India-Pakistan War: ಉಗ್ರರ ನೆಲೆಗಳ ಮೇಲೆ ಭಾರತ ದಾಳಿ ಬಗ್ಗೆ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಫಸ್ಟ್ ರಿಯಾಕ್ಷನ್
India-Pakistan War: ಪಹಲ್ಗಾಮ್‌ನಲ್ಲಿ ದೇಶದ ಸುಮಾರು 26 ಅಮಾಯಕರನ್ನು ಉಗ್ರರು ಬಲಿ ಪಡೆದುಕೊಂಡಿದ್ದರು. ಇದಕ್ಕೆ ಪ್ರತ್ಯುತ್ತರವಾಗಿ ಭಾರತೀಯ ಸೇನೆಯು ಉಗ್ರರ ನೆಲೆಗಳ ಮೇಲೆ ದಾಳಿ ನಡೆಸಿ ಉಡೀಸ್ ಮಾಡಿದೆ. ಈ ಮಹತ್ತರ ಕಾರ್ಯಕ್ಕೆ ಇಡೀ ದೇಶವೇ ಸೈ ಎನ್ನುತ್ತಿದೆ. ಅಲ್ಲದೆ, ರಾಜಕೀಯ, ಸಿನಿ ಗಣ್ಯರು ಸಹ ಮೆಚ್ಚುಗೆ ವ್ಯಪ್ತಪಡಿಸಿದ್ದಾರೆ. ಹಾಗೆಯೇ ಈ ಬಗ್ಗೆ ಕಾಂಗ್ರೆಸ್‌ನ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.
ಪಹಲ್ಗಾಮ್‌ಗೆ ಪ್ರತೀಕಾರವಾಗಿ ಭಾರತೀಯ ಸೇನೆ ನಡೆಸಿದ "ಆಪರೇಷನ್ ಸಿಂಧೂರ" ಕಾರ್ಯಾಚರಣೆಗೆ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಬೆಂಬಲ ಸೂಚಿಸಿದ್ದಾರೆ. ಹಾಗಾದ್ರೆ ಅವರು ಏನು ಹೇಳಿದ್ದಾರೆ ಎಂದು ಇಲ್ಲಿ ತಿಳಿಯಿರಿ.

ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ದಾಳಿ ಜಾವಾಬ್ದಾರಿಯನ್ನ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್ ಎ-ತೊಯ್ಭಾದ ಟಿಆರ್‌ಎಫ್ ಹೊತ್ತುಕೊಂಡಿತ್ತು. ಈ ದಾಳಿಗೆ ಪ್ರತ್ಯುತ್ತರವಾಗಿ "ಆಪರೇಷನ್ ಸಿಂಧೂರ" ಕಾರ್ಯಾಚರಣೆ ನಡೆಸಿ ಪಾಕ್ ಉಗ್ರರ ನೆಲೆಗಳನ್ನು ಧ್ವಂಸ ಮಾಡುವಲ್ಲಿ ಭಾರತೀಯ ಸೇನೆ ಯಶಸ್ವಿಯಾಗಿದೆ. ಈ ಕಾರ್ಯಕ್ಕೆ ಮೆಚ್ಚುಗಳ ಸುರಿಮಳೆಯೇ ಹರಿದುಬರುತ್ತಿದೆ.
ಮಂಗಳವಾರ ಜಾವ 1.44ಕ್ಕೆ ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿರುವ ಜೈಶ್, ಲಷ್ಕರ್-ಎ-ತೈಬಾ ಮತ್ತು ಹಿಜ್ಬುಲ್ ಮುಜಾಹಿದ್ದೀನ್‌ಗೆ ಸಂಬಂಧಿಸಿದ 9 ಭಯೋಯತ್ಪಾದಕ ನೆಲೆಗಳ ಮೇಲೆ ಭಾರತೀಯ ಸೇನೆ ದಾಳಿ ನಡೆಸಿದೆ. ಈ ಮೂಲಕ ಪಾಪಿ ಪಾಕಿಸ್ತಾನಕ್ಕೆ ಬಿಸಿ ಮುಟ್ಟಿಸಿ ಸ್ಯಾಂಪಲ್ ತೋರಿಸಿದೆ.
ಭಾರತೀಯ ಸೇನೆಯ ಈ ಕಾರ್ಯಕ್ಕೆ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸೇನೆಗೆ ನಮ್ಮ ಸಂಪೂರ್ಣ ಬೆಂಬಲ ಇದೆ ಎಂದು ಬುಧವಾರ ಮಧ್ಯಾಹ್ನ ನಡೆದ ಕಾಂಗ್ರೆಸ್ ಸಭೆ ನಂತರ ಹೇಳಿದ್ದಾರೆ. ಇನ್ನು ಮಲ್ಲಿಕಾರ್ಜುನ್ ಖಾರ್ಗೆ ಕೂಡ ಪ್ರತಿಕ್ರಿಯಿಸಿದ್ದಾರೆ. "ಪಹಲ್ಗಾಮ್ ದಾಳಿ ಹಿನ್ನೆಲೆ "ಆಪರೇಷನ್ ಸಿಂಧೂರ" ಕಾರ್ಯಾಚರಣೆ ನಡೆಸಿ ಪಾಕ್‌ಗೆ ಸೂಕ್ತ ಪ್ರತ್ಯುತ್ತರ ನೀಡಿದ ನಮ್ಮ ಭದ್ರತಾ ಪಡೆಗಳ ಬಗ್ಗೆ ನಮಗೆ ಹೆಮ್ಮೆ ಇದೆ," ಎಂದು ಹೇಳಿದ್ದಾರೆ.
ಇನ್ನು ಪ್ರಧಾನಿ ಮೋದಿ ಅವರ ನೇತೃತ್ವದಲ್ಲಿ ಈ ಕುರಿತು ನಾಳೆ ಅಂದರೆ ಗುರುವಾರ ಸರ್ವಪಕ್ಷಗಳ ಸಭೆ ಕರೆಯಲಾಗಿದೆ. ಕಾಂಗ್ರೆಸ್‌ಗೂ ಕರೆ ಬಂದಿದ್ದು, ಗುರುವಾರ ನಿಗದಿ ಆಗಿರುವ ಸರ್ವಪಕ್ಷ ಸಭೆಗೆ ಆಹ್ವಾಸಿದ್ದಾರೆ. "ನಾವು ಸಭೆಯಲ್ಲಿ ಪಾಲ್ಗೊಳ್ಳುತ್ತೇವೆ. ಈ ಬಗ್ಗೆ ರಾಹುಲ್ ಅವರು ಹೇಳಿದ್ದಾರೆ. ಇದು ದೇಶದ ವಿಷಯವಾಗಿದೆ. ಒಗ್ಗಟ್ಟಿನಿಂದ ಇರಬೇಕೆಂದು ನಾವು ಮೊದಲಿನಿಂದಲೂ ಹೇಳುತ್ತಿದ್ದೇವೆ. ರಾಷ್ಟ್ರದ ಹಿತಾಸಕ್ತಿಯಿಂದ ಯಾವುದೇ ಸಭೆಯನ್ನು ಕರೆದರೂ ಭಾಗಿಯಾಗಿ ನಮ್ಮ ಅಭಿಪ್ರಾಯ ತಿಳಿಸುತ್ತೇವೆ," ಎಂದು ಮಲ್ಲಿಕಾರ್ಜುನ ಖರ್ಗೆ ಅವರು ಹೇಳಿದರು.












Click it and Unblock the Notifications