ಮೋದಿ ಉಪನಾಪ ಪ್ರಕರಣ: ಕೆಳ ನ್ಯಾಯಾಲಯದ ಆದೇಶಕ್ಕೆ ಪಾಟ್ನಾ ಹೈಕೋರ್ಟ್ ತಡೆ

ಪಾಟ್ನಾ, ಏಪ್ರಿಲ್. 24 : 'ಮೋದಿ ಉಪನಾಮ' ಮಾನನಷ್ಟ ಪ್ರಕರಣದಲ್ಲಿ ಕೆಳ ನ್ಯಾಯಾಲಯದ ಆದೇಶವನ್ನು ಮೇ 15 ರವರೆಗೆ ತಡೆಹಿಡಿಯುವ ಮೂಲಕ ಪಾಟ್ನಾ ಹೈಕೋರ್ಟ್ ಸೋಮವಾರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ರಿಲೀಫ್ ನೀಡಿದೆ.

ಇದಕ್ಕೂ ಮೊದಲು, 'ಮೋದಿ ಉಪನಾಮ' ಕುರಿತು 2019 ರ ರಾಹುಲ್ ಗಾಂಧಿಯವರ ಹೇಳಿಕೆಗಳ ವಿರುದ್ಧ ಬಿಹಾರದ ಮಾಜಿ ಉಪಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದ ಕೆಳ ನ್ಯಾಯಾಲಯ ರಾಹುಲ್ ಗಾಂಧಿಗೆ ಖುದ್ದು ಹಾಜರಾಗುವಂತೆ ಸೂಚಿಸಿತ್ತು. ಏಪ್ರಿಲ್ 12 ರಂದು ನ್ಯಾಯಾಲಯಕ್ಕೆ ಹಾಜರಾಗಲು ಮತ್ತು ಅವರ ವಾದವನ್ನು ಮಂಡಿಸುವಂತೆ ಪಾಟ್ನಾದ ಕೆಳ ನ್ಯಾಯಾಲಯವು ಕಾಂಗ್ರೆಸ್ ನಾಯಕರಿಗೆ ಆದೇಶಿಸಿತ್ತು.

Rahul Gandhi Modi Surname Case: Patna High Court Stay on Lower courts order

ಆದರೆ, ಏಪ್ರಿಲ್ 22 ರಂದು, ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಯಕ ಸುಶೀಲ್ ಕುಮಾರ್ ಮೋದಿ ಅವರು ತಮ್ಮ ವಿರುದ್ಧ ಹೂಡಿರುವ ಮಾನನಷ್ಟ ಮೊಕದ್ದಮೆಯಲ್ಲಿ ಕೆಳ ನ್ಯಾಯಾಲಯವು ಹೊರಡಿಸಿದ ಸಮನ್ಸ್ ಅನ್ನು ರದ್ದುಗೊಳಿಸುವಂತೆ ಕೋರಿ ರಾಹುಲ್ ಗಾಂಧಿ ಅವರು ಪಾಟ್ನಾ ಹೈಕೋರ್ಟ್‌ಗೆ ಮೊರೆ ಹೋಗಿದ್ದರು.

"ನಾವು ಸಮನ್ಸ್ ರದ್ದುಪಡಿಸುವ ಅರ್ಜಿಯನ್ನು ಸಲ್ಲಿಸಿದ್ದೇವೆ. ಒಂದು ವಿಷಯವು ಈಗಾಗಲೇ ಸೂರತ್ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವಾಗ, ಅದೇ ವಿಷಯದಲ್ಲಿ ಬೇರೆ ನ್ಯಾಯಾಲಯದಲ್ಲಿ ಮತ್ತೊಂದು ವಿಚಾರಣೆಯನ್ನು ನಡೆಸಲಾಗುವುದಿಲ್ಲ. ಇದು ಕಾನೂನುಬಾಹಿರವಾಗಿದೆ. ಮುಂದಿನ ವಿಚಾರಣೆ ಮೇ 15 ರಂದು ನಡೆಯಲಿದ್ದು, ಅಲ್ಲಿಯವರೆಗೆ ಕೆಳ ನ್ಯಾಯಾಲಯದ ಎಲ್ಲಾ ಪ್ರಕ್ರಿಯೆಗಳಿಗೆ ತಡೆ ನೀಡಲಾಗಿದೆ" ಎಂದು ರಾಹುಲ್ ಗಾಂಧಿ ಪರ ವಕೀಲ ವೀರೇಂದ್ರ ರಾಥೋಡ್ ಎಎನ್‌ಐಗೆ ತಿಳಿಸಿದ್ದಾರೆ.

ರಾಹುಲ್ ಗಾಂಧಿಯವರ ಹೇಳಿಕೆಗಳ ಮೇಲೆ ಈಗಾಗಲೇ ಸೂರತ್ ನ್ಯಾಯಾಲಯ ದೋಷಿ ಎಂದು ಘೋಷಿಸಿದೆ. ನಂತರ ಅವರನ್ನು ಲೋಕಸಭಾ ಸದಸ್ಯ ಸ್ಥಾನದಿಂದ ಅನರ್ಹಗೊಳಿಸಲಾಯಿತು. ಪ್ರೋಟೋಕಾಲ್‌ಗಳ ಪ್ರಕಾರ ಅವರು ಶನಿವಾರ ತಮ್ಮ ಅಧಿಕೃತ ತುಘಲಕ್ ಲೇನ್‌ನಲ್ಲಿರುವ ಬಂಗಲೆಯನ್ನು ಖಾಲಿ ಮಾಡಿದ್ದಾರೆ. 2004ರ ಲೋಕಸಭೆ ಚುನಾವಣೆಯಲ್ಲಿ ಅಮೇಠಿಯಿಂದ ಗೆದ್ದ ನಂತರ ಅವರಿಗೆ ಮೊದಲು ಬಂಗಲೆ ಮಂಜೂರು ಮಾಡಲಾಗಿತ್ತು.

Rahul Gandhi Modi Surname Case: Patna High Court Stay on Lower courts order

ಕಾಂಗ್ರೆಸ್ ನಾಯಕ ತಮ್ಮ ಬಂಗಲೆಯನ್ನು ಖಾಲಿ ಮಾಡಿ ದೆಹಲಿಯಲ್ಲಿರುವ ತಾಯಿ ಸೋನಿಯಾ ಗಾಂಧಿಯವರ ನಿವಾಸಕ್ಕೆ ಸ್ಥಳಾಂತರಗೊಂಡಿದ್ದು, "ಸತ್ಯವನ್ನು ಮಾತನಾಡುವುದಕ್ಕೆ ಬೆಲೆ ತೆತ್ತಿರುವುದಾಗಿ" ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+