ಲೋಕಸಭಾ ಚುನಾವಣೆ: ಈ ಕ್ಷೇತ್ರದಿಂದ ರಾಹುಲ್ ಗಾಂಧಿ ಸ್ಪರ್ಧೆ ಫಿಕ್ಸ್
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎನ್ನುವ ಕುತೂಹಲಕ್ಕೆ ತೆರೆ ಬಿದ್ದಿದೆ. ಪಕ್ಷದ ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ಈ ಬಗ್ಗೆ ಚರ್ಚಿಸಲಾಗಿದ್ದು, ಅವರು ಕೇರಳದ ವಯನಾಡ್‌ನಿಂದ ಸ್ಪರ್ಧೆ ಮಾಡಲು ನಿರ್ಧರಿಸಿದ್ದಾರೆ.
2019ರ ಲೋಕಸಭಾ ಚುನಾವಣೆಯಲ್ಲಿ ರಾಹುಲ್ ಗಾಂಧಿ ವಯನಾಡು ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಈಗ ಅವರು ಮತ್ತೆ ಕೇರಳದಿಂದಲೇ ಲೋಕಸಭೆ ಪ್ರವೇಶಿಸಲು ನಿರ್ಧರಿಸಿದ್ದಾರೆ.

ಗುರುವಾರ ನಡೆದ ಕಾಂಗ್ರೆಸ್ ಚುನಾವಣಾ ಸಮಿತಿ ಸಭೆಯ ಮೊದಲ ಸಭೆಯಲ್ಲಿಈ ನಿರ್ಧಾರ ಮಾಡಲಾಗಿದೆ. ಉತ್ತರ ಪ್ರದೇಶದ ಕ್ಷೇತ್ರಗಳ ಬಗ್ಗೆ ಯಾವುದೇ ಚರ್ಚೆಯಾಗದ ಕಾರಣ, ರಾಹುಲ್ ಗಾಂಧಿ ಅವರು ಬಿಜೆಪಿಯ ಸ್ಮೃತಿ ಇರಾನಿ ವಿರುದ್ಧ ಸೋತಿರುವ ಅಮೇಥಿಯಿಂದಲೂ ಸ್ಪರ್ಧಿಸುತ್ತಾರೆಯೇ ಎಂಬ ಬಗ್ಗೆ ಯಾವುದೇ ಸ್ಪಷ್ಟೀಕರಣ ಸಿಕ್ಕಿಲ್ಲ. 2009 ರಿಂದ ಕಾಂಗ್ರೆಸ್ ಪಕ್ಷದಿಂದ ಕಣಕ್ಕಿಳಿದಿದ್ದ ಶಶಿ ತರೂರ್ ಅವರು ತಿರುವನಂತಪುರಂ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ.
ಶೀಘ್ರದಲ್ಲಿ ಅಭ್ಯರ್ಥಿಗಳ ಪಟ್ಟಿ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ಮಾಜಿ ಮುಖ್ಯಸ್ಥೆ ಸೋನಿಯಾ ಗಾಂಧಿ, ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಸಭೆಯಲ್ಲಿ ಭಾಗವಹಿಸಿದ್ದರು, ರಾಹುಲ್ ಗಾಂಧಿ ಜೂಮ್ ಮೂಲಕ ಸಭೆ ಸೇರಿದರು. ಗುರುವಾರ ಸಮಿತಿಯು ದೆಹಲಿ, ಛತ್ತೀಸ್‌ಗಢ, ಕರ್ನಾಟಕ, ತೆಲಂಗಾಣ, ಲಕ್ಷದ್ವೀಪ, ಕೇರಳ, ಮೇಘಾಲಯ, ತ್ರಿಪುರ, ಸಿಕ್ಕಿಂ ಮತ್ತು ಮಣಿಪುರ ಅಭ್ಯರ್ಥಿಗಳ ಬಗ್ಗೆ ಚರ್ಚೆ ಮಾಡಲಾಗಿದೆ. ಕಾಂಗ್ರೆಸ್ ಇನ್ನೂ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿಲ್ಲ.
ಸಭೆಯಲ್ಲಿ ಕೈಗೊಂಡ ಪ್ರಮುಖ ನಿರ್ಧಾರಗಳು
ರಾಹುಲ್ ಗಾಂಧಿ ವಯನಾಡಿನಿಂದ ಮತ್ತು ಶಶಿ ತರೂರ್ ತಿರುವನಂತಪುರದಿಂದ ಸ್ಪರ್ಧಿಸಲಿದ್ದಾರೆ.
ಲೋಕಸಭೆ ಚುನಾವಣೆ 2024 ರ ದೆಹಲಿ, ಛತ್ತೀಸ್‌ಗಢ, ಕರ್ನಾಟಕ, ತೆಲಂಗಾಣ, ಲಕ್ಷದ್ವೀಪ, ಕೇರಳ, ಮೇಘಾಲಯ, ತ್ರಿಪುರ, ಸಿಕ್ಕಿಂ ಮತ್ತು ಮಣಿಪುರದಿಂದ ಸ್ಪರ್ಧಿಸುವ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಘೋಷಣೆ ಮಾಡುವ ಸಾಧ್ಯತೆಯಿದೆ ಏಕೆಂದರೆ ಇವುಗಳನ್ನು ಮೊದಲು ಚರ್ಚೆಗೆ ತೆಗೆದುಕೊಳ್ಳಲಾಗಿದೆ.
ಉತ್ತರ ಪ್ರದೇಶ ಚುನಾವಣಾ ಸಮಿತಿಯಲ್ಲಿ ಚರ್ಚೆಯಾಗದ ಕಾರಣ, ಅಮೇಥಿ ಮತ್ತು ರಾಯ್ ಬರೇಲಿಯಲ್ಲಿ ಸ್ಪರ್ಧೆ ಬಗ್ಗೆ ಕುತೂಹಲ ಇನ್ನೂ ಹಾಗೆ ಉಳಿದಿಕೊಂಡಿದೆ. ಅಮೆಥಿಯಿಂದ ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿಯವರ ಹಿಂದಿನ ಕ್ಷೇತ್ರ ರಾಯ್ ಬರೇಲಿಯಿಂದ ಪ್ರಿಯಾಂಕಾ ಗಾಂಧಿಯವರು ಮೊದಲ ಬಾರಿಗೆ ಸ್ಪರ್ಧಿಸುತ್ತಾರೆ ಎಂದು ವದಂತಿಗಳಿವೆ.
ಕಾಂಗ್ರೆಸ್ ಮೊದಲ ಪಟ್ಟಿಯು ಅಖಿಲೇಶ್ ಯಾದವ್ ಅವರ ಸಮಾಜವಾದಿ ಪಕ್ಷದೊಂದಿಗೆ ಸೀಟು ಹಂಚಿಕೆ ಒಪ್ಪಂದವನ್ನು ಮಾಡಿಕೊಂಡಿರುವ ಉತ್ತರ ಪ್ರದೇಶದ ಅಭ್ಯರ್ಥಿಗಳನ್ನು ಹೊಂದಿರುವುದಿಲ್ಲ ಎಂದು ಹೇಳಲಾಗಿದೆ.
ಸಿಇಸಿ ಸಭೆಯ ನಂತರ, ಸಚಿನ್ ಪೈಲಟ್ ಪ್ರತಿ ಸ್ಥಾನದ ಬಗ್ಗೆ ವಿವರವಾದ ಚರ್ಚೆಯನ್ನು ನಡೆಸಲಾಯಿತು ಮತ್ತು ನಿರ್ಧಾರವನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು ಎಂದು ಹೇಳಿದರು. ಯಾವ ವ್ಯಕ್ತಿ ಗೆಲ್ಲುವ ಸ್ಥಾನದಲ್ಲಿದ್ದಾರೋ ಅವರನ್ನು ಸ್ಪರ್ಧಿಸಲು ಕೇಳಲಾಗುತ್ತದೆ ಎಂದು ಸಚಿನ್ ಪೈಲಟ್ ಹೇಳಿದರು.












Click it and Unblock the Notifications