ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಬಗ್ಗೆ ರಾಹುಲ್ ಹೇಳಿದ್ದು ಹೀಗೆ

|
Google Oneindia Kannada News

ನವದೆಹಲಿ, ಮೇ 23: ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಹೀನಾಯ ಸೋಲು ಕಂಡಿರುವ ಕಾರಣ ಅದರ ಜವಾಬ್ದಾರಿ ಹೊತ್ತು ರಾಹುಲ್ ಗಾಂಧಿ ಅವರು ಎಐಸಿಸಿ ಸ್ಥಾನಕ್ಕೆ ರಾಜೀನಾಮೆ ಕೊಡಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.

ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ರಾಹುಲ್ ಗಾಂಧಿ ಅವರನ್ನು ಪ್ರಶ್ನೆ ಮಾಡಲಾಯಿತು, ಇದಕ್ಕೆ ಪ್ರತಿಕ್ರಿಯಿಸಿದ ರಾಹುಲ್ ಗಾಂಧಿ ಆ ವಿಷಯಗಳೆಲ್ಲಾ ನಮ್ಮ ಹಾಗೂ ವರ್ಕಿಂಗ್ ಕಮಿಟಿ ಮಧ್ಯೆ ನಡೆಯುತ್ತವೆ ಎಂದು ಹೇಳಿದರು.

ಲೋಕ ಚುನಾವಣೆ ಸೋಲಿನ ಬಗ್ಗೆ ರಾಹುಲ್ ಹೇಳಿದ್ದೇನು? ಲೋಕ ಚುನಾವಣೆ ಸೋಲಿನ ಬಗ್ಗೆ ರಾಹುಲ್ ಹೇಳಿದ್ದೇನು?

ಪ್ರಶ್ನೆ ಕೇಳಿದಾಗ ವಕ್ತಾರ ರಣದೀಪ್ ಸುರ್ಜೇವಾಲಾ ಅವರು ಆ ಪ್ರಶ್ನೆಯನ್ನು ಬದಿಗೆ ಸರಿಸಲು ಸಹ ಯತ್ನಿಸಿದರೂ, ಆದರೂ ರಾಹುಲ್ ಗಾಂಧಿ ಅವರು ಉತ್ತರಿಸಿದರು. ರಾಹುಲ್ ಅವರ ಉತ್ತರ ಗಮನಿಸಿದರೆ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವ ಯಾವುದೇ ಸಂಭವ ಇದ್ದಂತೆ ಕಾಣಲಿಲ್ಲ.

Rahul Gandhi may resign to AICC president post

ಆದರೆ ಮತ್ತೊಂದು ಸುದ್ದಿಯ ಪ್ರಕಾರ, ರಾಹುಲ್ ಗಾಂಧಿ ಅವರು ಸೋಲಿಗೆ ನೈತಿಕ ಜವಾಬ್ದಾರಿ ವಹಿಸಿಕೊಂಡು ರಾಜೀನಾಮೆ ನೀಡಲು ಮುಂದಾಗಿದ್ದರು ಆದರೆ ಅವರ ತಾಯಿ ಸೋನಿಯಾ ಗಾಂಧಿ ಅವರು ರಾಹುಲ್ ಅವರನ್ನು ತಡೆದರು ಎನ್ನಲಾಗಿದೆ.

ಅಮೇಥಿಯಲ್ಲಿ ರಾಹುಲ್ ಗಾಂಧಿಗೆ ಆಘಾತ: ಮೊದಲ ಸೋಲು! ಅಮೇಥಿಯಲ್ಲಿ ರಾಹುಲ್ ಗಾಂಧಿಗೆ ಆಘಾತ: ಮೊದಲ ಸೋಲು!

ಆದರೆ ಕಾಂಗ್ರೆಸ್‌ ಪಕ್ಷದಲ್ಲಿ ಮುಂದಿನ ದಿನಗಳಲ್ಲಿ ಭಾರಿ ಬದಲಾವಣೆ ಆಗುವ ಎಲ್ಲ ಸಂಭವ ಇದ್ದು, ಪ್ರಿಯಾಂಕಾ ಗಾಂಧಿ ಅವರಿಗೆ ಇನ್ನೂ ಹೆಚ್ಚಿನ ಜವಾಬ್ದಾರಿ ನೀಡಲಾಗುವುದು ಎನ್ನಲಾಗಿದೆ.

English summary
Rahul Gandhi may resign to AICC president post. He said working committee and i will discuss about that.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X