ರಾಹುಲ್ ಗಾಂಧಿ ಅನರ್ಹ: ಮಮತಾ ಬ್ಯಾನರ್ಜಿ, ಅರವಿಂದ್ ಕೇಜ್ರಿವಾಲ್, ಪಿಣರಾಯಿ ವಿಜಯನ್ ಹೇಳಿದ್ದೇನು?
ನವದೆಹಲಿ, ಮಾರ್ಚ್. 24: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ಲೋಕಸಭಾ ಸದಸ್ಯತ್ವ ಸ್ಥಾನದಿಂದ ಅನರ್ಹಗೊಳಿಸಲಾಗಿದ್ದು, ಕೇಂದ್ರದ ನರೇಂದ್ರ ಮೋದಿ ಸರ್ಕಾರದ ವಿರುದ್ಧ ವಿಪಕ್ಷಗಳು ಭಾರೀ ಆಕ್ರೋಶ ವ್ಯಕ್ತಪಡಿಸಿವೆ. - ಕಾಂಗ್ರೆಸ್ ಜೊತೆಗಿನ ಭಿನ್ನಾಭಿಪ್ರಾಯಗಳ ಹೊರತಾಗಿಯೂ ಆಮ್ ಆದ್ಮಿ ಪಕ್ಷ, ತೃಣಮೂಲ ಕಾಂಗ್ರೆಸ್, ಡಿಎಂಕೆ ಸೇರಿದಂತೆ ಹಲವು ವಿರೋಧ ಪಕ್ಷಗಳು ಕೇಂದ್ರದ ವಿರುದ್ಧ ಕಿಡಿಕಾರಿವೆ.
ಮಾನನಷ್ಟ ಪ್ರಕರಣದಲ್ಲಿ ಸೂರತ್ ನ್ಯಾಯಾಲಯ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿದ ನಂತರ ರಾಹುಲ್ ಗಾಂಧಿ ಅವರನ್ನು ಸಂಸತ್ತಿನ ಸದಸ್ಯತ್ವದಿಂದ ಅನರ್ಹಗೊಳಿಸಲಾಗಿದೆ. ಇದಕ್ಕೆ ಮಮತಾ ಬ್ಯಾನರ್ಜಿ ಅವರ ತೃಣಮೂಲ ಕಾಂಗ್ರೆಸ್ ಮತ್ತು ಅರವಿಂದ್ ಕೇಜ್ರಿವಾಲ್ ಅವರ ಆಮ್ ಆದ್ಮಿ ಪಕ್ಷ ಸೇರಿದಂತೆ ಹಲವು ವಿರೋಧ ಪಕ್ಷಗಳು ತೀವ್ರವಾಗಿ ಪ್ರತಿಕ್ರಿಯಿಸಿವೆ.

ಪ್ರಧಾನಿ ನರೇಂದ್ರ ಮೋದಿಯವರ 'ನವ ಭಾರತ'ದಲ್ಲಿ ವಿರೋಧ ಪಕ್ಷದ ನಾಯಕರು ಬಿಜೆಪಿಯ ಪ್ರಮುಖ ಗುರಿಯಾಗಿದ್ದಾರೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ. "ಪ್ರಧಾನಿ ಮೋದಿಯವರ ನವಭಾರತದಲ್ಲಿ, ವಿರೋಧ ಪಕ್ಷದ ನಾಯಕರು ಬಿಜೆಪಿಯ ಪ್ರಮುಖ ಗುರಿಯಾಗಿದ್ದಾರೆ! ಕ್ರಿಮಿನಲ್ ಹಿನ್ನಲೆ ಹೊಂದಿರುವ ಬಿಜೆಪಿ ನಾಯಕರನ್ನು ಸಂಪುಟಕ್ಕೆ ಸೇರಿಸಿಕೊಂಡು, ವಿರೋಧ ಪಕ್ಷದ ನಾಯಕರ ಭಾಷಣಕ್ಕೆ ಹೆದರಿ ಅನರ್ಹಗೊಳಿಸಲಾಗುತ್ತಿದೆ. ಇಂದು ನಾವು ನಮ್ಮ ಸಾಂವಿಧಾನಿಕ ಪ್ರಜಾಪ್ರಭುತ್ವದ ಹೊಸ ಕುಸಿತಕ್ಕೆ ಸಾಕ್ಷಿಯಾಗಿದ್ದೇವೆ" ಎಂದು ಬೇಸರ ವ್ಯಕ್ತಪಡಿಸಿ ಪ್ರಧಾನಿ ವಿರುದ್ಧ ಕಿಡಿಕಾರಿದ್ದಾರೆ.
आज देश में जो चल रहा है बहुत ख़तरनाक है। विपक्ष को ख़त्म करके ये लोग वन-नेशन वन-पार्टी का माहौल बनाना चाहते हैं, इसी को तो तानाशाही कहते हैं।
— Arvind Kejriwal (@ArvindKejriwal) March 24, 2023
मेरी देशवासियों से अपील है- हमें मिलकर आगे आना होगा, जनतंत्र बचाना है, देश बचाना है। pic.twitter.com/rp4qX6QN3P
ರಾಹುಲ್ ಗಾಂಧಿ ಕುರಿತ ನ್ಯಾಯಾಲಯದ ಆದೇಶ ಮತ್ತು ಅದರ ನಂತರ ಲೋಕಸಭೆಯ ತ್ವರಿತ ನಡೆಯ ಬಗ್ಗೆ ಅರವಿಂದ್ ಕೇಜ್ರಿವಾಲ್ ಕೇಂದ್ರ ನಾಯಕತ್ವವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. "ದೇಶದಲ್ಲಿ ಒಂದೇ ಪಕ್ಷ ಮತ್ತು ಒಬ್ಬನೇ ನಾಯಕ ಉಳಿಯುವಂತಹ ವಾತಾವರಣವನ್ನು ಸೃಷ್ಟಿಸಲು ಇವರು ಬಯಸುತ್ತಿದ್ದಾರೆ. ಇತರ ಎಲ್ಲಾ ನಾಯಕರು ಮತ್ತು ಪಕ್ಷಗಳನ್ನು ಮುಗಿಸಬೇಕೆಂದು ಬಯಸುತ್ತಿದ್ದು, ಇದನ್ನು ಸರ್ವಾಧಿಕಾರ ಎಂದು ಕರೆಯಲಾಗುತ್ತದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಇಂದಿನ ಸರ್ಕಾರ ಬ್ರಿಟಿಷರ ಆಡಳಿತಕ್ಕಿಂತ ಅಪಾಯಕಾರಿಯಾಗಿದೆ. ಇದು ಕೇವಲ ಕಾಂಗ್ರೆಸ್ ಹೋರಾಟವಲ್ಲ. ಇದು ದೇಶವನ್ನು ಉಳಿಸುವ ಹೋರಾಟವಾಗಿದೆ" ಎಂದು ಟೀಕಿಸಿದ್ದಾರೆ.

ಆಪ್ ನಾಯಕ ಮತ್ತು ಕೇಜ್ರಿವಾಲ್ ಸಂಪುಟದ ಸಚಿವ ಸೌರಭ್ ಭಾರದ್ವಾಜ್ ಕೂಡ"ಕಾಂಗ್ರೆಸ್‌ನೊಂದಿಗೆ ನಮಗೆ ಸಾಕಷ್ಟು ಭಿನ್ನಾಭಿಪ್ರಾಯಗಳಿವೆ, ಕೇಂದ್ರವು ನಮ್ಮ ಮೇಲೆ ದಾಳಿ ಮಾಡಿದಾಗಲೆಲ್ಲಾ ಕಾಂಗ್ರೆಸ್ ನಾಯಕರು ಚಪ್ಪಾಳೆ ತಟ್ಟಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಕೇಂದ್ರವು ಪ್ರತಿಪಕ್ಷಗಳ ಧ್ವನಿಯನ್ನು ಹತ್ತಿಕ್ಕಿದರೆ, ಜನರ ಸಮಸ್ಯೆಗಳನ್ನು ಯಾರು ಎತ್ತುತ್ತಾರೆ..?, ಸಂಸತ್ತಿನಲ್ಲಿ ಪ್ರತಿಪಕ್ಷಗಳ ಧ್ವನಿಯನ್ನು ಹಲವು ಬಾರಿ ಹತ್ತಿಕ್ಕಲಾಗಿದೆ, ಆದರೆ ಈಗ ಸಣ್ಣಪುಟ್ಟ ವಿಷಯಗಳ ಮೇಲೆ ಹತ್ತಾರು ಪ್ರಕರಣಗಳು ದಾಖಲಾಗಿವೆ, ಇದು ಮುಂದುವರಿಯಬೇಕಾದರೆ, ಪ್ರಧಾನಿ ಮತ್ತು ಬಿಜೆಪಿ ಏಕಾಂಗಿಯಾಗಿ ವಿರೋಧವಿಲ್ಲದೆ ಎಲ್ಲಾ ಚುನಾವಣೆಗಳನ್ನು ಎದುರಿಸಲಿ. ಅದೇ ಸರ್ವಾಧಿಕಾರ" ಎಂದು ಎಎಪಿ ನಾಯಕ ವ್ಯಂಗ್ಯವಾಡಿದ್ದಾರೆ.
The hasty decision to disqualify @RahulGandhi as a member of the Lok Sabha is yet another episode in @BJP4India's authoritarian rampage against Indian democracy. This brazen assault is an insult to our democratic values and can't be overlooked. It must be unequivocally denounced.
— Pinarayi Vijayan (@pinarayivijayan) March 24, 2023
ತಮಿಳುನಾಡು ಮುಖ್ಯಮಂತ್ರಿ ಹಾಗೂ ಡಿಎಂಕೆ ಅಧ್ಯಕ್ಷ ಎಂ.ಕೆ.ಸ್ಟಾಲಿನ್, "ರಾಹುಲ್ ಗಾಂಧಿ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸುವುದು, ಮೇಲ್ಮನವಿ ಸಲ್ಲಿಸುವ ಮುನ್ನವೇ ಚುನಾಯಿತ ಸಂಸದರ ಹಕ್ಕನ್ನು ಕಸಿದುಕೊಳ್ಳುವುದು. ಇದೀಗ ವಿಚಾರಣಾ ನ್ಯಾಯಾಲಯ ಮಾತ್ರ ತನ್ನ ತೀರ್ಪು ನೀಡಿದೆ. ಹೈಕೋರ್ಟ್‌ನಲ್ಲಿ ಮೇಲ್ಮನವಿ ಇನ್ನೂ ವಿಚಾರಣೆಯಲ್ಲಿದೆ. ಸುಪ್ರೀಂ ಕೋರ್ಟ್ ಅಂತಿಮ ತೀರ್ಪು ಪ್ರಕಟಿಸಬೇಕು. ಬಿಜೆಪಿ ಈ ಅವಕಾಶಕ್ಕಾಗಿ ಕಾಯುತ್ತಿದೆ ಎಂಬುದನ್ನು ಜಿಲ್ಲಾ ನ್ಯಾಯಾಲಯದ ತೀರ್ಪಿನ ಒಂದು ದಿನದೊಳಗೆ ರಾಹುಲ್ ಗಾಂಧಿಯನ್ನು ಅನರ್ಹಗೊಳಿಸುವ ಅವರ ಕ್ರಮವೇ ತಿಳಿಸುತ್ತಿದೆ" ಎಂದು ಹೇಳಿದ್ದಾರೆ.

ಶಿವಸೇನೆ (ಯುಬಿಟಿ) ಪಕ್ಷದ ಮುಖ್ಯಸ್ಥರಾಗಿರುವ ಉದ್ಧವ್ ಠಾಕ್ರೆ ಅವರು ಶುಕ್ರವಾರ ರಾಹುಲ್ ಗಾಂಧಿಯವರ ಅನರ್ಹತೆಯನ್ನು ಪ್ರಜಾಪ್ರಭುತ್ವದ "ಕೊಲೆ" ಎಂದು ಕರೆದಿದ್ದು, "ಸರ್ವಾಧಿಕಾರದ" ಅಂತ್ಯದ ಆರಂಭವಾಗಿದೆ. ಎಲ್ಲಾ ತನಿಖಾ ಏಜೆನ್ಸಿಗಳು ಒತ್ತಡದಲ್ಲಿವೆ. ಇದು ಸರ್ವಾಧಿಕಾರದ ಅಂತ್ಯದ ಆರಂಭವಾಗಿದೆ" ಎಂದು ಉದ್ಧವ್ ಕಿಡಿಕಾರಿದ್ದಾರೆ.
ಲಾಲು ಪ್ರಸಾದ್ ಯಾದವ್ ಅವರ ರಾಷ್ಟ್ರೀಯ ಜನತಾ ದಳದ ಸಂಸದ ಮನೋಜ್ ಝಾ ಅವರು ರಾಹುಲ್ ಗಾಂಧಿ ಅವರ ಅನರ್ಹತೆಯನ್ನು "ನಾಚಿಕೆಗೇಡಿನ ಮತ್ತು ದುರದೃಷ್ಟಕರ ಸಂಗತಿ " ಎಂದು ಕರೆದಿದ್ದಾರೆ. ಸಂಸದೀಯ ಪ್ರಜಾಪ್ರಭುತ್ವದ ಇತಿಹಾಸದಲ್ಲಿ ಇದಕ್ಕಿಂತ ದೊಡ್ಡ ಕಳಂಕ ಯಾವುದೂ ಇರಲಾರದು ಎಂದು ಸಂಸದರು ಟೀಕಿಸಿದ್ದಾರೆ.

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ರಾಹುಲ್ ಗಾಂಧಿಯವರ ಅನರ್ಹತೆಯನ್ನು ಪ್ರಜಾಪ್ರಭುತ್ವದ ಮೇಲಿನ ಹಿಂಸಾತ್ಮಕ ದಾಳಿ ಎಂದು ಕರೆದಿದ್ದಾರೆ. ರಾಹುಲ್ ಗಾಂಧಿಯವರ "ತರಾತುರಿ" ಅನರ್ಹಗೊಳಿಸುವಿಕೆಯು ಪ್ರಜಾಪ್ರಭುತ್ವದ ಮೇಲಿನ ಬಿಜೆಪಿ ಆಕ್ರಮಣದ ಇತ್ತೀಚಿನ ಅಧ್ಯಾಯ ಎಂದಿದ್ದಾರೆ. ಇನ್ನು, ಪ್ರಜಾಪ್ರಭುತ್ವ ರಾಷ್ಟ್ರವಾಗಿ ಭಾರತ ಎಲ್ಲಿಗೆ ಹೋಗುತ್ತಿದೆ ಎಂದು ಸಿಪಿಐ ನಾಯಕ ಬಿನೋಯ್ ವಿಶ್ವಂ ಪ್ರಶ್ನಿಸಿದ್ದಾರೆ.
ಮಾಯಾವತಿಯವರ ಬಹುಜನ ಸಮಾಜ ಪಕ್ಷದ ಸಂಸದ ಡ್ಯಾನಿಶ್ ಅಲಿ, "ಇಂತಹ ಮಾನನಷ್ಟ ವಿಷಯಗಳಲ್ಲಿ ಸಂಸದರು ತಮ್ಮ ಸದಸ್ಯತ್ವವನ್ನು ಕಳೆದುಕೊಂಡರೆ, ಶೇಕಡಾ 70 ರಷ್ಟು ಸಂಸದರು ತಮ್ಮ ಸದಸ್ಯತ್ವವನ್ನು ಕಳೆದುಕೊಳ್ಳುತ್ತಾರೆ, ಅವರಲ್ಲಿ ಹೆಚ್ಚಿನವರು ಬಿಜೆಪಿಯವರು" ಎಂದು ವ್ಯಂಗ್ಯವಾಡಿದ್ದಾರೆ.
2019 ರ ಸಾರ್ವತ್ರಿಕ ಚುನಾವಣಾ ಪ್ರಚಾರದ ಸಮಯದಲ್ಲಿ, ರಾಹುಲ್ ಗಾಂಧಿ ಕೋಲಾರದಲ್ಲಿ ನಡೆದ ರೋಡ್ ಶೋ ಮತ್ತು ಬೃಹತ್ ಸಾರ್ವಜನಿಕ ಸಭೆ ವೇಳೆ ವೇಳೆ ಪ್ರಧಾನಿ ನರೇಂದ್ರ ಮೋದಿಯವರ ಉಪನಾಮದ ಕುರಿತು ಟೀಕೆ ಮಾಡಿದ್ದರು. ಈ ಬಗ್ಗೆ ದಾಖಲಿಸಲಾಗಿದ್ದ ಮಾನನಷ್ಟ ಮೊಕದ್ದಮೆಯಲ್ಲಿ ಸೂರತ್‌ನ ನ್ಯಾಯಾಲಯವು ಅವರನ್ನು ದೋಷಿ ಎಂದು ಘೋಷಿಸಿ ಎರಡು ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿದೆ. ಜೊತೆಗೆ ನಿರ್ಧಾರವನ್ನು ಮೇಲ್ಮನವಿ ಸಲ್ಲಿಸಲು 30 ದಿನಗಳ ಕಾಲ ಜಾಮೀನು ನೀಡಿತು. ಇದಾಗಿ ಒಂದು ದಿನದ ನಂತರ ಲೋಕಸಭೆಯ ಸೆಕ್ರೆಟರಿಯೇಟ್ ರಾಹುಲ್ ಗಾಂಧಿಯನ್ನು ಕೇರಳದ ವಯನಾಡ್‌ನಿಂದ ಸಂಸದರನ್ನಾಗಿ ಅನರ್ಹಗೊಳಿಸಿದೆ. ಉನ್ನತ ನ್ಯಾಯಾಲಯವು ಅವರ ಅಪರಾಧ ಮತ್ತು ಶಿಕ್ಷೆಯನ್ನು ತಡೆಹಿಡಿಯದ ಹೊರತು ರಾಹುಲ್ ಗಾಂಧಿ ಅವರು ಎಂಟು ವರ್ಷಗಳವರೆಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಸಾಧ್ಯವಾಗುವುದಿಲ್ಲ.
-
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ












Click it and Unblock the Notifications