ಸತ್ಯ ಎದುರಿಸಲಾಗದೇ, ಅಮಾನತು ಮಾಡಿ ಹೇಡಿತನ ಪ್ರದರ್ಶಿಸಿದೆ ಮೋದಿ ಸರ್ಕಾರ: ಸಿದ್ದರಾಮಯ್ಯ ಕಿಡಿ

ಬೆಂಗಳೂರು, ಮಾರ್ಚ್. 24: ಸಂಸದ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ಲೋಕಸಭಾ ಸದಸ್ಯತ್ವ ಸ್ಥಾನದಿಂದ ಅನರ್ಹಗೊಳಿಸಲಾಗಿದೆ. ಮೋದಿ ಉಪನಾಮದ ಕುರಿತ ಹೇಳಿಕೆಗಾಗಿ ಸೂರತ್ ನ್ಯಾಯಾಲಯ ರಾಹುಲ್ ಗಾಂಧಿ ಅವರು ದೋಷಿ ಎಂದು ಗುರುವಾರ ತೀರ್ಪು ನೀಡಿತ್ತು. ಇದರ ಬೆನ್ನಲ್ಲೇ ಲೋಕಸಭಾ ಸದಸ್ಯ ಸ್ಥಾನದಿಂದ ಅವರನ್ನು ಅನರ್ಹಗೊಳಿಸಿದ್ದಾರೆ.

ಲೋಕಸಭೆ ಸಚಿವಾಲಯದ ಕಾರ್ಯದರ್ಶಿ ರಾಹುಲ್‌ ಗಾಂಧಿ ಅವರನ್ನು ಅನರ್ಹಗೊಳಿಸಿ ಆದೇಶ ಹೊರಡಿಸಿದ್ದಾರೆ. ಇದಕ್ಕೆ ಕಾಂಗ್ರೆಸ್ ನಾಯಕರು ಸೇರಿದಂತೆ ದೇಶದ ಹಲವು ವಿರೋದ ಪಕ್ಷಗಳು ಆಕ್ಷೇಪ ವ್ಯಕ್ತಪಡಿಸಿದೆ. ಘಟನೆಯನ್ನು ಖಂಡಿಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾರತದ ಸಂಸದೀಯ ಪ್ರಜಾಪ್ರಭುತ್ವದಲ್ಲಿ ಇದೊಂದು ಕರಾಳ ದಿನ ಎಂದು ಘೋಷಿಸಿದ್ದಾರೆ.

Rahul Gandhi Disqualified as Member of Lok Sabha; Siddaramaiah Reaction

"ನಮ್ಮ ನಾಯಕರಾದ ರಾಹುಲ್ ಗಾಂಧಿ ಅವರು ಹೇಳುವ ಸತ್ಯವನ್ನು ಎದುರಿಸಲಾಗದ ನರೇಂದ್ರ ಮೋದಿ ಸರ್ಕಾರ ಅವರನ್ನು ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಿ ತನ್ನ ಹೇಡಿತನವನ್ನು ಜಾಹೀರುಗೊಳಿಸಿದೆ. ಭಾರತದ ಸಂಸದೀಯ ಪ್ರಜಾಪ್ರಭುತ್ವದಲ್ಲಿ ಇದೊಂದು ಕರಾಳ ದಿನ" ಎಂದು ಸಿದ್ದರಾಮಯ್ಯ ರಾಹುಲ್ ಗಾಂಧಿಯವರ ವಿರುದ್ಧ ತೆಗೆದುಕೊಂಡಿರುವ ನಿರ್ಣಯವನ್ನು ಖಂಡಿಸಿದ್ದಾರೆ.

"ಭಾರತೀಯ ಜನತಾ ಪಕ್ಷದ ಪಾಪದ ಕೊಡ ತುಂಬಿದೆ. ತನ್ನ ನಾಶದ ಶವದಪೆಟ್ಟಿಗೆಗೆ ತಾನೇ ಕೊನೆಯ ಮೊಳೆ ಬಡಿದಿದೆ. ಈ ಫ್ಯಾಸಿಸ್ಟ್ ನಡವಳಿಕೆಗೆ ಹೆದರುವ, ಹಿಂಜರಿಯುವ ಪ್ರಶ್ನೆಯೇ ಇಲ್ಲ. ಈ ಅನ್ಯಾಯದ ವಿರುದ್ಧ ನ್ಯಾಯಾಲಯ ಮತ್ತು ಬೀದಿಗಳಲ್ಲಿ ಹೋರಾಟ ಮಾಡುತ್ತೇವೆ" ಎಂದು ಬಿಜೆಪಿ ಸರ್ಕಾರದ ನಿರ್ಧಾರನ್ನು ಕಟುವಾಗಿ ಟೀಕಿಸಿದ್ದಾರೆ ಸಿದ್ದರಾಮಯ್ಯ.

" ಭಾರತದಲ್ಲಿ ಇಂದು ಅನಧಿಕೃತವಾಗಿ ತುರ್ತುಪರಿಸ್ಥಿತಿ ಘೋಷಿಸಲಾಗಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ, ಭಾರತೀಯ ಜನತಾ ಪಾರ್ಟಿ ಮತ್ತು ಎನ್ ಡಿ ಎ ಸರ್ಕಾರದ ವಿರುದ್ಧ ಮಾತನಾಡುವವರಿಗೆಲ್ಲರಿಗೂ ಎಚ್ಚರಿಕೆಯ ರೂಪದಲ್ಲಿ ರಾಹುಲ್ ಗಾಂಧಿ ಅವರ ಬಗ್ಗೆ ಕೇಂದ್ರ ಸರ್ಕಾರ ನಿರ್ಧಾರ ಕೈಗೊಂಡಿದೆ" ಎಂದು ಕೇಂದ್ರ ಸರ್ಕಾರ ವಿರೋಧ ಪಕ್ಷಗಳು ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲೆ ಒತ್ತಡ ಹೇರುತ್ತಿದೆ ಎಂದು ಕಿಡಿಕಾರಿದ್ದಾರೆ.

Rahul Gandhi Disqualified as Member of Lok Sabha; Siddaramaiah Reaction

"ಇದು ಕೇವಲ ಕಾಂಗ್ರೆಸ್ ಪಕ್ಷ ಇಲ್ಲವೇ ರಾಹುಲ್ ಗಾಂಧಿ ಅವರಿಗೆ ನೀಡಿರುವ ಬೆದರಿಕೆ ಅಲ್ಲ, ಅನ್ಯಾಯ - ಅಕ್ರಮದ ವಿರುದ್ಧ ದನಿ ಎತ್ತುವ ಎಲ್ಲ ಪ್ರಜಾಪ್ರಭುತ್ವ ಪ್ರೇಮಿಗಳಿಗೆ ಒಡ್ಡಿರುವ ಬೆದರಿಕೆ. ಪಕ್ಷ, ಪಂಥ ಬೇಧ ಮರೆತು ಎಲ್ಲರೂ ಒಟ್ಟಾಗಿ ಇದರ ವಿರುದ್ಧ ಪ್ರತಿಭಟನೆ ನಡೆಸಬೇಕಾಗಿದೆ" ಎಂದು ಪ್ರತಿಪಕ್ಷಗಳು ಮತ್ತು ದೇಶದ ಎಲ್ಲಾ ನಾಗರಿಕರಿಗೆ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.

"ನಮ್ಮ ನಾಯಕರಾದ ರಾಹುಲ್ ಗಾಂಧಿ ಅವರ ವಿರುದ್ಧ ಕೈಗೊಳ್ಳಲಾದ ಕ್ರಮದಿಂದ ಕಾಂಗ್ರೆಸ್ ಪಕ್ಷದ ಲಕ್ಷಾಂತರ ಕಾರ್ಯಕರ್ತರ ಮನಸ್ಸಿಗೆ ನೋವಾಗಿರುವುದು ನಿಜವಾದರೂ ಈ ಸಂದರ್ಭದಲ್ಲಿ ಸಂಯಮದಿಂದ ವರ್ತಿಸುವುದು ಅಗತ್ಯ. ಯಾರೂ ಕೂಡಾ ಸಿಟ್ಟು - ಆಕ್ರೋಶದ ಕೈಗೆ ಬುದ್ದಿ ಕೊಡದೆ ಶಾಂತಿಯುತ ಪ್ರತಿಭಟನೆ ನಡೆಸಬೇಕೆಂದು ಕೋರುತ್ತೇನೆ" ಎಂದು ಕಾಂಗ್ರೆಸ್ ಕಾರ್ಯಕರ್ತರಿಗೆ ಶಾಂತಿಯಿಂದ ವರ್ತಿಸುವಂತೆ ಕರೆ ನೀಡಿದ್ದಾರೆ.

2019 ರ ಸಾರ್ವತ್ರಿಕ ಚುನಾವಣಾ ಪ್ರಚಾರದ ಸಮಯದಲ್ಲಿ, ರಾಹುಲ್ ಗಾಂಧಿ ಕೋಲಾರದಲ್ಲಿ ನಡೆದ ರೋಡ್ ಶೋ ಮತ್ತು ಬೃಹತ್ ಸಾರ್ವಜನಿಕ ಸಭೆ ವೇಳೆ ವೇಳೆ ಪ್ರಧಾನಿ ನರೇಂದ್ರ ಮೋದಿಯವರ ಉಪನಾಮದ ಕುರಿತು ಟೀಕೆ ಮಾಡಿದ್ದರು. ಬ್ಯಾಂಕ್‌ಗಳಿಗೆ ಸಾವಿರಾರು ಕೋಟಿ ರೂಪಾಯಿ ವಂಚಿಸಿ ದೇಶ ಬಿಟ್ಟು ಪರಾರಿಯಾಗಿರುವ ಆರ್ಥಿಕ ಅಪರಾಧಿಗಳ ಹೆಸರುಗಳು ಮೋದಿಯವರ ಉಪನಾಮದೊಂದಿಗೆ ಏಕೆ ಇವೆ ಎಂಬುದು ಆಶ್ಚರ್ಯ ಎಂದಿದ್ದರು.

ಹೇಳಿಕೆ ಬೆನ್ನಲ್ಲೇ ಗುಜರಾತ್‌ನ ಬಿಜೆಪಿ ಶಾಸಕ, ಮಾಜಿ ಸಚಿವ ಪೂರ್ಣೇಶ್ ಮೋದಿ ರಾಹುಲ್ ಗಾಂಧಿ ವಿರುದ್ಧ ಕ್ರಿಮಮಿನಲ್ ಮಾನನಷ್ಟ ಮೊಕ್ಕದಮೆ ದೂರು ದಾಖಲಿಸಿದ್ದಾರೆ. ಪೂರ್ಣೇಶ್ ಮೋದಿ ಅವರ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಗುಜರಾತ್‌ನ ಸೂರತ್ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಈ ಪ್ರಕರಣದಲ್ಲಿ ರಾಹುಲ್ ಗಾಂಧಿಯನ್ನು ದೋಷಿ ಎಂದು ಮಾರ್ಚ್ 23 ರ ಗುರುವಾರ ತೀರ್ಪು ನೀಡಿದೆ. ಜೊತೆಗೆ ಶಿಕ್ಷೇಯನ್ನು ಒಂದು ತಿಂಗಳು ಅಮಾನತ್ತಿನಲ್ಲಿ ಇಟ್ಟು, ಜಾಮೀನು ನೀಡಿ ಮೇಲ್ಮನವಿ ಸಲ್ಲಿಸುವಂತೆ ಸೂಚಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+