ಲೋಕಸಭಾ ಸದಸ್ಯತ್ವ ಸ್ಥಾನದಿಂದ ರಾಹುಲ್ ಅನರ್ಹ: ಖರ್ಗೆ ಕೆಂಡಾಮಂಡಲ

ನವದೆಹಲಿ, ಮಾರ್ಚ್ 24: ವಯನಾಡ್ ಸಂಸದ ಮತ್ತು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಯವರನ್ನು ಲೋಕಸಭಾ ಸದಸ್ಯತ್ವ ಸ್ಥಾನದಿಂದ ಅನರ್ಹಗೊಳಿಸಿದ್ದಕ್ಕೆ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಬಿಜೆಪಿ ವಿರುದ್ದ ಟೀಕಾಪ್ರಹಾರ ನಡೆಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಖರ್ಗೆ,"ರಾಹುಲ್ ಗಾಂಧಿಯವರನ್ನು ಅನರ್ಹಗೊಳಿಸಲು ಎಲ್ಲಾ ದಾರಿಗಳನ್ನು ಬಳಸಿಕೊಂಡಿದೆ. ಸತ್ಯವನ್ನು ಹೇಳುವವರು ಬಿಜೆಪಿಗೆ ಬೇಕಾಗಿಲ್ಲ. ಪ್ರಜಾಪ್ರಭುತ್ವ ಉಳಿಸಲು ನಾವು ಜೈಲಿಗೆ ಹೋಗಲೂ ಸಿದ್ದ"ಎಂದು ಖರ್ಗೆ ಹೇಳಿದ್ದಾರೆ.

kharge

'ಎಲ್ಲಾ ಕಳ್ಲರಿಗೂ ಮೋದಿ ಎನ್ನುವ ಉಪನಾಮ ಏಕಿದೆ' ಎಂದು ರಾಹುಲ್ ಗಾಂಧಿ ಎರಡು ವರ್ಷಗಳ ಹಿಂದೆ ನೀಡಿದ್ದ ಹೇಳಿಕೆಗೆ ಸೂರತ್ ನ್ಯಾಯಾಲಯ ಅವರನ್ನು ದೋಷಿ ಎಂದು ತೀರ್ಪು ನೀಡಿತ್ತು.

ನ್ಯಾಯಾಲಯ ಆದೇಶದ 24 ಗಂಟೆಯಲ್ಲಿ ಲೋಕಸಭಾ ಕಾರ್ಯಾಲಯ ಈ ನಿರ್ಧಾರವನ್ನು ತೆಗೆದುಕೊಂಡಿದೆ ಮತ್ತು ಈ ನಿರ್ಧಾರ ನನಗೆ ಅಚ್ಚರಿಯನ್ನು ತಂದಿದೆ. ನ್ಯಾಯಾಲದ ಆದೇಶದ ವಿರುದ್ದ ಮೇಲ್ಮನವಿ ಸಲ್ಲಿಸುವ ಪ್ರಕ್ರಿಯೆಯನ್ನು ನಾವು ಆರಂಭಿಸಿದ್ದೆವು. ಇದು ಪ್ರಜಾಪ್ರಭುತ್ವ ವಿರೋಧಿ ನಿಲುವು"ಎಂದು ಕಾಂಗ್ರೆಸ್ ಮುಖಂಡ ಶಶಿ ತರೂರ್ ಕಿಡಿಕಾರಿದ್ದಾರೆ.

"ಲೋಕಸಭಾ ಕಾರ್ಯದರ್ಶಿಗೆ ಅನರ್ಹಗೊಳಿಸುವ ಅಧಿಕಾರವಿಲ್ಲ, ರಾಷ್ಟ್ರಪತಿಯವರು ಚುನಾವಣಾ ಆಯೋಗದ ಚರ್ಚಿಸಿ ನಿರ್ಧಾರ ತೆಗೆದುಕೊಳ್ಲಬೇಕಾಗುತ್ತದೆ"ಎಂದು ಹಿರಿಯ ಕಾಂಗ್ರೆಸ್ ಮುಖಂಡ ಮನೀಶ್ ತಿವಾರಿ ಹೇಳಿಕೆಯನ್ನು ನೀಡಿದ್ದರು.

2019ರ ಲೋಕಸಭೆ ಚುನಾವಣೆ ವೇಳೆ ಕರ್ನಾಟಕದ ಕೋಲಾರದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ರಾಹುಲ್ ಗಾಂಧಿ ಅವರು "ಎಲ್ಲಾ ಕಳ್ಳರಿಗೆ ಮೋದಿ ಎಂಬ ಉಪನಾಮ ಹೇಗೆ ಇರುತ್ತದೆ ಎಂಬುದು ಆಶ್ಚರ್ಯ" ಎಂದು ಹೇಳಿಕೆ ನೀಡಿದ್ದರು. ರಾಹುಲ್ ಗಾಂಧಿ ಅವರು ಮಾಡಿದ ಹೇಳಿಕೆಗೆ ಸಂಬಂಧಿಸಿದಂತೆ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಾಗಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+