ರಾಹುಲ್ ಗಾಂಧಿ ವಿರುದ್ಧ ದೂರು ದಾಖಲಿಸಿ ಶಿಕ್ಷೆಗೆ ಗುರಿ ಮಾಡಿದ ಪೂರ್ಣೇಶ್ ಮೋದಿ ಬಗ್ಗೆ ನಿಮಗೆಷ್ಟು ಗೊತ್ತು?

ನವದೆಹಲಿ, ಮಾರ್ಚ್. 23: 2019 ರ ಮೋದಿ ಉಪನಾಮ ಕುರಿತ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಸೂರತ್ ನ್ಯಾಯಾಲಯವು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ದೋಷಿ ಎಂದು ತೀರ್ಪು ನೀಡಿದೆ. ಆದರೆ, ಈ ಪ್ರಕರಣ ದಾಖಲಿಸಿದ್ದು ಗುಜರಾತ್‌ನ ಪೂರ್ಣೇಶ್ ಮೋದಿ. ಈ ಲೇಖನದಲ್ಲಿ ಪೂರ್ಣೇಶ್ ಮೋದಿ ಕುರಿತು ಮಾಹಿತಿ ತಿಳಿಯೋಣ.

'ಮೋದಿ ಉಪನಾಮ' ಹೇಳಿಕೆಗಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಗುಜರಾತ್ ನ್ಯಾಯಾಲಯ ಗುರುವಾರ ದೋಷಿ ಎಂದು ತೀರ್ಪು ನೀಡಿದ್ದು, ವಯನಾಡಿನ ಲೋಕಸಭಾ ಸದಸ್ಯರಿಗೆ ಎರಡು ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿದೆ. ಬಳಿಕ ಜಾಮೀನು ಮಂಜೂರು ಮಾಡಿದ್ದು, ಉನ್ನತ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಲು ಅವಕಾಶ ನೀಡಲು ಶಿಕ್ಷೆಯನ್ನು 30 ದಿನಗಳವರೆಗೆ ಅಮಾನತುಗೊಳಿಸಿತುದೆ.

Rahul Gandhi defamation case: Who is Purnesh Modi?

ರಾಹುಲ್ ಗಾಂಧಿ ಮೇಲೆ ಈ ಪ್ರಕರಣ ದಾಖಲಾಗಲು ಮುಖ್ಯ ಕಾರಣ ಬಿಜೆಪಿ ಶಾಸಕ ಮತ್ತು ಗುಜರಾತ್‌ನ ಮಾಜಿ ಸಚಿವ ಪೂರ್ಣೇಶ್ ಮೋದಿ ಅವರು ದಾಖಲಿಸಿದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ. ಹೌದು, ಗುಜರಾತ್‌ನ ಶಾಸಕ ಕರ್ನಾಟಕದಲ್ಲಿ ನಡೆದ ಘಟನೆ ಮೇಲೆ ದೂರು ದಾಖಲಿಸಿದ್ದರು. 2019 ರ ಲೋಕಸಭಾ ಚುನಾವಣೆಗೆ ಮುನ್ನ ಕರ್ನಾಟಕದ ಕೋಲಾರದಲ್ಲಿ ನಡೆದ ಸಾರ್ವಜನಿಕ ಮೆರವಣಿಗೆ ವೇಳೆ ರಾಹುಲ್ ಗಾಂಧಿ ಈ ಹೇಳಿಕೆ ನೀಡಿದ್ದರು.

*ಪೂರ್ಣೇಶ್ ಮೋದಿ*

54 ವರ್ಷದ ಪೂರ್ಣೇಶ್ ಮೋದಿ ಅವರ ಪೂರ್ಣ ಹೆಸರು ಪೂರ್ಣೇಶ್ ಕುಮಾರ್ ಈಶ್ವರಲಾಲ್ ಮೋದಿ. ಅವರು ಅಕ್ಟೋಬರ್ 22, 1965 ರಂದು ಜನಿಸಿದರು. ಅವರು ಬಿಕಾಂ ಉತ್ತೀರ್ಣರಾಗಿದ್ದಾರೆ. ನಂತರ ಸೂರತ್‌ನ ಸರ್ ಚೌವಾಸಿ ಕಾನೂನು ಕಾಲೇಜಿನಿಂದ 1992 ರಲ್ಲಿ ಕಾನೂನು ಪದವಿ ಪಡೆದಿದ್ದಾರೆ. ಪೂರ್ಣೇಶ್ ಮೋದಿ ಅವರು ತಮ್ಮ ಕುಟುಂಬದೊಂದಿಗೆ ಗುಜರಾತ್‌ನ ಸೂರತ್‌ನ ಅದಾಜನ್ ಪ್ರದೇಶದಲ್ಲಿ ವಾಸಿಸುತ್ತಿದ್ದಾರೆ.

Rahul Gandhi defamation case: Who is Purnesh Modi?

ಗುಜರಾತ್‌ನ 13 ನೇ ವಿಧಾನಸಭೆಗೆ (2013 ರಿಂದ 2017) ಸೂರತ್ ಪಶ್ಚಿಮ ಕ್ಷೇತ್ರದ ಉಪಚುನಾವಣೆಯಲ್ಲಿ ಗೆಲುವು ದಾಖಲಿಸಿದ್ದಾರೆ. ಈ ಹಿಂದಿನ ಶಾಸಕ ಕಿಶೋರ್ ಭಾಯ್ ಅವರ ನಿಧನದ ನಂತರ ಪೂರ್ಣೇಶ್ ಮೋದಿ 2017ರ ವಿಧಾನಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು. ಪೂರ್ಣೇಶ್ ಮೋದಿ 2012 ರಲ್ಲಿ ಉಪಚುನಾವಣೆ ಮೂಲಕ ಸೂರತ್ ಪಶ್ಚಿಮ್ ಕ್ಷೇತ್ರದಿಂದ ಗುಜರಾತ್ ವಿಧಾನಸಭೆಯ ಸದಸ್ಯರಾಗಿದ್ದರು.

ಅವರ 2017 ರ ಚುನಾವಣಾ ಅಫಿಡವಿಟ್‌ನಲ್ಲಿ, ಅವರು ತಮ್ಮ ವೃತ್ತಿಯನ್ನು ಸರ್ಕಾರಿ ಉದ್ಯೋಗಿ ಎಂದು ಘೋಷಿಸಿದ್ದರು. ಅವರ ಪತ್ನಿ ಮನೆಕೆಲಸಗಳನ್ನು ನೋಡಿಕೊಳ್ಳುತ್ತಾರೆ ಮತ್ತು ವ್ಯಾಪಾರವನ್ನೂ ಮಾಡುತ್ತಾರೆ. ಸುಮಾರು 13 ಲಕ್ಷ ರೂಪಾಯಿ ಮೌಲ್ಯದ ಚಿನ್ನ, ಬೆಳ್ಳಿ ಸೇರಿದಂತೆ ಒಂದು ಕೋಟಿ ರೂಪಾಯಿಗೂ ಹೆಚ್ಚು ಆಸ್ತಿ ಹೊಂದಿದ್ದಾರೆ ಎಂದು ಅಫಿಡವಿಟ್ ನಲ್ಲಿ ತಿಳಿಸಲಾಗಿದೆ.

ಪ್ರಸ್ತುತ ಸೂರತ್ (ಪಶ್ಚಿಮ) ವಿಧಾನಸಭಾ ಕ್ಷೇತ್ರದಿಂದ 167 ಶಾಸಕರಿದ್ದಾರೆ. ಅವರು ಅಂದಿನ ಗುಜರಾತ್ ಸರ್ಕಾರದಲ್ಲಿ ಕ್ಯಾಬಿನೆಟ್ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ ಮತ್ತು ಸಾರಿಗೆ, ನಾಗರಿಕ ವಿಮಾನಯಾನ, ಪ್ರವಾಸೋದ್ಯಮ ಮತ್ತು ತೀರ್ಥಯಾತ್ರೆ ಅಭಿವೃದ್ಧಿ ಖಾತೆಗಳನ್ನು ಸಹ ನಿರ್ವಹಿಸಿದ್ದಾರೆ. ಇವರು ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.

ಭಾರತೀಯ ದಂಡ ಸಂಹಿತೆ (IPC) ಸೆಕ್ಷನ್ 499 ಮತ್ತು 500 (ಮಾನನಷ್ಟ ವ್ಯವಹರಿಸುವುದು) ಅಡಿಯಲ್ಲಿ ದಾಖಲಿಸಲಾದ ಪ್ರಕರಣದಲ್ಲಿ ಶಿಕ್ಷೆ ವಿಧಿಸಿದ್ದ ನ್ಯಾಯಾಲಯ ಬಳಿಕ ಜಾಮೀನು ನೀಡಿ, ತೀರ್ಪು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲು ಅವಕಾಶ ನೀಡಿ ಶಿಕ್ಷೆಯನ್ನು 30 ದಿನಗಳವರೆಗೆ ಅಮಾನತುಗೊಳಿಸಲಾಯಿತು. ನ್ಯಾಯಾಲಯದ ಆದೇಶದ ಬಳಿಕ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ ಮಹಾತ್ಮ ಗಾಂಧಿ ಅವರ ಹೇಳಿಕೆಯನ್ನು ಉಲ್ಲೇಖಿಸಿದ್ದಾರೆ.

ಪ್ರಕರಣದಲ್ಲಿ ತೀರ್ಪು ಬಂದ ಮೇಲೆ ಟ್ವೀಟ್ ಮಾಡಿದ್ದ ರಾಹುಲ್ ಗಾಂಧಿ, "ನನ್ನ ಧರ್ಮವು ಸತ್ಯ ಮತ್ತು ಅಹಿಂಸೆಯ ಮೇಲೆ ಆಧಾರಿತವಾಗಿದೆ. ಸತ್ಯವೇ ನನ್ನ ದೇವರು, ಅಹಿಂಸೆ ಅದನ್ನು ಪಡೆಯುವ ಸಾಧನವಾಗಿದೆ. - ಮಹಾತ್ಮಾ ಗಾಂಧಿ" ಎಂದು ಬರೆದಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+