ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಲೋಕಸಭಾ ಸಮರ : ಫೆಬ್ರವರಿ ಅಂತ್ಯಕ್ಕೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

|
Google Oneindia Kannada News

ನವದೆಹಲಿ, ಫೆಬ್ರವರಿ 08: ಫೆಬ್ರವರಿ ಅಂತ್ಯದೊಳಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲಾಗುತ್ತದೆ. ಇದಕ್ಕೂ ಮುನ್ನ ಕಾಂಗ್ರೆಸ್ಸಿನ ಕಾರ್ಯಕರ್ತರು, ಪ್ರಧಾನ ಕಾರ್ಯದರ್ಶಿಗಳು, ಉಸ್ತುವಾರಿಗಳು ಇನ್ನಿತರ ಹಿರಿಯ ನಾಯಕರೊಂದಿಗೆ ಚರ್ಚಿಸಲಾಗುತ್ತದೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್​ ಗಾಂಧಿ ಹೇಳಿದ್ದಾರೆ.

ದೆಹಲಿಯ ಎಐಸಿಸಿ ಕೇಂದ್ರ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ರಾಹುಲ್, ಉತ್ತರ ಪ್ರದೇಶದಲ್ಲಿ ಇನ್​ಚಾರ್ಜ್​ಆಗಿ ಪ್ರಿಯಾಂಕಾ ಗಾಂಧಿ (ಪೂರ್ವ) ಹಾಗೂ ಜ್ಯೋತಿರಾಧಿತ್ಯ ಸಿಂಧಿಯಾ(ಪಶ್ಚಿಮ) ಮುನ್ನಡೆಸಲಿದ್ದಾರೆ ಎಂದರು. ಇದು ಅಧಿಕಾರ ವಹಿಸಿಕೊಂಡ ಬಳಿಕ ಪ್ರಿಯಾಂಕಾ ಅವರ ಮೊದಲ ಅಧಿಕೃತ ಸಭೆಯಾಗಿದೆ. ಉತ್ತರಪ್ರದೇಶದಲ್ಲಿ ಫೆ.11ರಂದು ಬೃಹತ್ ಸಮಾವೇಶ ನಡೆಸಲಾಗುತ್ತದೆ. ಫೆ.12 ರಿಂದ 14ರತನಕ ಕಾರ್ಯಕರ್ತರ ಜತೆ ಸಭೆ ನಡೆಸಲು ಉದ್ದೇಶಿಸಲಾಗಿದೆ.

12 ಕ್ಷೇತ್ರ ಕೇಳಿದ್ದಕ್ಕೆ 5 ಜೆಡಿಎಸ್ ಗೆ, ಕಾಂಗ್ರೆಸ್ ರಣತಂತ್ರ12 ಕ್ಷೇತ್ರ ಕೇಳಿದ್ದಕ್ಕೆ 5 ಜೆಡಿಎಸ್ ಗೆ, ಕಾಂಗ್ರೆಸ್ ರಣತಂತ್ರ

ಫೆಬ್ರವರಿ ಅಂತ್ಯದೊಳಗೆ ಅಭ್ಯರ್ಥಿಗಳ ಆಯ್ಕೆಯನ್ನು ಅಂತಿಮಗೊಳಿಸಿ ಎಂದು ರಾಹುಲ್ ಗಾಂಧಿ ಅವರು ಸೂಚಿಸಿದ್ದಾರೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ, ಸಂಘಟನಾ ಉಸ್ತುವಾರಿ ಕೆಸಿ ವೇಣುಗೋಪಾಲ್ ಅವರು ಹೇಳಿದರು.

Rahul Gandhi directs party leaders to decide candidates for 2019 Lok Sabha polls on February without delay

ಬಿಜೆಪಿ ವ್ಯವಸ್ಥಿತವಾಗಿ ಕಾಂಗ್ರೆಸ್ ವಿರುದ್ಧ ಅಪಪ್ರಚಾರ ಆರಂಭಿಸಿರುವುದರ ಬಗ್ಗೆ ರಾಹುಲ್ ಗಾಂಧಿ ಗಮನಕ್ಕೆ ತರಲಾಗಿದೆ. ಎಷ್ಟೇ ತೀಕ್ಷ್ಣವಾಗಿ ಪ್ರಚಾರ ನಡೆಸಿದರೂ ಸಭ್ಯತೆಯ ಎಲ್ಲೆ ಮೀರದಂತೆ ಇರಬೇಕು ಎಂಬ ಸಲಹೆ ಸಿಕ್ಕಿದೆ ಎಂದು ವೇಣುಗೋಪಾಲ್ ಹೇಳಿದರು.

English summary
Congress president Rahul Gandhi is all geared up for the 2019 Lok Sabha elections as he held a meeting with party workers, general secretaries and in-charges and gave them an ultimatum --- to decide the candidates within the month of February.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X