• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ರಾಹುಲ್ ಗಾಂಧಿ ನಾಪತ್ತೆಯಾಗಿಲ್ಲ: ಕಾಂಗ್ರೆಸ್ ಟ್ವಿಟ್ಟುತ್ತರ

|

ನವದೆಹಲಿ, ಸೆಪ್ಟೆಂಬರ್. 28: ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ನಾಪತ್ತೆಯಾಗಿದ್ದಾರೆ. ಸಾರ್ವಜನಿಕ ವೇದಿಕೆಯಲ್ಲಿ ಕಾಣಿಸಿಕೊಳ್ಳುತ್ತಿಲ್ಲ. ಮುಗಿದು ಹೋದ ಸಮಾವೇಶಕ್ಕೆ ತೆರಳಿದ್ದಾರೆ ಎಂದು ಬಿಜೆಪಿ ಮಾಡಿದ್ದ ಆರೋಪಗಳಿಗೆ ಕಾಂಗ್ರೆಸ್ ಟ್ವೀಟ್ ಮೂಲಕ ಉತ್ತರ ನೀಡಿದೆ.

ಕಳೆದ ಕೆಲ ದಿನಗಳಿಂದ ಕಣ್ಮರೆಯಾಗಿದ್ದ ಕಾಂಗ್ರೆಸ್‌ ಉಪಾಧ್ಯಕ್ಷ ರಾಹುಲ್‌ ಗಾಂಧಿ ‘ಆಸ್ಪೆನ್‌' ಸಮಾವೇಶದಲ್ಲಿ ಭಾಗವಹಿಸಿದ್ದಾರೆ ಎಂದು ಕಾಂಗ್ರೆಸ್ ಸೋಮವಾರ ಬೆಳಗ್ಗೆ ಟ್ವಿಟ್ ಮಾಡಿದೆ. ಅಲ್ಲದೇ ರಾಹುಲ್ ಗಾಂಧಿ ಸಮಾವೇಶದಲ್ಲಿ ಭಾಗವಹಿಸಿರುವ ಫೋಟೋ ಮತ್ತು ವಿಡಿಯೋವನ್ನು ಅಪ್ ಲೋಡ್ ಮಾಡಲಾಗಿದೆ.

Rahul Gandhi not 'missing': Congress vice president tweets his photo from Aspen

ಈ ಮೂಲಕ ಕಾಂಗ್ರೆಸ್ ತನ್ನ ಕಾರ್ಯಕರ್ತರಿಗೆ ಮಾಹಿತಿ ನೀಡಿದ್ದರೆ ಬಿಜೆಪಿಗೆ ತಕ್ಕ ಉತ್ತರ ರವಾನಿಸಿದೆ. ರಾಹುಲ್ ಗಾಂಧಿ ಜಾಗತಿಕ ಅರ್ಥ ವ್ಯವಸ್ಥೆಯ ಬಗ್ಗೆ ಅಧ್ಯಯನ ನಡೆಸಲು ಸಮಾವೇಶದಲ್ಲಿ ಪಾಲ್ಗೊಂಡಿದ್ದಾರೆ ಎಂದು ತಿಳಿಸಿದೆ.

ಜಾಗತಿಕ ಹಣಕಾಸು ವ್ಯವಸ್ಥೆ, ತಂತ್ರಜ್ಞಾನ ಕುರಿತಂತೆ ಈ ಅಸ್ಪೆನ್‌ ಸಮಾವೇಶದಲ್ಲಿ ಚರ್ಚೆ ನಡೆಸಲಾಗುತ್ತಿದೆ. ರಾಹುಲ್ ಗಾಂಧಿಯವರ ಬಗ್ಗೆ ಮಾತನಾಡುತ್ತ ಬಿಜೆಪಿ ವಕ್ತಾರ ನರಸಿಂಹ ರಾವ್, ಮುಗಿದು ಹೋದ ಸಮಾವೇಶಕ್ಕೆ ರಾಹುಲ್ ಗಾಂಧಿ ತೆರಳಿದ್ದಾರೆ ಎಂದು ಕಾಂಗ್ರೆಸ್ ಹೇಳುತ್ತಿದ್ದು ಜನರನ್ನು ದಿಕ್ಕು ತಪ್ಪಿಸುತ್ತಿದೆ ಎಂದು ಆರೋಪ ಮಾಡಿದ್ದರು. ಸಮಾವೇಶ ಜುಲೈ ತಿಂಗಳಲ್ಲೇ ಅಂತ್ಯವಾಗಿದೆ ಎಂದು ಹೇಳಿದ್ದರು.

lok-sabha-home

ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Read in English: Rahul Gandhi not 'missing'!
English summary
Amidst reports that he is in the United States on second Sabbatical, Congress vice president Rahul Gandhi has tweeted a picture of himself, attending conference in Aspen, Colorado.Congress has been claiming that Rahul Gandhi has gone to US to attend 'New Media and International Affairs Conference' in Colorado. Apparently Rahul Gandhi has tweeted his picture to silence BJP which termed his visit to US a "forced vacation".

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more