ಸೋಮನಾಥ ದೇವಾಲಯದಿಂದ ಗುಜರಾತ್ ಪ್ರವಾಸ ಆರಂಭಿಸಿದ ರಾಹುಲ್

ಅಹಮದಾಬಾದ್, ನವೆಂಬರ್ 29: ತಮ್ಮ ಎರಡು ದಿನಗಳ ಗುಜರಾತ್ ಪ್ರವಾಸ ಆರಂಭಿಸುವ ಮುನ್ನ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಐತಿಹಾಸಿಕ ಸೋಮನಾಥ ದೇವಾಲಯಕ್ಕೆ ಇಂದು ಭೇಟಿ ನೀಡಿ ಪೂಜೆ ಸಲ್ಲಿಸಿದರು.

ನಂತರ ಚುನಾವಣಾ ಪ್ರಚಾರಕ್ಕೆ ತೆರಳಿದ ರಾಹುಲ್ ಗಾಂಧಿ ಗಿರ್ ಸೋಮನಾಥ್, ವಿಸಾವಡರ್, ಸವರ್ ಕುಂಡ್ಲಾದಲ್ಲಿ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದರು. ಈ ವೇಳೆ ಅವರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು.

ಇದಕ್ಕೂ ಮೊದಲು ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, ಕಳೆದ ಚುನಾವಣೆಯಲ್ಲಿ ನೀಡಿದ ಭರವಸೆಗಳಿಗೆ ಬಿಜೆಪಿ ಉತ್ತರದಾಯಿಯಾಗಿದೆ ಎಂದು ಹೇಳಿದ್ದಾರೆ. "ಗುಜರಾತ್ ನಲ್ಲಿ ಬಿಜೆಪಿ 22 ವರ್ಷ ಆಡಳಿತ ನಡೆಸಿದೆ. ಇದೀಗ ಜನರು ಉತ್ತರ ಕೇಳುತ್ತಿದ್ದಾರೆ," ಎಂದು ಅವರು ಹೇಳಿದ್ದಾರೆ.

Rahul Gandhi offers prayers at Somnath Temple before election campaign

ವಸತಿ ಬಗ್ಗೆ ಸರಕಾರವನ್ನು ತರಾಟೆಗೆ ತೆಗೆದುಕೊಂಡ ರಾಹುಲ್ ಗಾಂಧಿ, "2012ರಲ್ಲಿ ಪ್ರಧಾನಿ ನರೇಂದ್ರ ಮೋದಿ 50 ಲಕ್ಷ ಹೊಸ ಮನೆಗಳನ್ನು ನಿರ್ಮಾಣ ಮಾಡುವುದಾಗಿ ಹೇಳಿದ್ದರು. ಆದರೆ ನಿರ್ಮಾಣ ಮಾಡಿದ್ದು ಕೇವಲ 4.72 ಲಕ್ಷ ಮನೆಗಳನ್ನು ಮಾತ್ರ. ಪ್ರಧಾನಿಯವರಿಗೆ ತಮ್ಮ ಭರವಸೆ ಇಡೇರಿಸಲು 45 ವರ್ಷ ಬೇಕಾ?" ಎಂದು ಪ್ರಶ್ನಿಸಿದ್ದಾರೆ.

ರಾಹುಲ್ ಗಾಂಧಿ ಇಂದು ಮತ್ತು ನಾಳೆ ಗುಜರಾತ್ ನಲ್ಲಿ ಕನಿಷ್ಠ ಮೂರು ಜಿಲ್ಲೆಗಳಲ್ಲಿ ಸಮಾವೇಶಗಳನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.

ಇನ್ನೊಂದೆಡೆ ಡಿಸೆಂಬರ್ 9 ಮತ್ತು 14ರಂದು ನಡೆಯಲಿರುವ ರಾಜ್ಯ ವಿಧಾನಸಭೆ ಚುನಾವಣೆಗೆ ಪ್ರಧಾನಿ ನರೇಂದ್ರ ಮೋದಿ ಗುಜರಾತ್ ನಲ್ಲಿ ಬಿರುಸಿನ ಪ್ರಚಾರ ನಡೆಸುತ್ತಿದ್ದಾರೆ. ಒಟ್ಟು ಮೂರು ದಿನಗಳ ಕಾಲ ಅವರು ಭರ್ಜರಿ ಪ್ರವಾಸ ಕೈಗೊಳ್ಳಲಿದ್ದಾರೆ. ಡಿಸೆಂಬರ್ 18ರಂದು ವಿಧಾನಸಭೆ ಚುನಾವಣೆಯ ಮತಎಣಿಕೆ ನಡೆಯಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+