ರಷ್ಯಾ-ಉಕ್ರೇನ್ ಯುದ್ಧ ನಿಲ್ಲಿಸಿದವರಿಗೆ ಪ್ರಶ್ನೆಪತ್ರಿಕೆ ಸೋರಿಕೆ ತಡೆಯಲು ಆಗಲಿಲ್ಲ; ರಾಹುಲ್ ಗಾಂಧಿ
ನೀಟ್ (NEET) ಮತ್ತು ಯುಜಿಸಿ ನೆಟ್ (UGC-NET) ಪರೀಕ್ಷೆಗಳಲ್ಲಿ ನಡೆದಿರುವ ಅಕ್ರಮಗಳು ಈ ವಿಪಕ್ಷಗಳಿಗೆ ಅಸ್ತ್ರವಾಗಿವೆ. ಕೇಂದ್ರ ಸರ್ಕಾರ ಸರಿಯಾಗಿ ಪರೀಕ್ಷೆಗಳನ್ನು ನಡೆಸಲು ಆಗದಷ್ಟು ಭ್ರಷ್ಟವಾಗಿದೆ ಎಂದು ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ ನಡೆಸುತ್ತಿದೆ.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಈಗ ಪ್ರಧಾನಿ ಮೋದಿ ಅವರನ್ನು ತರಾಟೆಗೆ ತೆಗೆದುಕೊಂಡಿದ್ದು, ಯುದ್ಧ ನಿಲ್ಲಿಸುವ ಪ್ರಧಾನಿಗಳಿಗೆ ಪರೀಕ್ಷಾ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಯಾಕೆ ತಡೆಯಲು ಆಗಲಿಲ್ಲ ಎಂದು ಪ್ರಶ್ನೆ ಮಾಡಿದ್ದಾರೆ.

ಚುನಾವಣೆ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು ಮಾನಸಿಕವಾಗಿ ಕುಸಿದಿದ್ದಾರೆ. ಸರ್ಕಾರವನ್ನು ಸಮರ್ಥವಾಗಿ ನಡೆಸ ಅವರು ಹೆಣಗಾಡುತ್ತಿದ್ದಾರೆ ಎಂದು ಹೇಳಿದ್ದಾರೆ.
ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಶಿಕ್ಷಣ ಸಂಸ್ಥೆಗಳನ್ನು ಆರ್‌ಎಸ್‌ಎಸ್ ಮತ್ತು ಬಿಜೆಪಿ ವಶಪಡಿಸಿಕೊಳ್ಳುತ್ತಿದ್ದು, ಅದನ್ನು ಬದಲಾಯಿಸದ ಹೊರತು ಪ್ರಶ್ನೆ ಪತ್ರಿಕೆ ಸೋರಿಕೆ ನಿಲ್ಲುವುದಿಲ್ಲ ಎಂದು ಹೇಳಿದ್ದಾರೆ.
ಯುದ್ಧ ನಿಲ್ಲಿಸಿದವರಿಗೆ ಇದ್ಯಾಕೆ ಆಗಿಲ್ಲ?
ಪ್ರಧಾನಿ ಮೋದಿ ಉಕ್ರೇನ್-ರಷ್ಯಾ ಯುದ್ಧ ಮತ್ತು ಇಸ್ರೇಲ್-ಗಾಜಾ ಯುದ್ಧವನ್ನು ನಿಲ್ಲಿಸಿದರು ಎಂದು ಹೇಳಲಾಗುತ್ತಿದೆ, ಆದರೆ ಅವರಿಗೆ ಪರೀಕ್ಷೆಯ ಪತ್ರಿಕೆ ಸೋರಿಕೆಯನ್ನು ತಡೆಯಲು ಸಾಧ್ಯವಾಗಲಿಲ್ಲ ಅಥವಾ ತಡೆಯುವುದು ಬೇಕಾಗಿರಲಿಲ್ಲ ಎಂದು ರಾಹುಲ್ ಗಾಂಧಿ ಹೇಳಿದರು.
ಭಾರತ ಜೋಡಣೆ ನ್ಯಾಯ ಯಾತ್ರೆಯ ಸಂದರ್ಭದಲ್ಲಿ ಸಾವಿರಾರು ವಿದ್ಯಾರ್ಥಿಗಳು ಪೇಪರ್ ಸೋರಿಕೆ ಬಗ್ಗೆ ದೂರು ಕೊಟ್ಟಿದ್ದಾರೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.
ಮಧ್ಯಪ್ರದೇಶದಲ್ಲಿ ವ್ಯಾಪಮ್ ಪರೀಕ್ಷೆ ಮತ್ತು ನೇಮಕಾತಿ ಹಗರಣವನ್ನು ಉಲ್ಲೇಖಿಸಿದ ಅವರು ದೇಶದ ಇತರ ಭಾಗಗಳಿಗೆ ವ್ಯಾಪಂ ಕಲ್ಪನೆಯನ್ನು ವಿಸ್ತರಿಸಲಾಗಿದೆ ಎಂದರು.
ಪರೀಕ್ಷೆ ಪತ್ರಿಕೆ ಸೋರಿಕೆ ವಿಚಾರವನ್ನು ಇಲ್ಲಿಗೆ ಬಿಡುವುದಿಲ್ಲ. ಪ್ರತಿಪಕ್ಷಗಳು ಸಂಸತ್ತಿನಲ್ಲಿ ಪ್ರಸ್ತಾಪಿಸಲಿವೆ ಎಂದರು.
ಕೇಂದ್ರಕ್ಕೆ ಮುಜುಗರ ತಂದ ಹಗರಣ
ವೈದ್ಯಕೀಯ ಪ್ರವೇಶ ಪರೀಕ್ಷೆ ನೀಟ್ (NEET) ನಲ್ಲಿ ಅಕ್ರಮ ನಡೆದಿದೆ ಎನ್ನುವ ಆರೋಪ ಕೇಳಿ ಬಂದಿದೆ. 67 ವಿದ್ಯಾರ್ಥಿಗಳು ಪರಿಪೂರ್ಣ ಅಂಕ ಪಡೆದಿರುವುದು ಸಾಕಷ್ಟು ಅನುಮಾನಕ್ಕೆ ಕಾರಣವಾಗಿದೆ. ದೇಶಾದ್ಯಂತ ಪರೀಕ್ಷಾ ಅಕ್ರಮದ ಬಗ್ಗೆ ಆಕ್ರೋಶ ವ್ಯಕ್ತವಾಗಿದ್ದು, ಪ್ರಕರಣ ಇದೀಗ ಸುಪ್ರೀಂ ಕೋರ್ಟ್‌ನಲ್ಲಿದೆ.
ಕೇಂದ್ರ ಶಿಕ್ಷಣ ಸಚಿವಾಲಯವು ಯುಜಿಸಿ-ನೆಟ್ ಪರೀಕ್ಷೆಯ ಸಮಗ್ರತೆಗೆ ಧಕ್ಕೆಯುಂಟಾಗಿರಬಹುದು ಎನ್ನುವ ಅನುಮಾನದಲ್ಲಿ ಪರೀಕ್ಷೆಯನ್ನು ರದ್ದುಪಡಿಸಲು ಆದೇಶಿಸಿತು ಮತ್ತು ಸಿಬಿಐಗೆ ತನಿಖೆ ಮಾಡುವಂತೆ ಸೂಚಿಸಿದೆ.












Click it and Unblock the Notifications