಿಕೊಂಡು ಎದ್ದು ನಿಂತಿದೆ.
ಪ್ರಧಾನಿ ನರೇಂದ್ರ ಮೊದಿಯವರ ವಿರುದ್ಧ ರಫೆಲ್ ಡೀಲ್ ಅನ್ನೇ ಪ್ರಬಲ ಅಸ್ತ್ರವನ್ನಾಗಿರಿಸಿಕೊಂಡ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಟ್ವೀಟ್ ನಲ್ಲಿ ಮೋದಿ ಅವರ ಮೇಲೆ ದಾಳಿ ನಡೆಸಿದ್ದಾರೆ.

ಶುಕ್ರವಾರವಷ್ಟೇ ಈ ಕುರಿತು ಟ್ವೀಟ್ ಮಾಡಿದ್ದ ರಾಹುಲ್ ಗಾಂಧಿ, ಇಂದು ಮತ್ತೊಮ್ಮೆ ಟ್ವಿಟ್ಟರ್ ದಾಳಿ ನಡೆಸಿದ್ದಾರೆ. "ಪ್ರಧಾನಿ ಮತ್ತು ಅನಿಲ್ ಅಂಬಾನಿ ಇಬ್ಬರೂ ಸೇರಿ ಭಾರತೀಯ ರಕ್ಷಣಾ ದಳದ ಮೇಲೆ 130 ಕೋಟಿ ರೂ. ಮೌಲ್ಯದ ಸರ್ಜಿಕಲ್ ಸ್ಟ್ರೈಕ್ ಅನ್ನು ನೆರವೇರಿಸಿದ್ದಾರೆ. ಮೋದಿಯವರೇ, ನೀವು ನಮ್ಮ ಹುತಾತ್ಮ ಸೈನಿಕರಿಗೆ ಅಗೌರವ ನೀಡಿದ್ದೀರಿ. ನೀವು ಭಾರತೀ ಆತ್ಮಗಳಿಗೆ ವಂಚನೆ ಮಾಡಿದ್ದೀರಿ. ನಿಮಗೆ ನಾಚಿಕೆಯಾಗಬೇಕು ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.
The PM and Anil Ambani jointly carried out a One Hundred & Thirty Thousand Crore, SURGICAL STRIKE on the Indian Defence forces. Modi Ji you dishonoured the blood of our martyred soldiers. Shame on you. You betrayed India's soul. #Rafale
— Rahul Gandhi (@RahulGandhi) September 22, 2018
ರಫೇಲ್ ಯುದ್ಧ ವಿಮಾನಕ್ಕೆ ಬಿಡಿಭಾಗಗಳ ತಯಾರಿಕೆಗೆ ಅನಿಲ್ ಅಂಬಾನಿ ಅವರ ರಿಲಯನ್ಸ್ ಡಿಫೆನ್ಸ್ ಇಂಡಸ್ಟ್ರೀಸ್ ಹೆಸರನ್ನು ಸೂಚಿಸುವಂತೆ ಫ್ರೆಂಚ್ ಸರ್ಕಾರವನ್ನು ಭಾರತ ಸರ್ಕಾರವೇ ಕೋರಿತ್ತು ಎಂಬ ಫ್ರಾನ್ಸ್ ನ ಮಾಜಿ ಅಧ್ಯಕ್ಷ ಫ್ರಾಂಕೋ ಒಲಾಂಡ್ ಹೇಳಿಕೆ ಸಾಕಷ್ಟು ವಿವಾದ ಸೃಷ್ಟಿಸಿದ ಹಿನ್ನೆಲೆಯಲ್ಲಿ ಕೇಂದ್ರ ಎನ್ ಡಿಎ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ಸೇರಿದಂತೆ ವಿಪಕ್ಷದ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಿಲಯನ್ಸ್ ಡಿಫೆನ್ಸ್ ಇಂಡಸ್ಟ್ರೀಸ್ ಅನ್ನು ರಫೇಲ್ ಯುದ್ಧ ವಿಮಾನ ಬಿಡಿ ಭಾಗಗಳ ತಯಾರಿಕೆಗಾಗಿ ಭಾರತ ಆಯ್ಕೆ ಮಾಡಿಕೊಂಡಿದ್ದರಲ್ಲಿ ತನ್ನ ಪಾತ್ರವೇನೂ ಇಲ್ಲ ಎಂದು ಈಗಾಗಲೇ ಫ್ರಾನ್ಸ್ ಸ್ಪಷ್ಟನೆ ನೀಡಿದೆ.
-
Ankita Jayaram: ನಟನೆಯ ನಡುವೆಯೂ ದ್ವಿತೀಯ ಪಿಯುಸಿಯಲ್ಲಿ ಕರ್ಣ ಧಾರಾವಾಹಿ ಖ್ಯಾತಿಯ ನಟಿ ಅಂಕಿತಾ ಜಯರಾಮ್ ಅಮೋಘ ಸಾಧನೆ -
Gold Rate April 9: ಚಿನ್ನ - ಬೆಳ್ಳಿ ಬೆಲೆಯಲ್ಲಿ ಭರ್ಜರಿ ಇಳಿಕೆ: ಬಂಗಾರ ಖರೀದಿದಾರರಿಗೆ ಸಂತೋಷದ ಸುದ್ದಿ -
ರಾಜ್ಯದ ಕಳೆದ 3 ವರ್ಷಗಳ ದ್ವಿತೀಯ PUC ಫಲಿತಾಂಶದ ಹೈಲೈಟ್ಸ್; ಮೇಲುಗೈ ಸಾಧಿಸಿದ ಜಿಲ್ಲೆಗಳು ಯಾವುವು? ಇಲ್ಲಿದೆ ಮಾಹಿತಿ -
Dhurandhar-2 OTT: ನೆಟ್ಫ್ಲಿಕ್ಸ್ ಅಲ್ಲ, ಈ ಒಟಿಟಿಯಲ್ಲಿ 'ಧರಂಧರ-2' ಅಬ್ಬರ, ಯಾವಾಗ? -
Karnataka Weather: ಕರ್ನಾಟಕದ 4 ಜಿಲ್ಲೆಗಳಲ್ಲಿ ಮಳೆ - ವಿವಿಧ ಭಾಗಗಳಲ್ಲಿ ಭಾರೀ ಬಿಸಿಲು, ಕರ್ನಾಟಕದ ಹವಾಮಾನ ವರದಿ -
Ragi Price Today: ಕರ್ನಾಟಕದ ಮಾರುಕಟ್ಟೆಗಳಲ್ಲಿ ಇಂದಿನ "ರಾಗಿ' ಬೆಲೆ ಎಷ್ಟಿದೆ? ಲೇಟೆಸ್ಟ್ ಅಪ್ಡೇಟ್ -
April 9 Horoscope: 12 ರಾಶಿಗಳಿಗೆ ಇಂದು ಸಂತೋಷ, ಸವಾಲು ಮತ್ತು ಅವಕಾಶಗಳ ಮಿಶ್ರ ಫಲ -
Viral: ಬೆಂಗಳೂರಿಗೆ ಕಾಲಿಟ್ಟಿತೇ ಡೇಂಜರಸ್ 'ಜಾಂಬಿ ಡ್ರಗ್'?: ಯುವಕನ ವಿಡಿಯೋ ನೋಡಿ ಬೆಚ್ಚಿಬಿದ್ದ ಸಿಲಿಕಾನ್ ಸಿಟಿ ಜನ -
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
PUC Results: 2026ರ ದ್ವಿತೀಯ PUC ಪರೀಕ್ಷೆ ಫಲಿತಾಂಶ ಪ್ರಕಟ, ಇವರೇ ನೋಡಿ ಟಾಪರ್












Click it and Unblock the Notifications