ಧ್ವೇಷ ಮಾರುಕಟ್ಟೆಯಲ್ಲಿ ಪ್ರೀತಿಯ ಅಂಗಡಿ: ಬಿಎಸ್‌ಪಿ ನಾಯಕನ ಭೇಟಿ ಮಾಡಿ 'ರಾಗಾ' ಹೇಳಿಕೆ
ನವದೆಹಲಿ, ಸೆಪ್ಟಂಬರ್ 22: ಇಂದು ಕೊನೆಗೊಂಡ ಸಂಸತ್ ವಿಶೇಷ ಅಧಿವೇಶನ ಸಂದರ್ಭದಲ್ಲಿ ಲೋಕಸಭೆಯಲ್ಲಿ ಬಹುಜನ ಸಮಾಜ ಪಕ್ಷದ (BSP) ನಾಯಕನ ವಿರುದ್ಧ ಬಿಜೆಪಿ ಸಂಸದ ರಮೇಶ್ ಬಿಧುರಿ ಅವರು ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ. ಇಂತಹ ಕೋಲಾಹಲ ಬೆನ್ನಲ್ಲೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶುಕ್ರವಾರ (BSP) ಸಂಸದ ಡ್ಯಾನಿಶ್ ಅಲಿ ಅವರನ್ನು ದೆಹಲಿಯ ತಮ್ಮ ನಿವಾಸಕ್ಕೆ ಭೇಟಿ ಮಾಡಿ ಮಾತುಕತೆ ನಡೆಸಿದರು.
ಬಿಎಸ್‌ಪಿಯ ಡ್ಯಾನಿಶ್ ಅಲಿ ಅವರನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರ ಜೊತೆಗೆ ಮಾತನಾಡಿದ ರಾಹುಲ್ ಗಾಂಧಿ, ಬಿಜೆಪಿ ವಿರುದ್ಧ ಹರಿಹಾಯ್ದರು. ದ್ವೇಷದ ಮಾರುಕಟ್ಟೆಯಲ್ಲಿ ಪ್ರೀತಿಯ ಅಂಗಡಿಯನ್ನು ತೆರೆಯಲಾಗಿದೆ (ನಫ್ರತ್ ಕೆ ಬಜಾರ್ ಮೇ ಮೊಹಬ್ಬತ್ ಕಿ ದುಕಾನ್)ಎಂದರಲ್ಲದೇ ಡ್ಯಾನಿಶ್ ಅಲಿ ಅವರು ಭಾವನಾತ್ಮಕವಾಗಿ ಮಾತನಾಡಿದ್ದಾರೆ. ಅವರು ಒಂಟಿಯಾಗಿಲ್ಲ ಎಂದು ಅವರು ತಿಳಿಸಿದರು.

ರಾಹುಲ್ ಗಾಂಧಿ ನನ್ನ ನೈತಿಕ ಸ್ಥೈರ್ಯ ಹೆಚ್ಚಿಸಲು ಇಲ್ಲಿಗೆ ಬಂದಿದ್ದಾರೆ. ಯಾರದ್ದೋ ಹೇಳಿಕೆಗಳು, ಆರೋಪಗಳಿಗೆ ಹೆಚ್ಚಿನ ಆದ್ಯತೆ ಕೊಡದೆ ಆರೋಗ್ಯವನ್ನು ಕಾಪಾಡಿಕೊಳ್ಳಿ ಎಂದು ಸಲಹೆ ನೀಡಿದ್ದಾರೆ. ನಾನು ಒಬ್ಬಂಟಿಯಾಗಿಲ್ಲ ಎಂದು ಡ್ಯಾನಿಶ್ ಅಲಿ ಅವರು ಸಮಾಧಾನದ ಮಾತುಗಳನ್ನಾಡಿದರು. ಇದು ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮೇಲಿನ ದಾಳಿ ಎಂದು BSP ನಾಯಕರು ಟೀಕಾ ಪ್ರಹಾರ ನಡೆಸಿದರು.
BSP सांसद दानिश अली जी से मिलने उनके निवास पर पहुंचे @RahulGandhi जी।
— Congress (@INCIndia) September 22, 2023
कल भरी संसद में BJP सांसद रमेश बिधूड़ी ने दानिश अली जी का अपमान किया था, उन्हें बेहद अमर्यादित और असंसदीय अपशब्द कहे थे। और भाजपा के दो पूर्व मंत्री भद्दे ढंग से हंसते रहे।
रमेश बिधूड़ी की यह शर्मनाक और ओछी… pic.twitter.com/uQ7DXkUujT
ಬಿಜೆಪಿಯದ್ದ ದ್ವೇಷದ ಮನಸ್ಥಿತಿ: ಕಾಂಗ್ರೆಸ್
ರಾಹುಲ್ ಗಾಂಧಿ ಅವರ ಭೇಟಿಯ ಫೋಟೊಗಳನ್ನು ಹಂಚಿಕೊಂಡಿರುವ ಕಾಂಗ್ರೆಸ್, ಬಿಜೆಪಿ ನಾಯಕ ರಮೇಶ್ ಬಿಧುರಿಯ ಈ ನಾಚಿಕೆಗೇಡಿನ ಮತ್ತು ಕ್ಷುಲ್ಲಕ ಹೇಳಿಕೆಗಳು ಸದನದ ಘನತೆಗೆ ಕಳಂಕ ತಂದಿದೆ ಎಂದು ದೂರಿದೆ. ಪ್ರಜಾಪ್ರಭುತ್ವದ ದೇವಾಲಯದಲ್ಲಿ ಇಂತಹ ದ್ವೇಷ ಮತ್ತು ದ್ವೇಷದ ಮನಸ್ಥಿತಿ ಯನ್ನು ಪಕ್ಷವು ಬಲವಾಗಿ ವಿರೋಧಿಸುತ್ತದೆ ಎಂದು ತಿಳಿಸಿದೆ.

ಲೋಕಸಭೆಯಲ್ಲಿ ಚಂದ್ರಯಾನ-3 ಮಿಷನ್ ಕುರಿತ ಚರ್ಚೆಯ ವೇಳೆ ಬಿಜೆಪಿ ಸಂಸದ ರಮೇಶ್ ಬಿಧುರಿ ಅವರು ಡ್ಯಾನಿಶ್ ಅಲಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದರು. ಇದಕ್ಕೆ ವಿಪಕ್ಷಗಳು ವ್ಯಾಪಕ ಆಕ್ರೋಶ ಹೊರಹಾಕಿದ ಪ್ರಸಂಗ ನಡೆಯಿತು. ಇದು ಸದನದಲ್ಲಿ ಕೋಲಾಹಲ ಏಳಲು ಕಾರಣವಾಯಿತು. ವಿಶೇಷ ಅಧಿವೇಶನದ ಕೊನೆ ದಿನ ಸದನ ಕೆಲವ ಹೊತ್ತು ಗೊಂದಲಮಯವಾಯಿತು.
ಶೋಕಾಸ್ ನೋಟಿಸ್ ಜಾರಿ
ವಿವಾದದ ಬೆನ್ನಲ್ಲೇ ಶುಕ್ರವಾರ ಬಿಜೆಪಿ ಸಂಸದ ರಮೇಶ್ ಬಿಧುರಿ ಅವರಿಗೆ ಶೋಕಾಸ್ ನೋಟಿಸ್ ಜಾರಿ ಮಾಡಿದೆ. ಇತ್ತ ವಿಪಕ್ಷಗಳಲ್ಲಿ ಪ್ರಮುಖ ಪಕ್ಷವಾದ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಅವರು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಗೆ ಪತ್ರ ಬರೆದಿದ್ದಾರೆ. ಬಿಜೆಪಿ ನಾಯಕನ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ.
ಬಿಎಸ್‌ಪಿ ನಾಯಕ ಬೇಟಿ ವೇಳೆ ರಾಹುಲ್ ಗಾಂಧಿ ವಿರುದ್ಧ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಮತ್ತು ಸಂಸದ ಇಮ್ರಾನ್ ಪ್ರತಾಪಘರ್ಹಿ ಉಪಸ್ಥಿತರಿದ್ದರು.












Click it and Unblock the Notifications