Rahul Gandhi: ವಯನಾಡು ಭೇಟಿ ಮುಂದೂಡಿದ ರಾಹುಲ್ ಗಾಂಧಿ, ಪ್ರಿಯಾಂಕಾ: ಕಾರಣವೇನು?

ಕೇರಳ, ಜುಲೈ 31: ಕೇರಳದ ಭೀಕರ ನೈಸರ್ಗಿಕ ವಿಕೋಪಗಳಲ್ಲಿ ಒಂದಾದ ವಯನಾಡಿನಲ್ಲಿ ಮಂಗಳವಾರ ಧಾರಾಕಾರ ಮಳೆಯಿಂದ ಉಂಟಾದ ಭಾರೀ ಭೂಕುಸಿತದಲ್ಲಿ 145 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ನೂರಾರು ಮಂದಿ ಇನ್ನೂ ಅವಶೇಷಗಳಡಿ ಸಿಲುಕಿರುವುದರಿಂದ, ಸಾವುನೋವುಗಳ ಭೀತಿ ಎದುರಾಗಿದೆ.

ಸೇನೆ ಮತ್ತು ಎನ್‌ಡಿಆರ್‌ಎಫ್ ಸೇರಿದಂತೆ ರಕ್ಷಣಾ ಏಜೆನ್ಸಿಗಳು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದು, ಭಾರತೀಯ ಹವಾಮಾನ ಇಲಾಖೆ (IMD) ಪರ್ವತ ಜಿಲ್ಲೆ ವಯನಾಡ್ ಮತ್ತು ಕೇರಳದ ಎಲ್ಲಾ ಉತ್ತರ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದೆ. ಇತ್ತ ಪ್ರತಿಕೂಲ ಹವಾಮಾನದಿಂದಾಗಿ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಅವರ ವಯನಾಡು ಭೇಟಿಯನ್ನು ಮುಂದೂಡಲಾಗಿದೆ.

Rahul Gandhi Priyanka postpone visit to landslide-hit Wayanad due to adverse weather conditions

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಇಂದು ವಯನಾಡ್‌ ಗೆ ಭೇಟಿ ನೀಡುವುದಾಗಿ ಹೇಳಿದ್ದರು. ಆದರೆ, ಹವಾಮಾನ ವೈಪರೀತ್ಯದಿಂದಾಗಿ ಭೂಕುಸಿತ ಪೀಡಿತ ವಯನಾಡು ಭೇಟಿಯನ್ನು ಮುಂದೂಡಿದ್ದಾರೆ. ಕಳೆದ ಹಲವು ದಿನಗಳಿಂದ ಡೆಬಿಡದೆ ಸುರಿಯುತ್ತಿರುವ ಮಳೆ ಮತ್ತು ಪ್ರತಿಕೂಲ ಹವಾಮಾನದಿಂದಾಗಿ ಆ ಜಾಗಕ್ಕೆ ಹೋಗುವುದು ಸುಲಭವಲ್ಲ. ಆದಷ್ಟು ಬೇಗ ಜಿಲ್ಲೆಗೆ ಭೇಟಿ ನೀಡುವುದಾಗಿ ಕಾಂಗ್ರೆಸ್ ಮುಖಂಡರು ತಿಳಿಸಿದ್ದಾರೆ.

ಭೂಕುಸಿತದಿಂದ ಹಾನಿಗೊಳಗಾದ ಕುಟುಂಬಗಳನ್ನು ಭೇಟಿ ಮಾಡಲು ಮತ್ತು ಪರಿಸ್ಥಿತಿಯನ್ನು ಅವಲೋಕಿಸಲು ಪ್ರಿಯಾಂಕಾ ಮತ್ತು ನಾನು ವಯನಾಡ್‌ಗೆ ಭೇಟಿ ನೀಡಬೇಕಿತ್ತು. ಆದರೆ, ನಿರಂತರ ಮಳೆ ಮತ್ತು ಪ್ರತಿಕೂಲ ಹವಾಮಾನದಿಂದಾಗಿ ನಮಗೆ ತಿಳಿಸಲಾಗಿದೆ. ನಾವು ವಿಮಾನದಲ್ಲಿ ಅಲ್ಲಿಗೆ ಬರಲು ಸಾಧ್ಯವಾಗುವುದಿಲ್ಲ ಎಂದು ರಾಹುಲ್ ಗಾಂಧಿ ತಮ್ಮ ಎಕ್ಸ್​ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಆದಷ್ಟು ಬೇಗ ಜಿಲ್ಲೆಗೆ ಭೇಟಿ ನೀಡುವುದಾಗಿ ವಯನಾಡ್ ಜನತೆಗೆ ಭರವಸೆ ನೀಡಿದ ರಾಹುಲ್ ಗಾಂಧಿ, ಈ ಮಧ್ಯೆ ನಾವು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುವುದನ್ನು ಮುಂದುವರಿಸುತ್ತೇವೆ ಮತ್ತು ಅಗತ್ಯವಿರುವ ಎಲ್ಲಾ ನೆರವು ನೀಡುತ್ತೇವೆ ಎಂದು ಹೇಳಿದರು.

ಕೇರಳದ ಅತ್ಯಂತ ಭೀಕರ ನೈಸರ್ಗಿಕ ವಿಕೋಪಗಳಲ್ಲಿ ಒಂದಾದ ವಯನಾಡಿನಲ್ಲಿ ಮಂಗಳವಾರ ಧಾರಾಕಾರ ಮಳೆಯಿಂದ ಉಂಟಾದ ಭಾರೀ ಭೂಕುಸಿತದಿಂದಾಗಿ 145ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ. ನೂರಾರು ಜನರು ಕಾಣೆಯಾಗಿದ್ದು, ಶೋಧಕಾರ್ಯಚರಣೆಯನ್ನ ನಡೆಸುತ್ತಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+