Poonch Terrorist Attack: ಹುತಾತ್ಮ ಯೋಧರಿಗೆ ರಾಹುಲ್ ಗಾಂಧಿ, ಕೇಜ್ರಿವಾಲ್, ಖರ್ಗೆ ಸಂತಾಪ

ಜಮ್ಮು ಮತ್ತಿ ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಸೈನಿಕರ ಮೇಲೆ ಭಯೋತ್ಪಾದಕರು ದಾಳಿ ನಡೆಸಿದ್ದು, ಐವರು ಯೋಧರು ಹುತಾತ್ಮರಾಗಿದ್ದಾರೆ. ಹುತಾತ್ಮ ಯೋಧರಿಗೆ ಉನ್ನತ ರಾಜಕೀಯ ನಾಯಕರು ಸಂತಾಪ ಸೂಚಿಸಿದ್ದು, ಭಯೋತ್ಪಾದನಾ ದಾಳಿಯನ್ನು ಖಂಡಿಸಿದ್ದಾರೆ.

ಯೋಧರನ್ನು ಹೊತ್ತೊಯ್ಯುತ್ತಿದ್ದ ಸೇನಾ ವಾಹನದ ಮೇಲೆ ದಾಳಿ ಮಾಡಿದ ಪಾಪಿಗಳು ನಿರಂತರ ಗುಂಡಿನ ಸುರಿಮಳೆಗೈದಿದ್ದಾರೆ. ಗ್ರೆನೇಡ್ ಮೂಲಕ ದಾಳಿ ಮಾಡಿದ್ದು, ಇಂಧನಕ್ಕೆ ಬೆಂಕಿ ತಗುಲಿದ್ದರಿಂದ ಇಡೀ ವಾಹನ ಸುಟ್ಟು ಕರಕಲಾಗಿದೆ. ಯೋಧರ ಮೇಲಿನ ದಾಳಿಯನ್ನು ತೀವ್ರವಾಗಿ ಖಂಡಿಸಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಭಯೋತ್ಪಾದನೆ ವಿರುದ್ಧ ನಾವೆಲ್ಲರೂ ಒಗ್ಗಟ್ಟಾಗಿದ್ದೇವೆ ಎಂದು ಹೇಳಿದ್ದು, ಯೋಧರ ಸಾವಿಗೆ ಸಂತಾಪ ಸೂಚಿಸಿದ್ದಾರೆ.

Rahul Gandhi, Kejriwal & Kharge Condemn Terrorist Attack on Army Soldiers in Poonch District

ಕಾಂಗ್ರೆಸ್‌ನ ಹಿರಿಯ ನಾಯಕ ರಾಹುಲ್ ಗಾಂಧಿ ಕೂಡ ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಿ, ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ. ಉಗ್ರರ ದಾಳಿಯಲ್ಲಿ ಐವರು ಯೋಧರು ಹುತಾತ್ಮರಾದದ್ದು ಅತ್ಯಂತ ದುಃಖ ತಂದಿದೆ ಎಂದು ಹೇಳಿದ್ದಾರೆ.

ದೆಹಲಿ ಮುಖ್ಯಮಂತ್ರಿ ಮತ್ತು ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಕೂಡ ಸೈನಿಕರ ಸಾವಿನ ಬಗ್ಗೆ ಆಘಾತ ವ್ಯಕ್ತಪಡಿಸಿದ್ದಾರೆ. ಮತ್ತು ಹೇಡಿತನದಲ್ಲಿ ದಾಳಿ ಮಾಡಿದ ಕೃತ್ಯದ ಹಿಂದಿರುವ ಶಕ್ತಿಗಳಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಒತ್ತಾಯಿಸಿದ್ದಾರೆ. "ಯೋಧರನ್ನು ಅಗಲಿದ ನಮ್ಮ ಕುಟುಂಬಗಳಿಗೆ ಸಂತಾಪಗಳು, ಹುತಾತ್ಮರ ಆತ್ಮಕ್ಕೆ ದೇವರು ಶಾಂತಿ ನೀಡಲಿ" ಎಂದು ಟ್ವೀಟ್ ಮಾಡಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮತ್ತು ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (ಪಿಡಿಪಿ) ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಟ್ವೀಟ್ ಮಾಡಿದ್ದರು. "ಪೂಂಚ್‌ನಲ್ಲಿ ನಡೆದ ಭೀಕರ ದಾಳಿಯನ್ನು ಬಲವಾಗಿ ಖಂಡಿಸುತ್ತೇನೆ. ಹುತಾತ್ಮರಾದ ಸೇನಾ ಯೋಧರ ಕುಟುಂಬಗಳಿಗೆ ಸಂತಾಪಗಳು" ಎಂದು ಹೇಳಿದ್ದಾರೆ.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಕೂಡ ಭಯೋತ್ಪಾದನಾ ದಾಳಿ ಕುರಿತಂತೆ ಟ್ವೀಟ್ ಮಾಡಿದ್ದಾರೆ, "ಜಮ್ಮು ಮತ್ತು ಕಾಶ್ಮೀರದ ಪೂಂಚ್‌ನಲ್ಲಿ ಸೇನಾ ವಾಹನದ ಮೇಲೆ ಉಗ್ರರು ನಡೆಸಿದ ಭೀಕರ ದಾಳಿ ಅತ್ಯಂತ ಖಂಡನೀಯ. ಭಯೋತ್ಪಾದನೆಯ ವಿರುದ್ಧ ಇಡೀ ದೇಶ ಒಗ್ಗಟ್ಟಾಗಿದೆ." ಎಂದು ಹೇಳಿದ್ದಾರೆ. "ದಾಳಿಯಲ್ಲಿ ಹುತಾತ್ಮರಾದ ವೀರ ಯೋಧರಿಗೆ ನಮ್ಮ ನಮನ. ಹುತಾತ್ಮ ಯೋಧರಿಗೆ ಮತ್ತು ಅವರ ಕುಟುಂಬಗಳಿಗೆ ಇಡೀ ದೇಶ ಋಣಿಯಾಗಿರುತ್ತದೆ. ಯೋಧರನ್ನು ಕಳೆದುಕೊಂಡ ಕುಟುಂಬಗಳಿಗೆ ಸಂತಾಪಗಳು" ಎಂದಿದ್ದಾರೆ.

ಪೂಂಚ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ಸೇನಾ ವಾಹನಲ್ಲೆ ಬೆಂಕಿ ಹೊತ್ತಿಕೊಂಡ ಪರಿಣಾ ಐವರು ಸೇನಾ ಸಿಬ್ಬಂದಿ ಗಾಯಗೊಂಡಿದ್ದು ಇನ್ನೊಬ್ಬರು ಸಾವನ್ನಪ್ಪಿದ್ದಾರೆ. ನಾಲ್ಕು ಕಡೆಗಳಿಂದ ಗುಂಡಿನ ದಾಳಿ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನಾಲ್ವರು ಭಯೋತ್ಪಾದಕರು ಈ ಕೃತ್ಯ ಎಸಗಿರಬಹುದು ಎಂದು ಅಂದಾಜಿಸಲಾಗಿದೆ. ದಾಳಿಯ ಬಳಿಕ ಉಗ್ರರು ಪರಾರಿಯಾಗಿದ್ದು, ಭದ್ರತಾ ಪಡೆಗಳು ತೀವ್ರ ಹುಡುಕಾಟ ನಡೆಸುತ್ತಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+